15 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸಂಪುಟ ಅಸ್ತು; ಕೇಂದ್ರಕ್ಕೆ ಬರ ವರದಿ ಸಲ್ಲಿಸಲು ಸಿಎಂ ಸೂಚನೆ

Date:

ರಾಜ್ಯದಾದ್ಯಂತ 15 ಸಾವಿರ ಶಿಕ್ಷಕರ ನೇರ ನೇಮಕಾತಿಗೆ ಹಾದಿ ಸುಗಮಗೊಳಿಸುವ ‘ಕರ್ನಾಟಕ ಶಿಕ್ಷಣ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ಕೆಲವು ಬೋಧಕ ಹುದ್ದೆಗಳಿಗೆ ನೇಮಕಾತಿ ವಿಶೇಷ ನಿಯಮಗಳು), 2026’ಕ್ಕೆ ರಾಜ್ಯ ಸಚಿವ ಸಂಪುಟ ಭಾನುವಾರ ಒಪ್ಪಿಗೆ ನೀಡಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ತುರ್ತು ಅಗತ್ಯವನ್ನು ಮನಗಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜುಲೈ 14 ರಂದು ಹೊರಡಿಸಲಾದ ಕರಡಿಗೆ ಈ ‘ತುರ್ತು’ ಸಂಪುಟ ಸಭೆಯು ಅನುಮೋದನೆ ನೀಡಿದೆ.

- Advertisement -

ತಮ್ಮ ಹೆಣ್ಣುಮಕ್ಕಳನ್ನು ಅಕ್ರಮವಾಗಿ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನಾಗಿ ಆಯ್ಕೆ ಮಾಡಿದ ಆರೋಪದ ಮೇಲೆ, ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಹೊರಡಿಸಿದ್ದ ಆದೇಶವನ್ನು ಸಂಪುಟವು ಇದೇ ವೇಳೆ ದೃಢೀಕರಿಸಿದೆ . ಆದರೆ, ರಾಜ್ಯಪಾಲರು ಸ್ವತಂತ್ರವಾಗಿ ಕಾರ್ಯನಿರ್ವಹಿಸಿದ್ದಾರೆಯೇ ಎಂದು ಪ್ರಶ್ನಿಸಿ ಸಾಹುಕಾರ್ ಅವರು ಹೈಕೋರ್ಟ್‌ನಲ್ಲಿ ತಮ್ಮ ಅಮಾನತು ಆದೇಶವನ್ನು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯು ಜುಲೈ 18ರವರೆಗೆ ಶೇ.39ರಷ್ಟು ಕೊರತೆ ಅನುಭವಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಲೆನಾಡಿನಲ್ಲಿ ಶೇ.43, ಕರಾವಳಿಯಲ್ಲಿ ಶೇ.35, ಉತ್ತರ ಕರ್ನಾಟಕದ ಒಳನಾಡಿನಲ್ಲಿ ಶೇ.33 ಹಾಗೂ ದಕ್ಷಿಣ ಕರ್ನಾಟಕದ ಒಳನಾಡಿನಲ್ಲಿ ಶೇ.31ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಪ್ರಸ್ತುತ 359.98 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ (ಕಳೆದ ವರ್ಷ ಇದೇ ಅವಧಿಯಲ್ಲಿ 681.83 ಟಿಎಂಸಿ ಇತ್ತು). ಜಲಾಶಯಗಳು ಪ್ರಸ್ತುತ ಶೇ.40ರಷ್ಟು ಮಾತ್ರ ಭರ್ತಿಯಾಗಿದ್ದು, ಲಿಂಗನಮಕ್ಕಿ, ಸೂಪಾ ಮತ್ತು ವಾರಾಹಿಯಂತಹ ಜಲವಿದ್ಯುತ್ ಜಲಾಶಯಗಳಲ್ಲಿ ಸರಾಸರಿ ಶೇ.23ರಷ್ಟು ಮಾತ್ರ ನೀರಿದೆ ಎಂದು ಸಿಎಂ ಕಳವಳ ವ್ಯಕ್ತಪಡಿಸಿದ್ದಾರೆ.

ಕುಡಿಯುವ ನೀರು ಪೂರೈಕೆಗಾಗಿ ಪ್ರತಿಯೊಂದು ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೂ ತಲಾ 1 ಕೋಟಿ ರೂ.ಗಳನ್ನು ಸಿಎಂ ಘೋಷಿಸಿದ್ದಾರೆ. ನಕಲಿ ಬಿಲ್‌ಗಳನ್ನು ತಡೆಯಲು ಹೊಸದಾಗಿ ಕೊರೆಯಲಾಗುವ ಎಲ್ಲಾ ಬೋರ್‌ವೆಲ್‌ಗಳ ವಿಡಿಯೋಗ್ರಫಿ ಕಡ್ಡಾಯಗೊಳಿಸಿದ್ದಾರೆ. ಹಳೆಯ ಕಾಮಗಾರಿಗಳಿಗೆ ಹೊಸ ಬಿಲ್‌ಗಳನ್ನು ಮಂಜೂರು ಮಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಅವರು, ಕಾಮಗಾರಿಗೆ ಮುನ್ನ ಮತ್ತು ನಂತರದ ಫೋಟೋಗಳನ್ನು ಕಡ್ಡಾಯವಾಗಿ ಅಪ್‌ಲೋಡ್ ಮಾಡಲು ಸೂಚಿಸಿದ್ದಾರೆ. ಅಲ್ಲದೆ, ನಿರಂತರ ವಿದ್ಯುತ್ ಪೂರೈಕೆ, ಶುದ್ಧ ಕುಡಿಯುವ ನೀರಿನ (RO) ಘಟಕಗಳ ನಿರ್ವಹಣೆ, ಜಾನುವಾರುಗಳಿಗೆ ಮೇವು ಮತ್ತು ನೀರು ಒದಗಿಸುವುದು ಹಾಗೂ ವಿಬಿ-ಜಿ ರಾಮ್ ಜಿ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಮೂಲಕ ಜನರು ಗುಳೆ ಹೋಗುವುದನ್ನು ತಡೆಯಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ, ಮುಂದಿನ 15 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಅನುಕೂಲವಾಗುವಂತೆ ಒಂದು ವಾರದೊಳಗೆ ಸಮಗ್ರ ಜಿಲ್ಲಾವಾರು ಬರ ವರದಿಯನ್ನು ಸಿದ್ಧಪಡಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಾಸ್ತವ ಸ್ಥಿತಿಯನ್ನು ಪ್ರತಿಬಿಂಬಿಸದ ವರದಿಗಳನ್ನು ತಾವು ಒಪ್ಪುವುದಿಲ್ಲ ಎಂದು ಎಚ್ಚರಿಸಿರುವ ಅವರು, ಒಂದು ವಾರದೊಳಗೆ ಖುದ್ದಾಗಿ ಹಳ್ಳಿಗಳಿಗೆ ಭೇಟಿ ನೀಡಿ ನೈಜ ಪರಿಸ್ಥಿತಿ ಅವಲೋಕಿಸುವಂತೆ ಸೂಚಿಸಿದ್ದಾರೆ.

ಜಲಾಶಯಗಳಲ್ಲಿನ ನೀರಿನ ಲಭ್ಯತೆ ಮತ್ತು ಬೆಳೆ ವಿಮೆ ಪ್ರಯೋಜನಗಳ ಆಧಾರದ ಮೇಲೆ ಸೂಕ್ತ ಬೆಳೆಗಳನ್ನು ಆಯ್ಕೆ ಮಾಡುವ ಬಗ್ಗೆ ರೈತರಿಗೆ ಸಲಹೆ ನೀಡಲು ಪ್ರತಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲೂ ಅವರು ಆದೇಶಿಸಿದ್ದಾರೆ. ಎಲ್ಲಾ ಡಿಸಿಗಳು ಮತ್ತು ಜಿ.ಪಂ ಸಿಇಒಗಳು ‘ಟೀಮ್ ಕರ್ನಾಟಕ’ದಂತೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...