ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಕೋಲಾರ, ಯಾದಗಿರಿ, ದಾವಣಗೆರೆ, ಬೆಂಗಳೂರು ಹಾಗೂ ವಿಜಯಪುರದ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಕೋಲಾರ ತಾಲ್ಲೂಕಿನ ಭೂಮಾಪನಾ ಇಲಾಖೆ ಸರ್ವೇ ಅಧಿಕಾರಿ ಸುರೇಶ್ ಬಾಬು ಜಿ., ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ ರಾಜೀವ್ ವೆಂಕಟಪ್ಪ ನಾಯಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ ಬಿ ರವಿ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀನಿವಾಸ ಮೂರ್ತಿ ಅವರ ನಿವಾಸ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!
ವಿಜಯಪುರ ಜಿಲ್ಲೆಯ ನಗರದ ಪ್ರಾದೇಶಿಕ ಸಾರಿಗೆ (ಆರ್‌ಟಿಒ) ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಿಢೀರ್ ದಾಳಿ ನಡೆಸಿ, ಅಲ್ಲಿನ ಅಧಿಕಾರಿಗಳು ಮತ್ತು ಖಾಸಗಿ ಎಜೆಂಟ್‌ಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಆರ್‌ಟಿಒ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಹಾಗೂ ಏಜೆಂಟರ ಮೂಲಕ ಹಣ ಸಂಗ್ರಹ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಟಿ. ಮಲ್ಲೇಶ ನೇತೃತ್ವದಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿ ತಪಾಸಣೆ ನಡೆಸಿದರು.
ఆರ್‌ಟಿಒ ವಾಸೀಂ ಬಾಬಾ ಹಾಗೂ ಇತರ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ದಾಖಲಾತಿಗಳ ಪರಿಶೀಲನೆ ಮಾಡಿದರು. ಇದೇ ವೇಳೆ, 24 ಎಜೆಂಟರನ್ನು ವಶಕ್ಕೆ ಪಡೆದ ಅಧಿಕಾರಿಗಳು, ಎಜೆಂಟರ ಬಳಿಯಿದ್ದ ಅನಧೀಕೃತ 1.50 ಲಕ್ಷ ರೂ. ನಗದು ಹಣ ವಶ ಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಲೈಸನ್ಸ್, ದಾಖಲಾತಿ ವರ್ಗಾವಣೆ ಹಾಗೂ ಇತರ ಕೆಲಸ ಕಾರ್ಯಗಳಿಗಾಗಿ ಗ್ರಾಹಕರಿಂದ ಏಜೆಂಟರು ಹಣ ಸಂಗ್ರಹ ಮಾಡಿದ್ದರು ಎಂದು ತಿಳಿದು ಬಂದಿದೆ