ಸರೋಜಾ ದೇವಿ ಹೆಸರು ಶಾಶ್ವತವಾಗಿ ಉಳಿಸಲು ಕ್ರಮ: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಬಿ. ಸರೋಜಾ ದೇವಿ ಅವರು ಖ್ಯಾತ ನಟಿ. ಅವರ ಕಲಾಸೇವೆಗಾಗಿ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿ ಪ್ರತಿಕ್ರಿಯೆ ನೀಡಿದ ಅವರು, “ನಾವೆಲ್ಲರೂ ಇಂದು ದಕ್ಷಿಣ ಭಾರತದ ಖ್ಯಾತ ನಟಿ ಬಿ. ಸರೋಜಾದೇವಿ ಅವರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇವೆ. ಇವರು ದಕ್ಷಿಣ ಭಾರತದ ಖ್ಯಾತ ನಟರ ಜತೆ ತಲಾ 20 ರಿಂದ 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಅಪಾರವಾದ ಕೀರ್ತಿ ಸಂಪಾದಿಸಿದ್ದಾರೆ. ಇಡೀ ಕರ್ನಾಟಕ ಸರ್ಕಾರ, ದಕ್ಷಿಣ ಭಾರತದ ಕಲಾವಿದರು ಅವರಿಗೆ ಗೌರವಪೂರ್ವಕವಾಗಿ ನಮನ ಅರ್ಪಿಸುವ ಕೆಲಸ ಮಾಡಿದ್ದೇವೆ” ಎಂದು ತಿಳಿಸಿದರು.

ನನಗೂ ಸಿನಿಮಾದಲ್ಲಿ ನಟಿಸುವಂತೆ ಹೇಳಿದ್ದರು

Advertisements

“ಸರೋಜಾದೇವಿ ಅವರು ನನಗೆ ಸಣ್ಣ ವಯಸ್ಸಿನಿಂದಲೂ ಬಹಳ ಪರಿಚಯ. ನಾನು ಆರಂಭದಲ್ಲಿ ಸಚಿವನಾದಾಗ, ನನ್ನನ್ನು ಕರೆದು ನೀನು ಸಿನಿಮಾಗಳಲ್ಲಿ ನಟನೆ ಮಾಡಬೇಕು ಎಂದು ಹೇಳಿದ್ದರು. ಅವರು ನಮ್ಮ ಜಿಲ್ಲೆಯವರು. ಅವರ ಅಂತಿಮ ಸಂಸ್ಕಾರವನ್ನು ಇಲ್ಲಿ ಮಾಡುತ್ತಿದ್ದೇವೆ” ಎಂದು ಹೇಳಿದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಸಾಧನೆ ಮಾಡುತ್ತೇವೆ ಅದು ಶಾಶ್ವತವಾಗಿ ಉಳಿಯುತ್ತವೆ. ಬಹಳ ಚಿಕ್ಕ ವಯಸ್ಸಿಗೆ ಭಾರತ ಸರ್ಕಾರದ ಪದ್ಮ ವಿಭೂಷಣ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಆ ಕಾಲದಲ್ಲಿ ಆ ವಯಸ್ಸಿಗೆ ಯಾರೂ ಆ ಪ್ರಶಸ್ತಿ ಪಡೆದಿರಲಿಲ್ಲ. ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಲು ರಸ್ತೆಗಳಿಗೆ ಅವರ ಹೆಸರಿಡುವ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ನಮ್ಮ ಶಾಸಕರಾದ ಯೋಗೇಶ್ವರ್ ಅವರು ಒತ್ತಾಯ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಡಿಎ ಅಥವಾ ಪಾಲಿಕೆಯಲ್ಲಿ ಈ ವಿಚಾರ ಚರ್ಚೆ ಮಾಡಿ ಈ ಕೆಲಸ ಮಾಡುತ್ತೇವೆ” ಎಂದರು.

“ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಅವರು ಮಾಡಿರುವ ಅಪಾರವಾದ ಕಲಾ ಸೇವೆ ಅಪ್ರತಿಮವಾದುದ್ದು. ಅವರು ಎಂದಿಗೂ ಒಂದೇ ಒಂದು ವಿವಾದಕ್ಕೆ ಸಿಲುಕಲಿಲ್ಲ. ಎಲ್ಲಾ ವರ್ಗದ ಜನ ಅವರನ್ನು ಬಹಳ ಪ್ರೀತಿ, ಗೌರವದಿಂದ ಕಂಡಿದ್ದಾರೆ. ರಾಜ್ಯಕ್ಕೆ ಸಮಸ್ಯೆ ಎದುರಾದಾಗ ಅವರು ನಮ್ಮ ಜೊತೆ ನಿಂತು ರಾಜ್ಯದ ಹಿತ ಕಾಪಾಡಿದ್ದಾರೆ. ಕಲೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಿರುವುದನ್ನು ನಾವು ಸ್ಮರಿಸಬೇಕು. ಸರ್ಕಾರದ ಪರವಾಗಿ, ಈ ಜಿಲ್ಲೆಯವನಾಗಿ ಅವರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುತ್ತಿದೆ” ಎಂದು ಹೇಳಿದರು.

ಅವರ ಪ್ರತಿಮೆ ನಿರ್ಮಾಣ ಮಾಡಲಾಗುವುದೇ ಎಂದು ಕೇಳಿದಾಗ, “ಪ್ರತಿಮೆ ಮುಖ್ಯವಲ್ಲ. ಅವರ ವಿಚಾರದಲ್ಲಿ ಏನು ಮಾಡಬೇಕು ಎಂಬುದುನ್ನು ನಾವು ಚರ್ಚೆ ಮಾಡಿ ತಿಳಿಸುತ್ತೇವೆ. ಅವರ ಹೆಸರು ಉಳಿದುಕೊಳ್ಳುವಂತೆ ಏನುಬೇಕೋ ಅದನ್ನು ಮಾಡುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X