ಎಂಟು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಸಚಿವ ಜಮೀರ್ ಅಹಮದ್ ಖಾನ್

Date:

ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ 7.85 ಲಕ್ಷ ವಿದ್ಯಾರ್ಥಿಗಳಿಗೆ 290 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

- Advertisement -

ಈಗಾಗಲೇ 6.25 ಲಕ್ಷ ವಿದ್ಯಾರ್ಥಿಗಳಿಗೆ ಡಿಬಿಟಿ ಮೂಲಕ 180 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, 1.60 ಲಕ್ಷ ವಿದ್ಯಾರ್ಥಿಗಳಿಗೆ 100 ಕೋಟಿ ರೂ. ಅನುದಾನ ಅಗತ್ಯ ಇರುವ ಬಗ್ಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿದ್ಯಾಸಿರಿ ಯೋಜನೆಯಡಿಯಲ್ಲಿ ಜನವರಿ ಅಂತ್ಯದವರೆಗೆ ಹಾಸ್ಟೆಲ್‌ಗಳಲ್ಲಿ 23 ಸಾವಿರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗಿದ್ದು, ಹಾಸ್ಟೆಲ್‌ನಲ್ಲಿ ಪ್ರವೇಶ ಸಿಗದ 5753 ವಿದ್ಯಾರ್ಥಿಗಳಿಗೆ ಮಾಸಿಕ 1500 ರೂ. ನಂತೆ ಹತ್ತು ತಿಂಗಳ ಮೊತ್ತ 15 ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. ಅದಕ್ಕಾಗಿ 8.63 ಕೋಟಿ ರೂ. ವೆಚ್ಚ. ಮಾಡಲಾಗಿದೆ. ಇನ್ನು 200 ವಿದ್ಯಾರ್ಥಿಗಳ ಆಧಾರ್ ಲಿಂಕ್ ಸಮಸ್ಯೆ ಇದ್ದು ಅದು ಸರಿ ಹೋದ ನಂತರ ಅವರಿಗೂ ಹಣ ವರ್ಗಾವಣೆ ಆಗಲಿದ್ದು, ಶೇ. 100 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿದಂತಾಗಲಿದೆ ಎಂದು ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ನಿರ್ದೇಶನಾಲಯಕ್ಕೆ ಪ್ರಸಕ್ತ ವರ್ಷ 2292 ಕೋಟಿ ರೂ. ನಿಗದಿಯಾಗಿ 1941 ಕೋಟಿ ರೂ. ಬಿಡುಗಡೆಯಗಿದ್ದು ಅದರಲ್ಲಿ 1608 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಶೇ. 83 ರಷ್ಟು ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 7500 ವಿದ್ಯಾರ್ಥಿಗಳಿಗೆ ಅರಿವು ಯೋಜನೆ ಹಾಗೂ ವಿದೇಶಿ ವಿದ್ಯಾಭ್ಯಾಸ ನೆರವು ಯೋಜನೆಯಡಿಯಲ್ಲಿ 92.50 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ರೀತಿ ವಕ್ಫ್ ಬೋರ್ಡ್‌ಗೆ 157 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು 125 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...