ಭೂ ಮ್ಯುಟೇಶನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಮತ್ತು ನೋಟಿಸ್ ನೀಡಬಾರದು ಎಂದು ಕರ್ನಾಟಕ ಸರ್ಕಾರ ಆದೇಶ ನೀಡಿದೆ. ಜೊತೆಗೆ ವಕ್ಫ್ ಕಾಯ್ದೆಯಡಿ ರೈತರಿಗೆ ಒತ್ತುವರಿ ತೆರವು ನೋಟಿಸ್ ನೀಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಎಚ್ಚರಿಸಿದೆ.
ಕರ್ನಾಟಕ ವಕ್ಫ್ ಮಂಡಳಿಯ ಪರವಾಗಿ ಕೆಲವು ಭೂ ಆಸ್ತಿಗಳನ್ನು ವರ್ಗಾಯಿಸಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸಭೆ ನಡೆಸಿದ್ದಾರೆ.
ಇದನ್ನು ಓದಿದ್ದೀರಾ? ವಕ್ಫ್ ವಿವಾದದಲ್ಲಿ ಜೆಪಿಸಿ | ಹಿಂದು ವಿರೋಧಿ, ರೈತ ವಿರೋಧಿ ನೀತಿಗೇಕೆ ಬಿಜೆಪಿ ಅಂಟಿಕೊಳ್ಳುತ್ತಿದೆ?
ಈ ಸಭೆಯಲ್ಲಿ ಈ ಆದೇಶ ನೀಡಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದ್ದಾರೆ. ಜಿಲ್ಲೆಗಳ ಎಲ್ಲಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಪತ್ರದಲ್ಲಿ ಸೂಚನೆ ನೀಡಲಾಗಿದೆ.

ರೈತರ ಜಮೀನು ಮತ್ತು ಇತರೆ ಆಸ್ತಿಗಳನ್ನು ಮ್ಯುಟೇಶನ್ ಮಾಡಲು ಯಾವುದೇ ಕಚೇರಿ ಅಥವಾ ಪ್ರಾಧಿಕಾರ ಆದೇಶ ನೀಡಿದ್ದಲ್ಲಿ ಅದನ್ನು ಈ ಕೂಡಲೇ ಹಿಂಪಡೆಯಬೇಕು. ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರ ವಿರುದ್ದ ಕ್ರಮ ಜರುಗಿಸಬಾರದು ಎಂದು ಆದೇಶ ಹೇಳಿದೆ.
