ಸೌಜನ್ಯ ಪ್ರಕರಣ | ಮರುತನಿಖೆ ಕೋರಿದ್ದ ಅರ್ಜಿ: ಸರ್ಕಾರ, ಸಿಬಿಐಗೆ ಹೈಕೋರ್ಟ್‌ ನೋಟಿಸ್‌

Date:

Advertisements

ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ/ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

ಮೃತ ಬಾಲಕಿಯ ತಂದೆ ಧರ್ಮಸ್ಥಳದ ಪಾಂಗಳದ ನಿವಾಸಿ ಚಂದಪ್ಪ ಗೌಡ ಅವರು ಸಲ್ಲಿಸಿದ ರಿಟ್‌ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೀಠವು ನಡೆಸಿತು. ವಿಚಾರಣೆಯ ವೇಳೆ ಅರ್ಜಿದಾರರ ಪರ ಹಿರಿಯ ವಕೀಲರಾದ ಎಂ ಆರ್‌ ಬಾಲಕೃಷ್ಣ ವಾದ ಮಂಡಿಸಿದರು.

“ಪ್ರಕರಣದಿಂದ ಸಂತೋಷ್‌ ರಾವ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ. ಮೇಲ್ಮನವಿಯ ಜೊತೆಗೆ ಈ ಅರ್ಜಿಯನ್ನೂ ವಿಚಾರಣೆಗೆ ನಿಗದಿಗೊಳಿಸಬೇಕು” ಎಂದು ಅವರು ಮನವಿ ಮಾಡಿದರು.

̆̆̆̆̆̆̆qqqq

ಇದನ್ನು ಪರಿಗಣಿಸಿದ ಪೀಠ ರೋಸ್ಟರ್‌ ಅನುಸಾರ ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಯವರಿಗೆ ಸೂಚಿಸಿದೆ.

Advertisements
Bose Military School

ರಾಜ್ಯ ಗೃಹಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವೆಗಳ ವಿಭಾಗದ ಎಡಿಜಿಪಿ, ದಕ್ಷಿಣಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ,ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ, ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ. ಖುಲಾಸೆಗೊಂಡಿರುವ ಆರೋಪಿ ಸುಂತೋಷ್‌ ರಾವ್‌ ಹತ್ತನೇ ಪ್ರತಿವಾದಿಯಾಗಿದ್ದಾರೆ.

ಆರೋಪಿ ಸಂತೋಷ್‌ ರಾವ್‌ ನಿರಪರಾಧಿ, ಆತನ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲ ಎಂದು ಜೂನ್‌ ೧೬ರಂದು ಸೆಷನ್ಸ್‌ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಈ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಕಳೆದ ಎಂಟು ತಿಂಗಳಿನಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ದಕ್ಷಿಣಕನ್ನಡದಲ್ಲಿ ಈಗಲೂ ಪ್ರತಿಭಟನೆಗಳು ನಡೆಯುತ್ತಿವೆ. ಸರ್ಕಾರ ಮರು ತನಿಖೆಗೆ ಆದೇಶ ನೀಡಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ. ಈಗ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಕೆಯಾಗಿ ವಿಚಾರಣೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ, ದಾವಣಗೆರೆ | ಭದ್ರಾ ಬಲದಂಡೆಯಿಂದ ಕುಡಿಯುವ ನೀರು ಹರಿಸಲು ಐಐಎಸ್‌ಸಿ ವರದಿ, ನಾಲೆ ಜಲಾಶಯಕ್ಕೆ ತೊಂದರೆ ಇಲ್ಲ

ಭದ್ರಾ ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕು ಹಾಗೂ ಚಿಕ್ಕಮಗಳೂರು...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ...

ಹೆಚ್ಚುತ್ತಿರುವ ಹೃದಯಾಘಾತ | ಡಾ. ರವೀಂದ್ರನಾಥ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ

ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ...

ಪತ್ರಿಕಾ ದಿನಾಚರಣೆ | ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ: ಸಿಎಂ ಸಿದ್ದರಾಮಯ್ಯ

ಇಂದಿನ ಬಹುತೇಕ ಮಾಧ್ಯಮಗಳು ಸುಳ್ಳು ಸುದ್ದಿಗೆ ಹೆಚ್ಚು ಒತ್ತು ನೀಡಿವೆ. ಇದರಿಂದ...

Download Eedina App Android / iOS

X