ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

Date:

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ ‘ಕಸ್ತೂರಿ ರಂಗನ್ ವರದಿ’ಯ ಕರಡು ಅಧಿಸೂಚನೆ ಕುರಿತು ಚರ್ಚಿಸಲು ಮತ್ತು ನಿರ್ಣಯ ಕೈಗೊಳ್ಳಲು ರಾಜ್ಯ ವಿಧಾನಮಂಡಲದ ಮೂರು ದಿನಗಳ ‘ವಿಶೇಷ ಅಧಿವೇಶನ’ ಇಂದಿನಿಂದ (ಸೆ.21) ಆರಂಭವಾಗಲಿದೆ. ವರದಿ ಜಾರಿಯಿಂದ ಎದುರಾಗುವ ಸಂಕಷ್ಟಗಳ ಜೊತೆಗೆ, ರಾಜ್ಯವನ್ನು ಕಾಡುತ್ತಿರುವ ಭೀಕರ ಬರಗಾಲ ಹಾಗೂ ರೈತರ ಸಮಸ್ಯೆಗಳ ಬಗ್ಗೆಯೂ ಈ ಕಲಾಪದಲ್ಲಿ ಗಂಭೀರ ಚರ್ಚೆ ನಡೆಯಲಿದೆ.

- Advertisement -

​ಪಶ್ಚಿಮ ಘಟ್ಟ ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ರಾಜ್ಯದ 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮವಲಯ ಎಂದು ಗುರುತಿಸಲಾಗಿದೆ. ಇದರಿಂದಾಗಿ 1,449 ಗ್ರಾಮಗಳ ನಿವಾಸಿಗಳ ಬದುಕು ಅತಂತ್ರವಾಗಲಿದ್ದು, ಆಡಳಿತ ಮತ್ತು ವಿಪಕ್ಷಗಳೆರಡೂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಸೆ.23ರವರೆಗೆ ನಡೆಯಲಿರುವ ವಿಶೇಷ ಅಧಿವೇಶನದಲ್ಲಿ, ಜನರ ಭಾವನೆಗಳಿಗೆ ಸ್ಪಂದಿಸಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವ ಮಹತ್ವದ ಒಮ್ಮತದ ನಿರ್ಣಯವನ್ನು ಉಭಯ ಸದನಗಳಲ್ಲಿ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

​ಈ ವಿಚಾರವಾಗಿ ಸೆಪ್ಟೆಂಬರ್ 27ರೊಳಗೆ ರಾಜ್ಯ ಸರ್ಕಾರ ತನ್ನ ಸ್ಪಷ್ಟ ನಿಲುವನ್ನು ಕೇಂದ್ರಕ್ಕೆ ರವಾನಿಸಬೇಕಿದೆ. ಹೀಗಾಗಿ ಭಾನುವಾರ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಕಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ಬಳಿಕ ಅರಣ್ಯದಂಚಿನ ಜನತೆ ಹಾಗೂ ರೈತರಿಂದ ಅಹವಾಲು ಸ್ವೀಕರಿಸಿದರು. “ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರವೂ ಈ ವರದಿಯನ್ನು ತಿರಸ್ಕರಿಸಿತ್ತು. ಆದರೆ ಕೇಂದ್ರ ಅದನ್ನು ಮತ್ತೆ ಕಳುಹಿಸಿದ್ದು, ಜನರ ಹಿತದೃಷ್ಟಿಯಿಂದ ಅಧಿವೇಶನದಲ್ಲಿ ಕಾಡಾನೆ ಹಾವಳಿ ಸೇರಿದಂತೆ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

​ಅಧಿವೇಶನದಲ್ಲಿ ವಿಸ್ತೃತ ಚರ್ಚೆಯ ಮೂಲಕ ರಾಜ್ಯದ ನಿಲುವನ್ನು ಅಂತಿಮಗೊಳಿಸಿದ ಬಳಿಕ, ಶಾಸಕರು ಹಾಗೂ ಸಂಸದರನ್ನೊಳಗೊಂಡ ಸರ್ವಪಕ್ಷ ನಿಯೋಗವನ್ನು ನವದೆಹಲಿಗೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿಯಾಗಿ, ವರದಿ ಅನುಷ್ಠಾನದಿಂದ ರಾಜ್ಯದ ಜನತೆಯ ಮೇಲಾಗುವ ದುಷ್ಪರಿಣಾಮಗಳು ಹಾಗೂ ರೈತರ ಆತಂಕದ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸರ್ಕಾರ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಮಾಸ್ಕೋ ಗುರಿಯಾಗಿಸಿ 1,000ಕ್ಕೂ ಹೆಚ್ಚು ಡ್ರೋನ್‌ಗಳ ಸುರಿಮಳೆ

ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಕ್ರೇನ್...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...