ಬೀದರ್‌ | ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

Date:

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನೆ ಮಾಡಿಕೊಳ್ಳಬೇಕು. ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ. ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಢ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ. ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು” ಎಂದು ತಿಳಿಸಿದರು.

“ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು. ಜಾತಿ ಸಮಾಜ ಚಲನೆ ಇಲ್ಲದ್ದು.‌ ಸಮಾಜವನ್ನು ಚಲನಶೀಲಗೊಳಿಸಲು ವಸ್ತುನಿಷ್ಠವಾದ ವೃತ್ತಿಪರತೆಯನ್ನು ಪತ್ರಕರ್ತರು ಪಾಲಿಸಬೇಕು. ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌. ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ” ಎಂದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ ಒಂದು ರೀತಿಯಲ್ಲಿ ಎಪ್‌ಸ್ಟೀನ್ ಫೈಲ್ಸ್‌ನಂತೆಯೇ: ಹಿರಿಯ ವಕೀಲ ಎಸ್‌ ಬಾಲನ್

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಆನಂದ್ ದೇವಪ್ಪ, ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕ ವಿಶ್ವೇಶ್ವರ ಭಟ್, ಸಂಸದ ಸಾಗರ್ ಖಂಡ್ರೆ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...