ಗ್ಯಾರಂಟಿ ಫಲಾನುಭವಿಗಳ ಮರು ಅರ್ಜಿ ಸಲ್ಲಿಕೆ ಪ್ರಸ್ತಾಪ ಕೈಬಿಟ್ಟ ರಾಜ್ಯ ಸರ್ಕಾರ

Date:

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕು ಎಂಬ ಪ್ರಸ್ತಾವನೆಯನ್ನು ಸರ್ಕಾರ ಕೈಬಿಟ್ಟಿದೆ. ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಗ್ಯಾರಂಟಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

- Advertisement -

ರಾಜ್ಯದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ವಿಧಾನಸೌಧದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು, ಯೋಜನೆಗಳ ಸಮರ್ಪಕ ಜಾರಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಎರಡನೇ ಬರಪಟ್ಟಿಗೂ ಬಾರದ ರಾಮದುರ್ಗ, ಸವದತ್ತಿ: ಸಂಕಷ್ಟದಲ್ಲಿ ರೈತರು,...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಯಡಿ, ಮೇ ಅಂತ್ಯದವರೆಗೆ ಒಟ್ಟು 763 ಕೋಟಿ ಮಹಿಳಾ ಪ್ರಯಾಣಿಕರು ಯೋಜನೆಯ ಫಲಾನುಭವಿಗಳಾಗಿದ್ದಾರೆ. ಇವರಿಗೆ ವಿನಿಯೋಗಿಸಲಾದ ಟಿಕೆಟ್‌ನ ಒಟ್ಟು ಮೌಲ್ಯ 20,047.69 ಕೋಟಿ ರೂಪಾಯಿಗಳಾಗಿವೆ. ಇದರ ಜೊತೆಗೆ, 2026-27ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೆಲ್ಲರನ್ನೂ ಸೇರಿಸಿ ಒಟ್ಟು 10 ಲಕ್ಷ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ಸರ್ಕಾರ ಅಂದಾಜು ಮಾಡಿದೆ ಎಂದು ಅವರು ವಿವರಿಸಿದರು.

‘ಗೃಹ ಜ್ಯೋತಿ’ ಯೋಜನೆಯಡಿ ಮೇ ಅಂತ್ಯದವರೆಗೆ ರಾಜ್ಯದ 1.65 ಕೋಟಿ ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯದ ಲಾಭ ಪಡೆದುಕೊಂಡಿದ್ದಾರೆ. ಆದರೆ, ಹೊರ ರಾಜ್ಯಗಳಿಂದ ಬಂದು ಇಲ್ಲಿ ನೆಲೆಸಿ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯುತ್ತಿರುವವರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮೈದಾನದಲ್ಲಿ ಮಾಸದ ಮೋಡಿ: 39ರ ವಯಸ್ಸಿನಲ್ಲೂ ಮಿಂಚುತ್ತಿರುವ ಮೆಸ್ಸಿ; ಫುಟ್‌ಬಾಲ್ ದಿಗ್ಗಜರ ಸ್ವಾರಸ್ಯಗಳು

ರಾಜ್ಯದ ಮತದಾರರ ಪಟ್ಟಿಯಲ್ಲಿ ಹೆಸರಿರುವವರು ಮಾತ್ರವೇ ಸರ್ಕಾರದ ಈ ಯೋಜನೆಗಳ ಫಲಾನುಭವಿಗಳಾಗಿರುತ್ತಾರೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುವ ಸಂದರ್ಭದಲ್ಲಿ, ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ತೀವ್ರ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನೀಡಲಾಗುತ್ತಿರುವ ನಗದು ಪ್ರಕ್ರಿಯೆ ಮುಂದುವರೆದಿದ್ದು, ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಇದುವರೆಗೆ ಒಟ್ಟು 11,561 ಕೋಟಿ ರೂ.ಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜುಲೈ-2023 ರಿಂದ ಡಿಸೆಂಬರ್-2024ರ ವರೆಗಿನ ಅವಧಿಯಲ್ಲಿ 72,02,33,970 ಫಲಾನುಭವಿಗಳಿಗೆ (ಒಟ್ಟು ಪಾವತಿ ಲೆಕ್ಕಾಚಾರದಲ್ಲಿ) ಡಿಬಿಟಿ ಮೂಲಕ ಈ ಹಣ ವರ್ಗಾವಣೆಯಾಗಿದೆ. ತದನಂತರ, 2025ರ ಫೆಬ್ರವರಿ ತಿಂಗಳಿನಿಂದ ಈವರೆಗೆ ರಾಜ್ಯದ ಒಟ್ಟು 4,44,67,942 ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತಿದೆ.

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಲಾಗುವ ಅಕ್ಕಿಯು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟವಾಗುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಇಂತಹ ಅಕ್ರಮ ದಂಧೆಯನ್ನು ಬೇರುಸಹಿತ ನಿಗ್ರಹಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಪಾಸ್‌ಪೋರ್ಟ್‌ನಲ್ಲಿ ಮಾಜಿ ಸಂಗಾತಿ ಹೆಸರು ಅಳಿಸಲು ‘ವಿಚ್ಛೇದನ ಆದೇಶ’ ಕಡ್ಡಾಯವಲ್ಲ: ಕೇರಳ ಹೈಕೋರ್ಟ್

ವಿಚ್ಛೇದಿತ ವ್ಯಕ್ತಿಯು ತಮ್ಮ ಪಾಸ್‌ಪೋರ್ಟ್‌ನಿಂದ ಮಾಜಿ ಸಂಗಾತಿಯ (ಪತಿ ಅಥವಾ ಪತ್ನಿ)...