ಯುಗಾದಿ – ರಂಜಾನ್ ಹಬ್ಬಕ್ಕೆ ವಿಶೇಷ ರೈಲು; ಸಂಪೂರ್ಣ ವಿವರ

Date:

ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗುವ ಸಾಧ್ಯತೆಯಿದೆ. ದಟ್ಟಣೆ ನಿರ್ವಹಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಮತ್ತು ಚೆನ್ನೈನ ಪುರಚ್ಚಿ ತಲೈವರ್ ಡಾ.ಎಂಜಿ ರಾಮಚಂದ್ರನ್ ಸೆಂಟ್ರಲ್ ರೈಲ್ವೆ ನಿಲ್ದಾಣ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲಿಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

- Advertisement -

ಹಾಗೆಯೇ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಮತ್ತು ಬೆಳಗಾವಿ ನಡುವೆ ನಾಲ್ಕು ವಿಶೇಷ ರೈಲು ಸಂಚರಿಸಲಿವೆ. ಮೈಸೂರು- ಕಾರವಾರ, ಬೆಂಗಳೂರು- ಕಲಬುರಗಿ ನಡುವೆಯೂ ವಿಶೇಷ ರೈಲು ಸಂಚರಿಸಲಿವೆ. ಈಗಾಗಲೇ ರೈಲಿನ ವೇಳಾಪಟ್ಟಿ ಬಿಡುಗಡೆಯಾಗಿದೆ. ಬುಕ್ಕಿಂಗ್‌ ಕೂಡಾ ಶುರುವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಮೈಸೂರು-ಮನಮದುರೈ ನಡುವೆ ವಿಶೇಷ ರೈಲು ಸಂಚಾರ

ಕೆಎಸ್‌ಆರ್ ಬೆಂಗಳೂರು- ಡಾ. ಎಂಜಿ ರಾಮಚಂದ್ರನ್ ಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 07319) ಕೆಎಸ್‌ ಆರ್ ಬೆಂಗಳೂರಿನಿಂದ ಮಾ. 28ರಂದು ಬೆಳಗ್ಗೆ 8.05ಕ್ಕೆ ಹೊರಡಲಿದ್ದು, ಮಧ್ಯಾಹ್ನ 2.40ಕ್ಕೆ ಡಾ. ಎಂಜಿಆರ್ ಸೆಂಟ್ರಲ್ ನಿಲ್ದಾಣಕ್ಕೆ ತಲುಪಲಿದೆ.

ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಾ.28ರಂದು ಮಧ್ಯಾಹ್ನ 3.40ಕ್ಕೆ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್- ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 07320) ಹೊರಟು ಅದೇ ದಿನ ರಾತ್ರಿ 10.50ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ.

ಮಾ.28ರಂದು ರಾತ್ರಿ 9.35ಕ್ಕೆ ಮೈಸೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06203) ಮೈಸೂರಿನಿಂದ ಹೊರಡಲಿದ್ದು ಮರುದಿನ ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಅದೇ ರೈಲು (ರೈಲು ಸಂಖ್ಯೆ 06204) ಮಾ.29ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಡಲಿದೆ. ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.

ಇದನ್ನು ಓದಿದ್ದೀರಾ? ಯಶವಂತಪುರ – ಮುರುಡೇಶ್ವರ ಸಾಪ್ತಾಹಿಕ ವಿಶೇಷ ರೈಲು ಸೇವೆಯ ಅವಧಿ ವಿಸ್ತರಣೆ

ಮಾ.28 ರಂದು ರಾತ್ರಿ 9:15ಕ್ಕೆ ಬೆಂಗಳೂರಿನಿಂದ ಎಸ್‌ಎಂವಿಟಿ ಬೆಂಗಳೂರು- ಕಲಬುರಗಿ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06519) ಹೊರಡಲಿದ್ದು, ಮರುದಿನ ಬೆಳಿಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.

ಕಲಬುರಗಿ ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06520) ಮಾ.29ರಂದು ಬೆಳಗ್ಗೆ 9:35ಕ್ಕೆ ಕಲಬುರಗಿಯಿಂದ ಹೊರಡಲಿದೆ. ಅದೇ ದಿನ ರಾತ್ರಿ 8 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಬೆಳಗಾವಿಗೆ ನಾಲ್ಕು ವಿಶೇಷ ರೈಲು

ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06511) ಮಾರ್ಚ್ 28ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡಲಿದ್ದು, ಮರುದಿನ ಬೆಳಿಗ್ಗೆ 07:30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06512) ಮಾರ್ಚ್ 29ರಂದು ಸಂಜೆ 5 ಗಂಟೆಗೆ ಬೆಳಗಾವಿಯಿಂದ ಹೊರಡಲಿದೆ. ಮರುದಿನ ಮುಂಜಾನೆ 4:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಇದನ್ನು ಓದಿದ್ದೀರಾ? ಬೆಂಗಳೂರು – ಹೊಸ ಭುವನೇಶ್ವರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ

ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್‌ ರೈಲು (ರೈಲು ಸಂಖ್ಯೆ 06513) ಮಾರ್ಚ್ 30ರಂದು ಸಂಜೆ 7 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡಲಿದೆ. ಮರುದಿನ ಬೆಳಿಗ್ಗೆ 7:30 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ.

ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (ರೈಲು ಸಂಖ್ಯೆ 06514) ಮಾರ್ಚ್ 31ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಡಲಿದೆ. ಮರುದಿನ ಮುಂಜಾನೆ 4:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...