ರಾಜ್ಯ ಸಚಿವ ಸಂಪುಟ: ನಟಿ ಉಮಾಶ್ರೀಗೆ ಮಂತ್ರಿಗಿರಿ ಸಿಗುತ್ತಾ?

Date:

ರಾಜ್ಯದ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ನಟಿ, ಎಂಎಲ್‌ಸಿ ಉಮಾಶ್ರೀ ಅವರಿಗೆ ಸಚಿವ ಸ್ಥಾನ ಸಿಗಲಿದೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ.

- Advertisement -

ಕಾಂಗ್ರೆಸ್ ಹೈಕಮಾಂಡ್ ಇತ್ತೀಚೆಗೆ ಬಿಡುಗಡೆ ಮಾಡಿದ ಅಧಿಕೃತ ಪಟ್ಟಿಯ ಪ್ರಕಾರ, ಉಮಾಶ್ರೀ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ ಅಂತಿಮಗೊಳಿಸಲಾಗಿದೆ. ಆದಾಗ್ಯೂ, ಸಚಿವ ಸಂಪುಟದಲ್ಲಿ ಇನ್ನೂ ಒಂದು ಸ್ಥಾನ ಖಾಲಿ ಉಳಿದಿರುವುದರಿಂದ ಉಮಾಶ್ರೀ ಅವರು ಸಚಿವ ಗಾದಿಯ ಪ್ರಬಲ ಆಕಾಂಕ್ಷಿಯಾಗಿ ಉಳಿದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಇದನ್ನೂ ಓದಿ: ಮಹಿಳೆಗೆ ಸಚಿವ ಸ್ಥಾನ ಸಿಗುವ ವಿಶ್ವಾಸ, ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನ: ಲಕ್ಷ್ಮೀ ಹೆಬ್ಬಾಳ್ಳ‌ರ್

ಮಾಧ್ಯಮಗಳೊಂದಿಗೆ ಮಾತನಾಡಿದ ಉಮಾಶ್ರೀ ಅವರು, “ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ. ಪಕ್ಷಕ್ಕೆ ನಾನು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹೈಕಮಾಂಡ್ ನನಗೆ ಅವಕಾಶ ನೀಡುವ ಭರವಸೆ ಇದೆ. ಸಚಿವ ಸ್ಥಾನ ಕೇಳುವುದು ನಮ್ಮ ಹಕ್ಕು, ಆದರೆ ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಸೇರಿದ್ದು” ಎಂದು ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರೇ ಇಲ್ಲದ ಸಚಿವ ಸಂಪುಟ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟ ವಿಸ್ತರಣೆಯಲ್ಲಿ ಹೊಸದಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಒಟ್ಟು 34 ಸಚಿವ ಸ್ಥಾನಗಳ ಪೈಕಿ 33 ಸ್ಥಾನಗಳು ಭರ್ತಿಯಾಗಿದ್ದು, 1 ಸ್ಥಾನವನ್ನು ಕಾಯ್ದಿರಿಸಲಾಗಿದೆ. ಆದರೆ ಒಬ್ಬರೇ ಒಬ್ಬರು ಮಹಿಳೆಯರಿಗೂ ಸಚಿವ ಸ್ಥಾನ ನೀಡಲಾಗಿಲ್ಲ.

ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಸಚಿವ ಸ್ಥಾನ ನೀಡದಿರುವುದು ತೀವ್ರ ಟೀಕೆಗೆ ಒಳಗಾಗುತ್ತಿದೆ. ಇವೆಲ್ಲವುದರ ನಡುವೆ ಮಹಿಳಾ ಪ್ರಾತಿನಿಧ್ಯ ಹಾಗೂ ಹಿರಿಯ ನಾಯಕರ ಅನುಭವದ ಆಧಾರದಲ್ಲಿ ಉಳಿದಿರುವ ಏಕೈಕ ಸಚಿವ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಪರಿಗಣಿಸಬೇಕೆಂಬ ಒತ್ತಡವೂ ಪಕ್ಷದೊಳಗಿಂದ ಕೇಳಿಬರುತ್ತಿದೆ.

ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸೂಚನೆಯಂತೆ ವಿಧಾನ ಪರಿಷತ್ ಉಪಸಭಾಪತಿಯಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದ್ದರೂ, ಸಂಪುಟ ವಿಸ್ತರಣೆಯ ಮುಂದಿನ ಹಂತದಲ್ಲಿ ಸಚಿವ ಸ್ಥಾನದ ಬದಲಾವಣೆ ಅಥವಾ ಸೇರ್ಪಡೆ ಕುರಿತು ಹೈಕಮಾಂಡ್ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ಬಾಕಿ ಉಳಿದಿರುವ ಸಚಿವ ಸ್ಥಾನವನ್ನು ಯಾರಿಗೆ ಹಂಚಿಕೆ ಮಾಡಲಾಗುತ್ತದೆ ಎಂಬ ಕುರಿತು ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಮೂಡಿದ್ದು, ಹೈಕಮಾಂಡ್‌ನ ಮುಂದಿನ ನಿರ್ಧಾರದತ್ತ ಎಲ್ಲರ ಗಮನ ನೆಟ್ಟಿದೆ.

ಸಾಂಸ್ಕೃತಿಕ ಹಾಗೂ ರಂಗಭೂಮಿ ಕ್ಷೇತ್ರದಲ್ಲಿನ ಸಾಧನೆ ಮತ್ತು ಸಾಮಾಜಿಕ ಕಾಳಜಿಗಳಿಂದಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮೂಲಕ ಸಕ್ರಿಯ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದವರು ಉಮಾಶ್ರೀ. 2013ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಜಯಗಳಿಸುವ ಮೂಲಕ ಶಾಸಕಿಯಾಗಿ ಆಯ್ಕೆಯಾಗಿದ್ದರು. 2013ರಲ್ಲಿ ಸಿದ್ಧರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿಕಾರ್ಯನಿರ್ವಹಿಸಿದರು. ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ ಬಳಿಕ, ಆಗಸ್ಟ್ 2023 ರಲ್ಲಿ ಅವರನ್ನು ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯೆಯಾಗಿ (MLC) ನಾಮನಿರ್ದೇಶನ ಮಾಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...