ಎಸ್‌ಎಸ್‌ಎಲ್‌ಸಿ | ರಾಜ್ಯದಲ್ಲಿ ತೃತೀಯ ಭಾಷೆ ಹಿಂದಿಗೆ ಇನ್ಮುಂದೆ ಅಂಕ ಇಲ್ಲ: ಶಿಕ್ಷಣ ಇಲಾಖೆ ನಿರ್ಧಾರ

Date:

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ‘ತೃತೀಯ ಭಾಷೆ’ಯನ್ನು ಗ್ರೇಡಿಂಗ್ ವ್ಯವಸ್ಥೆಗೆ ಒಳಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈವರೆಗೆ 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ನಿಗದಿಪಡಿಸಲಾಗಿತ್ತು. ಆದರೆ, ಇನ್ನು ಮುಂದೆ ತೃತೀಯ ಭಾಷೆಯಲ್ಲಿ ಉತ್ತೀರ್ಣ ಅಥವಾ ಅನುತ್ತೀರ್ಣ ಎನ್ನುವ ಪದ್ಧತಿ ಇರುವುದಿಲ್ಲ.  ಅಂತಿಮ ಫಲಿತಾಂಶದ ಅಂಕಗಳಿಗೆ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಬದಲಾಗಿ ಗ್ರೇಡಿಂಗ್ (ಎ, ಬಿ, ಸಿ, ಡಿ) ನೀಡಲಾಗುತ್ತದೆ,’ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ : ‘ವಿಶ್ವಗುರು’ವಿನ ನಿಜ ಬಣ್ಣ ಬಯಲು ಮಾಡಿದ ಮಧು ಕಿಶ್ವರ್: ಸುದ್ದಿ ಮಾಡದ ಮಡಿಲ ಮಾಧ್ಯಮಗಳು

ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಒಳಗೊಂಡಂತೆ ಪಠ್ಯಕ್ರಮದಲ್ಲಿ ಇರುವ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಇಲಾಖೆಯಿಂದ ಹೊರಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಇನ್ನು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತವಾಗಿ ‘ನೈತಿಕ ಶಿಕ್ಷಣ’ ಪುಸ್ತಕಗಳನ್ನು ನೀಡಲಾಗುತ್ತಿದೆ. ಇದು ಸರ್ಕಾರದ ಮಹತ್ವದ ಹೆಜ್ಜೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...