ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

Date:

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಬದುಕಿನ ಹಕ್ಕಾಗಿದ್ದು, ಅದರ ರಕ್ಷಣೆಗಾಗಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

- Advertisement -

​ಇದೇ ವೇಳೆ, ಇತ್ತೀಚಿನ ಪ್ರತಿಭಟನಾ ಮೆರವಣಿಗೆಯೊಂದರಲ್ಲಿ ರಾಹುಲ್ ಗಾಂಧಿ ಅವರು ವಾಹನಕ್ಕೆ ಹತ್ತಿಕೊಳ್ಳುವಂತೆ ತಮಗೆ ಸೂಚಿಸಿದ್ದನ್ನು ‘ಅಪಮಾನ’ ಎಂದು ಬಿಂಬಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು. ಅವರ ಬೆಂಬಲದಿಂದಲೇ ನಾವು ರಾಜ್ಯದಲ್ಲಿ ಮತದಾರರ ಹಕ್ಕುಗಳನ್ನು ರಕ್ಷಿಸುತ್ತಿದ್ದೇವೆ. ರಾಹುಲ್ ಗಾಂಧಿ ಅವರಂತಹ ಮಾನವೀಯತೆಯ ನಾಯಕರ ನಡೆಯನ್ನು ತಿರುಚಿ, ಬಿಜೆಪಿ ನಾಯಕರು ಇಂತಹ ಸಣ್ಣ ವಿಚಾರವನ್ನು ಮುಂದಿಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

​ಬಳಿಕ ನಾಡಹಬ್ಬ ದಸರಾ ಕುರಿತು ಮಾಹಿತಿ ನೀಡಿದ ಅವರು, ಕರಾವಳಿಯ ಹೆಮ್ಮೆಯ ಜಾನಪದ ಕ್ರೀಡೆ ಕಂಬಳ ಹಾಗೂ ತುಳುನಾಡಿನ ಸಾಂಸ್ಕೃತಿಕ ವೈಭವವನ್ನು ಬಿಂಬಿಸುವ ಸ್ತಬ್ಧಚಿತ್ರಗಳು ಈ ಬಾರಿಯ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರಲಿವೆ ಎಂದರು. ವಿಜಯನಗರ ಸಾಮ್ರಾಜ್ಯದ ಕಾಲದಲ್ಲೂ ದಸರಾ ವೇಳೆ ಕೋಣಗಳನ್ನು ಕರೆತರುತ್ತಿದ್ದ ಇತಿಹಾಸವಿದೆ. ಅದೇ ಮಾದರಿಯಲ್ಲಿ ಈ ಬಾರಿ ಕಂಬಳವನ್ನು ಮೈಸೂರಿಗೆ ಕೊಂಡೊಯ್ಯಲಾಗುತ್ತಿದ್ದು, ಅಕ್ಟೋಬರ್ 21ರಂದು ನಡೆಯುವ ವಿಜಯದಶಮಿ ಮೆರವಣಿಗೆಯಲ್ಲಿ ತುಳುನಾಡಿನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

​ಈ ಬಾರಿಯ ಮೈಸೂರು ದಸರಾ ಪಥಸಂಚಲನದಲ್ಲಿ ಸೇನಾಪಡೆಗಳ ತಂಡಗಳು ಭಾಗವಹಿಸಲಿರುವುದು ವಿಶೇಷವಾಗಿದೆ. ಜೊತೆಗೆ ಜಂಬೂಸವಾರಿಯಲ್ಲಿ ಈ ಬಾರಿ ಹೊಸ ಆನೆಯೊಂದು ತಾಯಿ ಚಾಮುಂಡೇಶ್ವರಿಯ ಅಂಬಾರಿ ಹೊತ್ತು ಹೆಜ್ಜೆ ಹಾಕಲಿದೆ ಎಂದು ದಸರಾ ಸಿದ್ಧತೆಗಳ ಕುರಿತು ಅವರು ವಿವರಿಸಿದರು.

​ಮಂಗಳೂರಿನ ಕುದ್ರೋಳಿ ದಸರಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, “ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಬಹಳ ವರ್ಷಗಳಿಂದ ಇಲ್ಲಿಗೆ ಆಹ್ವಾನ ನೀಡುತ್ತಲೇ ಇದ್ದು, ಕಳೆದ ವರ್ಷವೂ ಇಲ್ಲಿಗೆ ಭೇಟಿ ನೀಡಿದ್ದೆ. ಇಲ್ಲಿ ಅತ್ಯಂತ ವಿಜೃಂಭಣೆಯಿಂದ ನವರಾತ್ರಿಯನ್ನು ಆಚರಿಸಲಾಗುತ್ತಿದ್ದು, ನವದುರ್ಗೆಯರನ್ನು ಆರಾಧಿಸುವ ಮೂಲಕ ಸಮಾಜ ಮತ್ತು ಸಮುದಾಯಗಳನ್ನು ಒಗ್ಗೂಡಿಸುವ ಅತ್ಯುತ್ತಮ ಸಾಂಸ್ಕೃತಿಕ ಕಾರ್ಯ ನಡೆಯುತ್ತಿದೆ” ಎಂದು ಪ್ರಶಂಸಿಸಿದರು.

​ಇನ್ನು, ಸ್ಟಿಂಗ್ ಆಪರೇಷನ್ ಪ್ರಕರಣವೊಂದರಲ್ಲಿ ನಡೆದಿರುವ ಬಂಧನದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಆ ಬಗ್ಗೆ ತಮಗೆ ಯಾವುದೇ ಮಾಹಿತಿಯಿಲ್ಲ ಎಂದು ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ವಿಬಿ-ಜಿ ರಾಮ್ ಜಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಬಿ-ಜಿ ರಾಮ್ ಜಿ ಯೋಜನೆಯ ಸದುಪಯೋಗ...

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...