ಹೈದರಾಬಾದ್‌ನ ಬೆಳೆ ಸಂಶೋಧನಾ ಸಂಸ್ಥೆ ಜೊತೆ ರಾಜ್ಯ ಬೀಜ ನಿಗಮ ಒಪ್ಪಂದ

Date:

  • ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ
  • ಕೃಷಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಒಡಂಬಡಿಕೆ

ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ಸಂಬಂಧ ರಾಜ್ಯ ಬೀಜ ನಿಗಮ ಮತ್ತು ಹೈದರಾಬಾದ್‌ನ ಅಂತಾರಾಷ್ಟ್ರೀಯ ಬೆಳೆ ಸಂಶೋಧನಾ ಸಂಸ್ಥೆ (ICRISAT)  ನಡುವೆ ಮಹತ್ವದ ಒಡಂಬಡಿಕೆಗೆ ಸಹಿ‌ ಮಾಡಿವೆ.

- Advertisement -

ವಿಕಾಸಸೌಧದ ಕೃಷಿ ಸಚಿವರ ಕೊಠಡಿಯಲ್ಲಿ ಸೋಮವಾರ ಕೃಷಿ ಸಚಿವ ಚಲುವರಾಯಸ್ವಾಮಿಯವರ ಸಮ್ಮುಖದಲ್ಲಿ ಈ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ
ವ್ಯವಸ್ಥಾಪಕ ನಿರ್ದೇಶಕ ಹೆಚ್.ಎಸ್.ದೇವರಾಜ, ಹೈದರಾಬಾದ್ ನ ICRISAT ನ ಉಪ ಮಹಾ ನಿರ್ದೇಶಕರಾದ
ಡಾ. ಅರವಿಂದ ಕುಮಾರ್ ಅವರು ಈ ಒಡಂಬಡಿಕೆಗೆ ಸಹಿ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ICRISAT ಒಂದು ಅಂತಾರಾಷ್ಟ್ರೀಯ ಬೆಳೆ ತಳಿ ಸಂಶೋಧನಾ ಕೇಂದ್ರವಾಗಿದ್ದು ಹೊಸ ತಂತ್ರಜ್ಞಾನದ ಮೂಲಕ ಅರೆ ಶುಷ್ಕ ವಾತಾವರಣಕ್ಕೆ ಹೊಂದಿಕೊಳ್ಳುವ ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಪರಿಚಯಿಸುತ್ತಿದೆ. ಈಗಾಗಲೇ ಈ ಸಂಸ್ಥೆಯು ಅಭಿವೃದ್ಧಿಪಡಿಸಿದ ಶೇಂಗಾ, ತೊಗರಿ, ಜೋಳ, ಕಡಲೆ ಮತ್ತು ಸಜ್ಜೆ ತಳಿಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಚಲಿತದಲ್ಲಿವೆ.

ಈ ಒಡಂಬಡಿಕೆಯಿಂದ ಕರ್ನಾಟಕ ರಾಜ್ಯ ಬೀಜ ನಿಗಮಕ್ಕೆ ICRISAT ನ ಹೊಸ ತಳಿಗಳು ಲಭ್ಯವಾಗಲಿದ್ದು ಸಂಸ್ಥೆಯ ಉತ್ಪನ್ನಗಳ ಪಟ್ಟಿ ಬಲಿಷ್ಠವಾಗುತ್ತದೆ. ಇದರಿಂದ ರೈತರಿಗೆ ತೊಗರಿ, ಕಡಲೆ, ಜೋಳ, ಸಜ್ಜೆ ಮತ್ತು ಸಿರಿಧಾನ್ಯಗಳಲ್ಲಿ ಹೊಸ ಶಕ್ತಿ ವರ್ಧಕ ತಳಿಗಳನ್ನು ಪರಿಚಯಿಸಲು ಅನುಕೂಲವಾಗಲಿದೆ.

ಈ ಸುದ್ದಿ ಓದಿದ್ದೀರಾ? ಜಾಗೃತಿ ಅರಿವು ಸಪ್ತಾಹ | ಸಚಿವಾಲಯದ ಅಧಿಕಾರಿ, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದ ಸಿಎಂ ಸಿದ್ದರಾಮಯ್ಯ

ಈ ಹೊಸ ತಳಿಗಳನ್ನು KSSCಯ ತಳಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (VRDC) ಧಾರವಾಡದಲ್ಲಿ ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಮೌಲ್ಯವೀಕರಣ ಮಾಡಿ ವಿವಿಧ ಬೆಳೆಗಳಲ್ಲಿ ಹೊಸ ತಳಿ ಬಿಡುಗಡೆ ಮಾಡಲು ಸಹಾಯವಾಗುತ್ತದೆ.

ಒಟ್ಟಾರೆ ಮೂರು ವರ್ಷಗಳ ಒಡಂಬಡಿಕೆಯ ಅವಧಿಯಲ್ಲಿ, ಬರ ಮತ್ತು ರೋಗ ನಿರೋಧಕ ತಳಿಗಳನ್ನು ರಾಜ್ಯದ ರೈತರಿಗೆ ತ್ವರಿತವಾಗಿ ತಲುಪಿಸಲು ಉಪಯೋಗವಾಗುತ್ತದೆ. ಹಾಗೂ ಈ ಬೆಳೆಗಳಲ್ಲಿ ರಾಜ್ಯದ ಸರಾಸರಿ ಉತ್ಪಾದಕತೆಯನ್ನು ಹೆಚ್ಚಿಸಲು ಅನುಕೂಲವಾಗುತ್ತದೆ.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ವಿ.ಅನ್ಬುಕುಮಾರ್, ಕೃಷಿ ಇಲಾಖೆ ಆಯುಕ್ತ  ವೈ.ಎಸ್.ಪಾಟೀಲ, ಕೃಷಿ‌ ನಿರ್ದೇಶಕ ಡಾ.ಜಿ.ಟಿ.ಪುತ್ರ, ವಿ.ಆರ್.ಡಿ.ಸಿ, ಮುಖಸ್ಥ ಡಾ. ವಿ.ಎಸ್.ಸಂಗಮ, ಧಾರವಾಡ ಹಾಗೂ ICRIST ನ ಮುಖ್ಯ ಸಂಶೋಧಕ ಡಾ. ಪ್ರಕಾಶ ಗಂಗಶೆಟ್ಟಿ, ಡಾ.ಅಶೋಕ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...