ಸೌಜನ್ಯ ಪ್ರಕರಣ: ಹರ್ಷೇಂದ್ರ ಕುಮಾರ್‌ಗೆ ಎಸ್‌ಐಟಿ ನೋಟಿಸ್ ಸಾಧ್ಯತೆ

Date:

ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ಶೀಘ್ರದಲ್ಲೇ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ ಎಂದು ‘ಬಿಎಲ್‌ಆರ್‌ಪೋಸ್ಟ್.ಕಾಮ್’ (Blrpost.com) ವರದಿ ಮಾಡಿದೆ. ಗೃಹ ಇಲಾಖೆಯ ಉನ್ನತ ಮೂಲಗಳನ್ನು ಉಲ್ಲೇಖಿಸಿರುವ ಈ ವರದಿಯು, ಈಗಾಗಲೇ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಮಾತುಗಳಿದ್ದರೂ ಅದನ್ನು ಸ್ವತಂತ್ರವಾಗಿ ದೃಢಪಡಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದೆ.

- Advertisement -

ಪ್ರಕರಣದ ಸತ್ಯಾಸತ್ಯತೆ ಅರಿಯಲು ಹರ್ಷೇಂದ್ರ ಕುಮಾರ್ ಹೆಗ್ಗಡೆ ಹಾಗೂ ಇತರ ಕೆಲವರ ವಿಚಾರಣೆ ಅತ್ಯಗತ್ಯವಾಗಿದೆ ಎಂದು ತನಿಖಾ ತಂಡ ಭಾವಿಸಿದೆ. ಯಾರಿಗೂ ಅಂಜದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಸಜ್ಜಾಗಿರುವ ಎಸ್‌ಐಟಿ, ಹರ್ಷೇಂದ್ರ ಹೆಗ್ಗಡೆ ಅವರಿಗೆ ಅಧಿಕೃತವಾಗಿ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಗೃಹ ಇಲಾಖೆಯ ಮೂಲಗಳು ಸ್ಪಷ್ಟಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

2012ರ ಅಕ್ಟೋಬರ್ 9ರಂದು ಉಜಿರೆಯಲ್ಲಿ ಸೌಜನ್ಯ ನಾಪತ್ತೆಯಾಗಿದ್ದು, ಮರುದಿನ ಆಕೆಯ ಮೃತದೇಹ ಪತ್ತೆಯಾಗಿತ್ತು. ಈ ಮೊದಲು ಬೆಳ್ತಂಗಡಿ ಪೊಲೀಸ್, ಸಿಐಡಿ ಹಾಗೂ ಸಿಬಿಐ ತನಿಖೆ ನಡೆಸಿದ್ದವು. ಆದರೆ ಕಳೆದ ವರ್ಷ ಸಿಬಿಐ ನ್ಯಾಯಾಲಯವು ಏಕೈಕ ಆರೋಪಿ ಸಂತೋಷ್ ರಾವ್‌ನನ್ನು ಖುಲಾಸೆಗೊಳಿಸಿತ್ತು. ಬಳಿಕ, ಸಂತ್ರಸ್ತೆಯ ತಾಯಿಯ ಮೇಲ್ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ಸಮಗ್ರ ಮರುತನಿಖೆಗಾಗಿ ಹೊಸ ಎಸ್‌ಐಟಿ ರಚಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

Advertisements

ಈ ಮಹತ್ವದ ಬೆಳವಣಿಗೆಗಳ ನಡುವೆಯೇ, ಎಸ್‌ಐಟಿ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಎನ್. ಶಶಿಕುಮಾರ್ ಅವರನ್ನು ಆ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ. ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದ ಶಶಿಕುಮಾರ್, ವೈಯಕ್ತಿಕ ಕಾರಣಗಳಿಗಾಗಿ ತಮ್ಮನ್ನು ಈ ಹುದ್ದೆಯಿಂದ ಬಿಡುಗಡೆ ಮಾಡುವಂತೆ ವಿನಂತಿಸಿದ್ದರು. ಈ ಬದಲಾವಣೆ ಕುರಿತು ಸರ್ಕಾರದ ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

ಶಶಿಕುಮಾರ್ ಅವರ ನಿರ್ಗಮನದಿಂದ ತೆರವಾಗಿರುವ ಎಸ್‌ಐಟಿ ಮುಖ್ಯಸ್ಥ ಸ್ಥಾನಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಲಾಬೂರಾಮ್ ಅಥವಾ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಿಸುವ ಸಾಧ್ಯತೆಯಿದೆ. ಇದರ ಜೊತೆಗೆ, ತನಿಖಾ ತಂಡದಲ್ಲಿರುವ ಎಎಸ್ಪಿ ವೆಂಕಟೇಶ್ ಪ್ರಸನ್ನ ಅವರನ್ನೂ ವರ್ಗಾವಣೆ ಮಾಡುವ ನಿರೀಕ್ಷೆಯಿದ್ದು, ಅವರ ಸ್ಥಾನಕ್ಕೆ ಎಸಿಪಿ ಶ್ರೀನಿಧಿ ಅವರನ್ನು ತರುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಪ್ರಸ್ತುತ ಎಸ್‌ಐಟಿ ತಂಡವು ಈ ಹಿಂದೆ ತನಿಖೆ ನಡೆಸಿದ್ದ ಸುಮಾರು 15 ಪೊಲೀಸ್ ಅಧಿಕಾರಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದೆ. ಅಂದಿನ ಬೆಳ್ತಂಗಡಿ ಪಿಎಸ್ಐ ಯೋಗೀಶ್ ಕುಮಾರ್, ಇನ್ಸ್‌ಪೆಕ್ಟರ್ ಭಾಸ್ಕರ್ ರೈ ಮತ್ತು ಅಂದಿನ ಡಿವೈಎಸ್ಪಿ ರುದ್ರಮುನಿ ಅವರು ಈಗಾಗಲೇ ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಳೆಯ ಅಧಿಕಾರಿಗಳ ವಿಚಾರಣೆ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿದ ಬಳಿಕವಷ್ಟೇ ಇತರರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ತನಿಖಾ ತಂಡದ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

shashi kumar ips
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....