ಅಗತ್ಯತೆಯನುಸಾರ ವಿದ್ಯಾರ್ಥಿನಿಲಯಗಳ ಸ್ಥಾಪನೆಗೆ ಕ್ರಮ: ಸಚಿವ ಶಿವರಾಜ್ ತಂಗಡಗಿ

Date:

ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಗಳ ಬೇಡಿಕೆಯನುಸಾರ, ಅಗತ್ಯತೆ ಅನುಸಾರ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ಎಸ್‌ ತಂಗಡಗಿ ತಿಳಿಸಿದರು.

- Advertisement -

ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಇಂದು, ಕಳೆದ 3 ವರ್ಷಗಳಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಗೆ ಮಂಜೂರು ಮಾಡಲಾಗಿರುವ ವಸತಿ ನಿಲಯಗಳ ಬಗ್ಗೆ ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚಾಗಿ ಹಿಂದುಳಿದ ವರ್ಗಗಳ ಜನರು ವಾಸವಾಗಿದ್ದು, ಹೆಚ್ಚುವರಿಯಾಗಿ ಹಿಂದುಳಿದ ವರ್ಗಗಳ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಮಂಜೂರು ಮಾಡುವಂತೆ ವಿಧಾನಸಭಾ ಸದಸ್ಯ ದೊಡ್ಡನಗೌಡ ಹನುಮಗೌಡ ಪಾಟೀಲ ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಈ ವೇಳೆ ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 10 ಮೆಟ್ರಿಕ್ ಪೂರ್ವ ಹಾಗೂ ನಾಲ್ಕು ಮೆಟ್ರಿಕ್ ನಂತರದ ಒಟ್ಟು 14 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ಮೂರು ವರ್ಷದಲ್ಲಿ ಒಟ್ಟು 250 ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಲಯಗಳ ಬೇಡಿಕೆ ಇದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಬೇಡಿಕೆ ಹಾಗೂ ಅಗತ್ಯತೆ ಅನುಸಾರ ವಿದ್ಯಾರ್ಥಿ ನಿಲಯಗಳನ್ನು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...