ಮೂರು ಎಪಿಎಂಸಿಗಳಲ್ಲಿ ಸಿಎನ್‌ಜಿ ಪ್ಲಾಂಟ್‌, ತ್ಯಾಜ್ಯದಿಂದ ಉತ್ಪಾದನೆಗೆ ಕ್ರಮ: ಸಚಿವ ಶಿವಾನಂದ ಪಾಟೀಲ

Date:

Advertisements

ಬೆಂಗಳೂರಿನ ದಾಸನಪುರ, ಕೋಲಾರ ಮತ್ತು ಮೈಸೂರು ಎಪಿಎಂಸಿಗಳಲ್ಲಿ ತಲಾ 50 ಟಿಪಿಡಿ ಬಯೋ ಸಿಎನ್‌ಜಿ ಪ್ಲಾಂಟ್‌ ನಿರ್ಮಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಎಪಿಎಂಸಿಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ತ್ಯಾಜ್ಯದಿಂದ ಪ್ರಕೃತಿ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದ್ದು, ಶೂನ್ಯ ತ್ಯಾಜ್ಯ ಮಾರುಕಟ್ಟೆಗಳನ್ನಾಗಿ ಪರಿವರ್ತಿಸಲು ಈ ತ್ಯಾಜ್ಯ ಬಳಕೆ ಮಾಡಿಕೊಂಡು ಬಯೋ ಸಿಎನ್‌ಜಿ ಉತ್ಪಾದನೆ ಮಾಡಲು ಯೋಜನೆ ರೂಪಿಸಲಾಗಿದೆ.

ಈ ಮೂರು ಎಪಿಎಂಸಿಗಳಲ್ಲಿ ಪ್ರತಿದಿನ 20 ರಿಂದ 30 ಟನ್‌ ಘನ ತ್ಯಾಜ್ಯ ಸಂಗ್ರಹವಾಗುತ್ತಿದೆ. ಈ ಕಸ ಬಳಕೆ ಮಾಡಿಕೊಂಡು ಬಯೋ ಸಿಎನ್‌ಜಿ ಪ್ಲಾಂಟ್‌ ಸ್ಥಾಪನೆ ಮಾಡುವುದರಿಂದ ಸಿಎಪಿಎಂಸಿಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳುವುದಷ್ಟೇ ಅಲ್ಲ, ತ್ಯಾಜ್ಯವನ್ನು ಸದ್ಭಳಕೆ ಮಾಡಿಕೊಳ್ಳಬಹುದು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?

ಈ ಹಿನ್ನೆಲೆಯಲ್ಲಿ ತಲಾ 24.96 ಕೋಟಿ ರೂ. ವೆಚ್ಚದಲ್ಲಿ ಮೂರು ಎಪಿಎಂಸಿಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಯೋ ಸಿಎನ್‌ಜಿ ಪ್ಲಾಂಟ್‌ ನಿರ್ಮಾಣಕ್ಕೆ ರೂಪಿಸಿರುವ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತರ ಕೆಲವು ಎಪಿಎಂಸಿಗಳಲ್ಲೂ ಬಯೋ ಸಿಎನ್‌ಜಿ ಪ್ಲಾಂಟ್‌ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದರೂ ತ್ಯಾಜ್ಯ ಪ್ರಮಾಣ ಕಡಿಮೆ ಇರುವ ಕಾರಣ ಹಾಗೂ ನಗರಸಭೆ, ನಗರಪಾಲಿಕೆ ವ್ಯಾಪ್ತಿಯ ತ್ಯಾಜ್ಯ ಮಿಶ್ರಿತವಾಗುತ್ತಿದ್ದು, ಗುಣಮಟ್ಟ ಖಾತರಿ ಇರುವುದಿಲ್ಲ. ಹೀಗಾಗಿ ಸದ್ಯಕ್ಕೆ ಕನಿಷ್ಟ 20 ರಿಂದ 30 ಟನ್‌ ತ್ಯಾಜ್ಯ ಉತ್ಪಾದನೆಯಾಗುತ್ತಿರುವ ಈ ಮೂರು ಎಪಿಎಂಸಿಗಳಲ್ಲಿ ಮಾತ್ರ ಯೋಜನೆ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X