ಶೃಂಗೇರಿ ಮರು ಮತ ಎಣಿಕೆ ವಿವಾದ: ಜುಲೈ 23ರವರೆಗೆ ಟಿ.ಡಿ. ರಾಜೇಗೌಡರೇ ಶಾಸಕ ಎಂದ ಸುಪ್ರೀಂ ಕೋರ್ಟ್

Date:

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಕಾಂಗ್ರೆಸ್ ನಾಯಕ ಟಿ.ಡಿ. ರಾಜೇಗೌಡ ಅವರು ಜುಲೈ 23ರವರೆಗೆ ಶಾಸಕರಾಗಿ ಮುಂದುವರಿಯಲಿದ್ದಾರೆ ಎಂದು ಇಂದು(ಮೇ 21) ಸ್ಪಷ್ಟಪಡಿಸಿದೆ. ಈ ಹಿಂದೆ ನೀಡಿದ್ದ ಆದೇಶವನ್ನು ವಿಸ್ತರಿಸಿರುವ ನ್ಯಾಯಾಲಯವು, ರಾಜೇಗೌಡರಿಗೆ ತಾತ್ಕಾಲಿಕ ಪರಿಹಾರ ನೀಡಿದೆ.

- Advertisement -

2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಟಿ.ಡಿ. ರಾಜೇಗೌಡ ಅವರು 59,171 ಮತಗಳನ್ನು ಪಡೆದು ಕೇವಲ 201 ಮತಗಳ ರೋಚಕ ಅಂತರದಿಂದ ಗೆಲುವು ಸಾಧಿಸಿದ್ದರು. ಅವರ ಪ್ರತಿಸ್ಪರ್ಧಿ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು 58,970 ಮತಗಳನ್ನು ಪಡೆದಿದ್ದರು. ಆದರೆ, ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಸುದೀರ್ಘ ವಾದ-ವಿವಾದಗಳನ್ನು ಆಲಿಸಿದ್ದ ಹೈಕೋರ್ಟ್, ಮರು ಮತ ಎಣಿಕೆಗೆ ಆದೇಶಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? IPL ರೋಚಕ ಘಟ್ಟ: 3 ತಂಡಗಳ ಪ್ಲೇ-ಆಫ್ ಪ್ರವೇಶ,1 ಸ್ಥಾನಕ್ಕಾಗಿ 5 ತಂಡಗಳ ಹಣಾಹಣಿ

ಹೈಕೋರ್ಟ್ ಆದೇಶದಂತೆ ನಡೆದ ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಂಚೆ ಮತಗಳನ್ನು ತಿರುಚಲಾಗಿದೆ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಶಾಸಕ ರಾಜೇಗೌಡರು ಗಂಭೀರ ಆರೋಪ ಮಾಡಿದ್ದರು. ತಮ್ಮ ಪರವಿದ್ದ ಅಂಚೆ ಮತಗಳನ್ನು ಅಮಾನ್ಯಗೊಳಿಸುವ ಉದ್ದೇಶದಿಂದ ಸ್ಟ್ರಾಂಗ್ ರೂಮ್ ಬೀಗ ಒಡೆದು, ಮತದಾರರು ಬಳಸಿದ್ದ ಪೆನ್ನಿಗಿಂತಲೂ ಭಿನ್ನವಾದ ಬೇರೊಂದು ಇಂಕಿನ ಪೆನ್ನಿನಿಂದ ಮತಪತ್ರಗಳ ಮೇಲೆ ಗೆರೆ ಎಳೆಯಲಾಗಿದೆ ಎಂದು ಅವರು ದೂರಿದ್ದರು. ಈ ಷಡ್ಯಂತ್ರದ ವಿರುದ್ಧ ಅವರು ಜೀವರಾಜ್ ಹಾಗೂ ಚುನಾವಣಾ ಏಜೆಂಟರ ವಿರುದ್ಧ ಎಫ್‌ಐಆರ್ ಕೂಡ ದಾಖಲಿಸಿದ್ದರು.

ಹೈಕೋರ್ಟ್ ಆದೇಶ ಮತ್ತು ಮರು ಮತ ಎಣಿಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ಅವರು ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು. ಈ ಪ್ರಕರಣದ ಕೂಲಂಕಷ ವಿಚಾರಣೆ ನಡೆಸುತ್ತಿರುವ ಸರ್ವೋಚ್ಚ ನ್ಯಾಯಾಲಯವು, ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿತ್ತು. ನ್ಯಾಯಾಲಯದ ಇಂದಿನ ಆದೇಶದಂತೆ, ಜುಲೈ 23ರವರೆಗೆ ರಾಜೇಗೌಡರೇ ಶೃಂಗೇರಿಯ ಶಾಸಕರಾಗಿ ಮುಂದುವರಿಯಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...