‘ಉಮರ್ ಖಾಲಿದ್ ಪ್ರಪಂಚʼ ಕಾರ್ಯಕ್ರಮ ರದ್ದುಗೊಳಿಸುವಂತೆ ರಾಜ್ಯ ಬಿಜೆಪಿ ಆಗ್ರಹ

Date:

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಕರ್ನಾಟಕ ಬಿಜೆಪಿ ಏ.27 (ಸೋಮವಾರ) ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ಆಯುಕ್ತರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿ, ಕಾರ್ಯಕ್ರಮಕ್ಕೆ ನೀಡಿದ ಅನುಮತಿಯನ್ನು ವಾಪಾಸ್‌ ಪಡೆಯಬೇಕು ಎಂದು ಒತ್ತಾಯಿಸಿದೆ.

- Advertisement -

ಏಪ್ರಿಲ್ 28 ರಂದು ಬೆಂಗಳೂರಿನಲ್ಲಿ ‘ಉಮರ್ ಖಾಲಿದ್ ಆಂಡ್ ಹಿಸ್ ವರ್ಲ್ಡ್’ (Umar Khalid and His World) ಪುಸ್ತಕದ ಆಯ್ದ ಭಾಗಗಳ ವಾಚನ ಮತ್ತು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  

ಇದನ್ನೂ ಓದಿ : ಸರಣಿ ಲೇಖನ | ಪಂಚಮಸಾಲಿ ಸಮುದಾಯ: ಇತಿಹಾಸದ ಹಾದಿ ಮತ್ತು ಇಂದಿನ ತಲ್ಲಣಗಳು- ಭಾಗ…

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಭಯೋತ್ಪಾದನಾ ವಿರೋಧಿ ಕಾಯ್ದೆಯಡಿ ಬಂಧಿತರಾಗಿರುವ ಉಮರ್ ಖಾಲಿದ್ ಅವರನ್ನು ಬೆಂಬಲಿಸಲು ‘ಉಮರ್ ಖಾಲಿದ್ ಪ್ರಪಂಚ’ ಎಂಬ ಶೀರ್ಷಿಕೆಯಡಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಬಿಜೆಪಿ ಆರೋಪಿಸಿದೆ. ಕೇಂದ್ರ ಸರ್ಕಾರವು ನಕ್ಸಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದರೂ, ‘ಅರ್ಬನ್ ನಕ್ಸಲ್’ರು ಇಂದಿಗೂ ಸಕ್ರಿಯವಾಗಿದ್ದು, ಪರೋಕ್ಷವಾಗಿ ದೇಶವಿರೋಧಿ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿವೆ ಎಂದು ಬಿಜೆಪಿ ದೂರಿದೆ.

ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಗಳು ಖಾಲಿದ್‌ಗೆ ಜಾಮಿನು ನಿರಾಕರಿಸಿರುವುದು ಅವರ ಅಪರಾಧ ಚಟುವಟಿಕೆಗಳಿಗೆ ಸಾಕ್ಷಿಯಾಗಿದೆ. ಇಂತಹ ವ್ಯಕ್ತಿಯನ್ನು ವೈಭವೀಕರಿಸುವುದು ಅಪರಾಧ ಮನೋಭಾವಕ್ಕೆ ಪ್ರೋತ್ಸಾಹ ನೀಡಿದಂತೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ನಗರದಾದ್ಯಂತ ಈಗಾಗಲೇ ಉಮರ್ ಖಾಲಿದ್ ಪರ ಘೋಷಣೆಗಳು ಮತ್ತು ಗೋಡೆ ಬರಹಗಳು ಕಾಣಿಸಿಕೊಂಡಿರುವುದು ಆತಂಕಕಾರಿ ವಿಚಾರವಾಗಿದೆ. ಒಂದು ವೇಳೆ ಈ ಕಾರ್ಯಕ್ರಮಕ್ಕೆ ಅವಕಾಶ ನೀಡಿ, ಅದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಅದಕ್ಕೆ ಬಿಜೆಪಿ ಜವಾಬ್ದಾರಿಯಾಗುವುದಿಲ್ಲ ಎಂದು ಪಕ್ಷ ಎಚ್ಚರಿಸಿದೆ.

2020ರ ದೆಹಲಿ ಗಲಭೆಯ ಪಿತೂರಿಯ ಆರೋಪದ ಮೇಲೆ ಉಮರ್ ಖಾಲಿದ್ ಪ್ರಸ್ತುತ ಜೈಲಿನಲ್ಲಿದ್ದಾರೆ. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಕೂಡ ಅವರ ಜಾಮಿನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಗಲಭೆಯಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ನಗರದ ಶಾಂತಿ ಕಾಪಾಡುವ ದೃಷ್ಟಿಯಿಂದ ಈ ಕಾರ್ಯಕ್ರಮದ ಅನುಮತಿಯನ್ನು ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...