ಕ್ಷಮಿಸಿ ಕರ್ನಾಟಕ; ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ಸೋನು ನಿಗಮ್

Date:

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ್ದಾರೆ. ಕನ್ನಡ ಚಿತ್ರರಂಗದಿಂದ ಸೋನು ನಿಗಮ್‌ ಅವರನ್ನು ನಿಷೇಧಿಸಿದ ಬಳಿಕ “ಕ್ಷಮಿಸಿ ಕರ್ನಾಟಕ” ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -

“ಕ್ಷಮಿಸಿ ಕರ್ನಾಟಕ. ನಿಮ್ಮ ಮೇಲೆ ನನಗಿರುವ ಪ್ರೀತಿ ನನ್ನ ಅಹಂಗಿಂತ ದೊಡ್ಡದು. ಸದಾ ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಸೋನು ನಿಗಮ್ ತನ್ನ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? BREAKING NEWS | ವಿವಾದಾತ್ಮಕ ಹೇಳಿಕೆ; ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಮ್‌ ನಿಷೇಧ

ಏಪ್ರಿಲ್ 25ರಂದು ಬೆಂಗಳೂರಿನ ಅವಲಹಳ್ಳಿಯ ಖಾಸಗಿ ಕಾಲೇಜೊಂದರಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕನ್ನಡದ ಹಾಡು ಹಾಡುವಂತೆ ಕೇಳಿದ ವಿದ್ಯಾರ್ಥಿಗಳ ಮೇಲೆ ಹರಿಹಾಯ್ದ ಸೋನು ನಿಗಮ್, ‘ಕನ್ನಡ ಕನ್ನಡ ಇದೇ ಕಾರಣಕ್ಕೆ ಪಹಲ್ಗಾಮ್ ದಾಳಿಯಾಗಿದ್ದು’ ಎಂದು ಹೇಳಿದ್ದರು.

ಸೋನು ನಿಗಮ್ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಚಿತ್ರರಂಗದಿಂದ ಅವರನ್ನು ನಿಷೇಧಿಸಬೇಕೆಂಬ ಆಗ್ರಹಗಳೂ ಕೇಳಿಬಂದಿತ್ತು. ಈ ಒತ್ತಾಯದ ಬೆನ್ನಲ್ಲೇ ಫಿಲ್ಮ್‌ ಚೇಂಬರ್‌ನ ಪದಾಧಿಕಾರಿಗಳು, ಸಂಗೀತ ನಿರ್ದೇಶಕರು, ಗಾಯಕರು, ನಿರ್ಮಾಪಕರ ಸಭೆ ನಡೆಸಿ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.

ಕ್ಷಮೆ ಕೇಳುವವರೆಗೂ ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಲಾಗುವುದು ಎಂದು ಹೇಳಿದೆ. ಫಿಲ್ಮ್‌ ಚೇಂಬರ್‌ ಈ ನಿರ್ಧಾರ ಕೈಗೊಳ್ಳುವವರೆಗೂ ಸೋನು ನಿಗಮ್ ಕ್ಷಮೆ ಕೇಳಿರಲಿಲ್ಲ. ಆದರೆ ನಿನ್ನೆ ರಾತ್ರಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ ಕ್ಷಮೆಯಾಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...