ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ಸೌಮ್ಯ ರೆಡ್ಡಿ ರಾಜೀನಾಮೆ; ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲದ್ದಕ್ಕೆ ಬೇಸರ

Date:

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಜಯನಗರದ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಮಾರು ಒಂದೂವರೆ ತಿಂಗಳ ಹಿಂದೆಯೇ ಅವರು ಎಐಸಿಸಿ (AICC) ಮಹಿಳಾ ಘಟಕದ ಅಧ್ಯಕ್ಷೆಗೆ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದು, ಇದೀಗ ಈ ವಿಚಾರ ಅಧಿಕೃತವಾಗಿ ಬಹಿರಂಗವಾಗಿದೆ.

- Advertisement -

ಹೈಕಮಾಂಡ್‌ಗೆ ಬರೆದಿರುವ ಪತ್ರದಲ್ಲಿ ತಮ್ಮ ಅಧಿಕಾರಾವಧಿಯ ಅನುಭವಗಳನ್ನು ಅವರು ಹಂಚಿಕೊಂಡಿದ್ದಾರೆ. “ನಾನು ಈ ಹುದ್ದೆಯನ್ನು ಕೇವಲ ಎರಡು ವರ್ಷಗಳ ಅವಧಿಗೆ ಮಾತ್ರ ವಹಿಸಿಕೊಂಡಿದ್ದೆ. ಈ ಅವಧಿಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ, ಮಹಿಳೆಯರ ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣದ ಬಗ್ಗೆ ಅರಿವು ಮೂಡಿಸಿ ಅವರನ್ನು ಪಕ್ಷದತ್ತ ಸೆಳೆದಿರುವುದು ನನಗೆ ಅತ್ಯಂತ ತೃಪ್ತಿ ತಂದಿದೆ. ಜೊತೆಗೆ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ದೊಡ್ಡಮಟ್ಟದ ‘ಮಹಿಳಾ ಕ್ರಾಂತಿ’ಯನ್ನೇ ಸೃಷ್ಟಿಸಿರುವುದನ್ನು ನಾನು ಖುದ್ದಾಗಿ ಕಂಡಿದ್ದೇನೆ” ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ರಾಜೀನಾಮೆ ಪತ್ರದಲ್ಲಿ ಪಕ್ಷದ ವರಿಷ್ಠರ ಗಮನಕ್ಕೆ ಪ್ರಮುಖ ವಿಚಾರವೊಂದನ್ನು ತಂದಿರುವ ಸೌಮ್ಯ ರೆಡ್ಡಿ, ಪ್ರಸ್ತುತ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ಸರ್ಕಾರದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರು ಇಲ್ಲದಿರುವ ಅಂಶವನ್ನು ಹೈಕಮಾಂಡ್ ಹಾಗೂ ನಾಯಕರ ಗಮನಕ್ಕೆ ತರುತ್ತೇನೆ” ಎಂದು ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ತಮ್ಮ ಮೇಲೆ ನಂಬಿಕೆಯಿಟ್ಟು ಈ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿ ಅಧ್ಯಕ್ಷರು, ಹಾಲಿ ಹಾಗೂ ಮಾಜಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಮತ್ತು ಪಕ್ಷದ ಎಲ್ಲ ಕಾರ್ಯಕರ್ತರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

​”ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ನಾನು ಮುಂದುವರಿಯಲಿದ್ದೇನೆ. 2028ರ ರಾಜ್ಯ ವಿಧಾನಸಭೆ ಹಾಗೂ 2029ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನನ್ನ ಸಂಪೂರ್ಣ ಬೆಂಬಲವಿರಲಿದೆ. ಜೊತೆಗೆ, ಪಕ್ಷವು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವವರೆಗೆ ನಾನೇ ಈ ಹುದ್ದೆಯ ಉಸ್ತುವಾರಿಯಾಗಿ ಮುಂದುವರಿಯಲಿದ್ದೇನೆ” ಎಂದು ಸೌಮ್ಯ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಿ: ಎಸ್.ಎಂ ಪಾಟೀಲ ಗಣಿಹಾರ

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ವಿಜಯಪುರ | ರೈತರಿಗೆ ಎಕರೆಗೆ ರೂ.25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14...