‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’ ಆರೋಪ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಉಚ್ಛಾಟಿತ ಕಾಂಗ್ರೆಸ್‌ ನಾಯಕಿ ಕೃಪಾ ಆಳ್ವ ಅವರನ್ನು ಸತತ 3ನೇ ಬಾರಿಗೆ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ, ತನಿಖೆಗೆ ಕೃಪಾ ಆಳ್ವ ಸಮರ್ಪಕವಾಗಿ ಸಹಕರಿಸುತ್ತಿಲ್ಲ. ವಿಡಿಯೋ ಚಿತ್ರೀಕರಣಕ್ಕೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್ ಅನ್ನು ಪೊಲೀಸರಿಗೆ ಹಸ್ತಾಂತರಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ತನಿಖಾ ಮೂಲಗಳು ತಿಳಿಸಿವೆ.

- Advertisement -

ಕೃಪಾ ಆಳ್ವ ಅವರನ್ನು ಮೂರು ಬಾರಿ ವಿಚಾರಣೆಗೆ ಒಳಪಡಿಸಿದರೂ, ಅವರಿಂದ ಯಾವುದೇ ಸ್ಪಷ್ಟ ಮತ್ತು ನಿಖರ ಮಾಹಿತಿ ಲಭ್ಯವಾಗುತ್ತಿಲ್ಲ. ಆದ್ದರಿಂದ, ವಿವಾದಿತ ವಿಡಿಯೋ ಚಿತ್ರೀಕರಣಕ್ಕೆ ಬಳಸಲಾದ ಮೂಲ ಮೊಬೈಲ್ ಫೋನ್ ಮತ್ತು ಪ್ರಸ್ತುತ ಅವರು ಬಳಸುತ್ತಿರುವ ಮೊಬೈಲ್ ಅನ್ನು ತಕ್ಷಣವೇ ತನಿಖಾಧಿಕಾರಿಗಳಿಗೆ ಒಪ್ಪಿಸುವಂತೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ವಶಕ್ಕೆ ಪಡೆಯಲಿರುವ ಮೊಬೈಲ್ ಫೋನ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿ, ವಿಡಿಯೋದ ನೈಜತೆಯನ್ನು ಪರಿಶೀಲಿಸಲು ಮತ್ತು ಅದರಲ್ಲಿ ಅಳಿಸಿಹಾಕಿರಬಹುದಾದ ದತ್ತಾಂಶಗಳನ್ನು ಮರಳಿ ಪಡೆಯಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆದರೆ, ಮೊಬೈಲ್ ನೀಡಲು ನಿರಾಕರಿಸುತ್ತಿರುವ ಕೃಪಾ ಆಳ್ವ, ಬುಧವಾರದಂದು ಫೋನ್ಅನ್ನು ಅಧಿಕಾರಿಗಳಿಗೆ ಒಪ್ಪಿಸುವುದಾಗಿ ಸಬೂಬು ಹೇಳುತ್ತಿದ್ದಾರೆ ಎನ್ನಲಾಗಿದೆ.

ಈ ಲೇಖನ ಓದಿದ್ದೀರಾ?: ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ವಿಚಾರಣೆಯ ವೇಳೆ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿರುವ ಕೃಪಾ ಆಳ್ವ, “ಘಟನೆ ನಡೆದ ದಿನ ನಾನು ಆ ಸ್ಥಳದಲ್ಲಿದ್ದಿದ್ದು ನಿಜ. ಆದರೆ, ಅಲ್ಲಿ ಯಾರೋ ರಹಸ್ಯವಾಗಿ ವಿಡಿಯೋ ಚಿತ್ರೀಕರಣ ಮಾಡುತ್ತಿರುವುದು ನಮ್ಮ ಗಮನಕ್ಕೇ ಬಂದಿರಲಿಲ್ಲ” ಎಂದು ವಾದಿಸಿದ್ದಾರೆ. ಅಲ್ಲೆ, ಆ ಸಂದರ್ಭದಲ್ಲಿ ತಾವು ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ಈಗಾಗಲೇ ಬದಲಾಯಿಸಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

ಈ ಅಪಾದಿತ ಸ್ಟಿಂಗ್ ಪ್ರಕರಣದಲ್ಲಿ ಕೃಪಾ ಆಳ್ವ ಸೇರಿದಂತೆ ಮೂವರು ಆರೋಪಿಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಪಡೆದಿರುವ ಆರೋಪಿಗಳನ್ನು ಪೊಲೀಸರು ಆಗ್ಗಾಗ್ಗೆ ಸಮನ್ಸ್‌ ನೀಡಿ, ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇಶದಲ್ಲಿ 1,765 ಆನೆಗಳ ಅಸಹಜ ಸಾವು, ಕರ್ನಾಟಕಕ್ಕೆ ಮೂರನೇ ಸ್ಥಾನ!

ಕಳೆದ 17 ವರ್ಷಗಳ ಅವಧಿಯಲ್ಲಿ (2009 ರಿಂದ 2026ರವರೆಗೆ) ಭಾರತದಾದ್ಯಂತ ಒಟ್ಟು...

ನಿರ್ದಿಷ್ಟ ಕ್ಷೇತ್ರಕ್ಕೆ ಮೀಸಲಾತಿ ಕೇಳುವ ಹಕ್ಕು ಯಾರಿಗೂ ಇಲ್ಲ; ಸರದಿ ಬದಲಾವಣೆ ಸರ್ಕಾರದ ಪರಮಾಧಿಕಾರ: ಸುಪ್ರೀಂ ಕೋರ್ಟ್

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಾವುದೇ ನಿರ್ದಿಷ್ಟ ಕ್ಷೇತ್ರವನ್ನು ಪರಿಶಿಷ್ಟ ಜಾತಿ (SC)...

ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ...

ಆಂಧ್ರದತ್ತ ಮುನ್ನುಗ್ಗುತ್ತಿರುವ ‘ಅಕ್ವಾನ್’ ಚಂಡಮಾರುತ: ಕರಾವಳಿಯಲ್ಲಿ 145 ಕಿ.ಮೀ ವೇಗದ ಬಿರುಗಾಳಿ ಭೀತಿ

ಆಗ್ನೇಯ ಮತ್ತು ಅದಕ್ಕೆ ಸಮೀಪದಲ್ಲಿರುವ ನೈರುತ್ಯ ಬಂಗಾಳಕೊಲ್ಲಿಯ ಭಾಗದಲ್ಲಿ ಕಳೆದ ಕೆಲವು...