ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೋಮವಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಪರೀಕ್ಷೆ ಆರಂಭವಾಗಲಿದ್ದು, 19ರವರೆಗೆ ನಡೆಯಲಿದೆ. ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 20ರಿಂದ ಆರಂಭವಾಗಿ ಏಪ್ರಿಲ್ 2ರವರೆಗೆ ನಡೆಯಲಿದೆ.
ಇದನ್ನು ಓದಿದ್ದೀರಾ? BREAKING: ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
“2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ದಿನಾಂಕ: 02-12-2024 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ ‘ಪ್ರಕಟಣಾ ಫಲಕ’ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು” ಎಂದು ತಿಳಿಸಲಾಗಿದೆ.
ಇನ್ನು ಈ ವೇಳಾಪಟ್ಟಿಯ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 2ರಿಂದ ಡಿಸೆಂಬರ್ 16ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ.
ಆಕ್ಷೇಪಣೆಯನ್ನು ಪರೀಕ್ಷಾ ಮಂಡಳಿಯ ಇಮೇಲ್ ವಿಳಾಸ: chairpersonkseab@gmail.com ಕ್ಕೆ ಕಳುಹಿಸಬಹುದು. ಸಂಪೂರ್ಣ ವೇಳಾಪಟ್ಟಿಯನ್ನು https://kseab.karnataka.gov.in/ ವೆಬ್‌ಸೈಟ್‌ನಲ್ಲಿ ನೋಡಬಹುದು.

SSL