‘ಸ್ಪೂರ್ತಿಧಾಮ’ ನೀಡುವ ‘ಬೋಧಿವೃಕ್ಷ’ ಪ್ರಶಸ್ತಿಗೆ ಎಸ್‌.ಆರ್ ಹಿರೇಮಠ್‌ ಆಯ್ಕೆ

Date:

Advertisements

ಬೆಂಗಳೂರಿನ ‘ಸ್ಪೂರ್ತಿಧಾಮ’ ಕೊಡಮಾಡುವ ‘ಬೋಧಿವೃಕ್ಷ’ ಹಾಗೂ ‘ಬೋಧಿವರ್ಧನ’ ಪ್ರಶಸ್ತಿಗಳಿಗೆ ಈ ಬಾರಿ ಹಿರಿಯ ಹೋರಾಟಗಾರ ಎಸ್‌.ಆರ್‌ ಹಿರೇಮಠ್‌ ಹಾಗೂ ನಾಲ್ವರಿಗೆ ಆಯ್ಕೆಯಾಗಿದ್ದಾರೆ. ‘ಬೋಧಿವೃಕ್ಷ’ ಪ್ರಶಸ್ತಿಗೆ ಎಸ್‌.ಆರ್‌ ಹಿರೇಮಠ್ ಹಾಗೂ ‘ಬೋಧಿವರ್ಧನ’ ಪ್ರಶಸ್ತಿಗೆ ರಾಮ್‌ದೇವ್ ರಾಖೆ, ಸುಶೀಲ ನಾಡ, ಹಸನಬ್ಬ ಮತ್ತು ಜಿ.ಕೆ.ಪ್ರೇಮ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಗಳ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ‘ಸ್ಪೂರ್ತಿಧಾಮ’ದ ಅಧ್ಯಕ್ಷ ಎಸ್ ಮರಿಸ್ವಾಮಿ, “ಏಪ್ರಿಲ್ 14ರಂದು ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮವು ಏಪ್ರಿಲ್ 14ರ ಸಂಜೆ 5 ಗಂಟೆಗೆ ‘ಸ್ಪೂರ್ತಿಧಾಮ’ದ ಆಡಿಟೋರಿಯಂನಲ್ಲಿ ನಡೆಯಲಿದೆ. ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಶ್ರಾಂತ ಉಪಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಟಿ.ಆರ್.ಚಂದ್ರಶೇಖರ ಕಾರ್ಯಕ್ರಮದಲ್ಲಿ ಇರಲಿದ್ದಾರೆ” ಎಂದು ತಿಳಿಸಿದ್ದಾರೆ.

“ಕಳೆದ 16 ವರ್ಷಗಳಿಂದ ಅಂಬೇಡ್ಕರ್ ಜಯಂತಿಯನ್ನು ‘ಅಂಬೇಡ್ಕರ್ ಹಬ್ಬ’ವಾಗಿ ‘ಸ್ಪೂರ್ತಿಧಾಮ’ ಆಚರಿಸುತ್ತಿದೆ. ತಳಸ್ತರದವರ ಅಭಿವೃದ್ಧಿ ಮತ್ತು ಏಳಿಗೆಗಾಗಿ ದುಡಿದವರನ್ನು ಗುರುತಿಸುವ, ಗೌರವಿಸುವ ಸಲುವಾಗಿ ‘ಬೋಧಿವೃಕ್ಷ’ ಮತ್ತು ‘ಭೋಧಿವರ್ಧನ’ ಹೆಸರಿನ ರಾಷ್ಟ್ರ ಪ್ರಶಸ್ತಿಗಳನ್ನು ನೀಡುತ್ತಿದೆ. ‘ಬೋಧಿವೃಕ್ಷ’ ಪ್ರಶಸ್ತಿಗೆ ಪ್ರಶಸ್ತಿ ಫಲಕ ಮತ್ತು 1 ಲಕ್ಷ ರೂ. ನಗದು ಹಾಗೂ ಐದು ‘ಭೋಧಿವರ್ಧನ’ ಪ್ರಶಸ್ತಿಗೆ ಪ್ರಶಸ್ತಿ ಫಲಕ ಮತ್ತು ತಲಾ 25,000 ರೂ. ನಗದು ನೀಡಲಾಗುತ್ತದೆ” ಎಂದು ಹೇಳಿದ್ದಾರೆ.

Advertisements

ಬೋಧಿವೃಕ್ಷ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಆರ್.ಹಿರೇಮಠ್ ಅವರು ಭಾರತೀಯ ಪರಿಸರವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರರಾಗಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷರಾಗಿದ್ದು, ಅಕ್ರಮ ಗಣಿಗಾರಿಕೆ ವಿರುದ್ಧದ ನಿರಂತರ ಹೋರಾಟ ನಡೆಸಿದ್ದಾರೆ. ಅವರ ಹೋರಾಟದಿಂದಾಗಿ ಬಳ್ಳಾರಿ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸಹಾಯವಾಯಿತು. ಪ್ರಬಲ ಗಣಿ ನಿರ್ವಾಹಕರು, ರಾಜಕೀಯ ವ್ಯಕ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ನಿರ್ಭಯವಾಗಿ ಎದುರಿಸಿದ್ದಾರೆ. ಅವರಿಗೆ, ಭಾರತದ ಅತ್ಯುನ್ನತ ಪರಿಸರ ಗೌರವ ‘ಇಂದಿರಾ ಗಾಂಧಿ ಪರ್ಯಾವರಣ ಪುರಸ್ಕಾರ’ ಸಹ ದೊರೆತಿದೆ.

ಬೋಧಿವರ್ಧನ ಪ್ರಶಸ್ತಿ
ರಾಮ್‌ದೇವ್ ರಾಖೆ – ಅವರು ಅಂಬೇಡ್ಕರ್ ಚಿಂತನೆಗಳ ಹಾದಿಯಲ್ಲಿ ನಡೆಯುತ್ತಿದ್ದಾರೆ. ಧ್ವನಿ ಇಲ್ಲದವರ ಪರವಾಗಿ ‘ಶೋಷಿತ’ ಪತ್ರಿಕೆಯನ್ನು ಅವರು ಆರಂಭಿಸಿದ್ದರು. ಈಗ ಆ ಪತ್ರಿಕೆಯನ್ನು ‘ಪಂಚಮ’ ಎಂದು ಬದಲಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಹುಟ್ಟಿನಿಂದಲೂ ಅದರೊಂದಿಗಿದ್ದಾರೆ. ದಲಿತ ಚಳುವಳಿಯ ಮೊದಲ ಪೂರ್ಣಪ್ರಮಾಣದ ಕಾರ್ಯಕರ್ತ ರಾಮದೇವ್ ರಾಖೆ ಎಂದು ಕೊಟಿಗಾನಹಳ್ಳಿ ರಾಮಯ್ಯ ಬಣ್ಣಿಸಿದ್ದಾರೆ.

ಸುಶೀಲ ನಾಡ – ಮೈಸೂರು ಹಾಗೂ ಕೊಡಗು ಜಿಲ್ಲೆಯ ಜೇನುಕುರುಬ, ಬೆಟ್ಟಕುರುಬ, ಎರವ, ಸೋಲಿಗ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯ ಹಸಲರು ಹಾಗೂ ಗೊಂಡರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಹಾಗೂ ಮಲೆಕುಡಿಯರು ಮುಂತಾದ ಕರ್ನಾಟಕದ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದಲ್ಲಿ ಇವರು ಸಕ್ರಿಯರಾಗಿದ್ದಾರೆ ಮತ್ತು ಈ ಸಮುದಾಯಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಒಕ್ಕೂಟದ ಪ್ರಯತ್ನದಿಂದಾಗಿ ೧೨ ಅರಣ್ಯ ಮೂಲಬುಡಕಟ್ಟು ಸಮುದಾಯಗಳಿಗೆ ಅರಣ್ಯ ಹಕ್ಕು, ಪೌಷ್ಟಿಕ ಆಹಾರ, ಆಶ್ರಮ ಶಾಲೆಗಳ ಉನ್ನತೀಕರಣ ಸಾಧ್ಯವಾಗಿದೆ.

ಹಸನಬ್ಬ – ಕಳೆದ ಮೂರು ದಶಕಗಳಿಂದ ಬೆಳ್ತಂಗಡಿಯ ಚಾರ್ಮಡಿ ಘಾಟ್‌ನಲ್ಲಿ ಉಂಟಾಗುವ ಅಪಘಾತಗಳಲ್ಲಿ ಸಿಕ್ಕಿ ಗಾಯಗೊಂಡವರನ್ನು ಆಸ್ಪತ್ರಗೆ ಸಾಗಿಸಿ ಅವರಿಗೆ ಚಿಕಿತ್ಸೆ ಕೊಡಿಸಿ ಅವರ ಪ್ರಾಣ ಉಳಿಸುವ ಕಾರ್ಯಕ್ಕೆ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಹೀಗೆ ನೂರಾರು ಜೀವ ಉಳಿಸಿದ್ದಾರೆ. ಸರ್ಕಾರಿ ಆಂಬುಲೆನ್ಸ್ಗಳು ತಡಮಾಡಿದಾಗ ಅವರು ತಮ್ಮ ಸ್ವಂತ ಗಾಡಿಯಲ್ಲಿ ಗಾಯಾಳುಗಳನ್ನು ಸಾಗಿಸಿ ಬದುಕಿಸಿದ್ದಾರೆ. ಹಸನಬ್ಬ ಅವರ ಈ ಕೆಲಸವನ್ನು ಮೆಚ್ಚಿ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ಜಿ.ಕೆ.ಪ್ರೇಮ – ಕರ್ನಾಟಕದ ಕೆಲ ಭಾಗಗಳಲ್ಲಿ ಋತುಮತಿ ಆದ ಹೆಣ್ಣು ಮಕ್ಕಳನ್ನು ಮನೆಯಿಂದ ಹೊರಗೆ ಒಂದು ಸಣ್ಣ ಗುಡಿಸಿಲಿನಲ್ಲಿ ಅಥವಾ ಮರದ ಕೆಳಗೆ ಬಿಟ್ಟುಬರುವುದು ಒಂದು ವಾಡಿಕೆ. ನಂತರ ಪ್ರತಿ ಸಾರಿ ಮುಟ್ಟಾದಾಗ ಅವರು ಹೀಗೇ ಇರಬೇಕಾಗುತ್ತದೆ. ಅನೇಕ ವೇಳೆ ಹಾವು ಕಚ್ಚಿ ಅಥವಾ ಇನ್ಯಾವುದೋ ಕಾರಣಕ್ಕೆ ಅನೇಕರು ಪ್ರಾಣ ಕಳೆದುಕೊಂಡಿರುತ್ತಾರೆ. ಇಂತಹ ಒಂದು ಅನಿಷ್ಟ ಪದ್ಧತಿಯ ವಿರುದ್ಧ ಟೊಂಕ ಕಟ್ಟಿ ನಿಂತಿರುವವರು ಜಿ.ಕೆ.ಪ್ರೇಮ. ಅವರ ಈ ಪ್ರಯತ್ನದಿಂದಾಗಿ ಅವರ ಕಾಡುಗೊಲ್ಲ ಸಮುದಾಯದ ಮಹಿಳೆಯರು ಈ ಪದ್ಧತಿಯಿಂದ ಹೊರಬರಲು ಸಾಧ್ಯವಾಗಿದೆ. ತುಮಕೂರು, ಚಿತ್ರದುರ್ಗ ಚಿಕ್ಕಮಗಳೂರು, ಹಾಸನ, ಬಳ್ಳಾರಿ ಜಿಲ್ಲೆಗಳ ಕನಿಷ್ಠ 10 ಹಳ್ಳಿಗಳಲ್ಲಿ ಈ ಪದ್ಧತಿ ನಿಂತಿದೆ ಮತ್ತು ಇವರ ಶ್ರಮದಿಂದ ಇತರ ಹಳ್ಳಿಗಳವರೂ ಈ ಬಗ್ಗೆ ಯೋಚಿಸುವಂತಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X