ವಕ್ಫ್ ಪ್ರಕರಣದಲ್ಲಿ ಶಾಂತಿ ಕದಡಲು ಬಿಡಲ್ಲ: ಡಾ. ಜಿ ಪರಮೇಶ್ವರ್ ಎಚ್ಚರಿಕೆ

Date:

Advertisements

ನಮ್ಮ‌ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. ಶೇ. 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಅಂದಿನ ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಚಾರ ಜಾಸ್ತಿಯಾಗಿದೆ, ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದ ಆಧಾರದ ಮೇಲೆ ನಾವು ಶೇ. 40 ರಷ್ಟು ಕಮಿಷನ್ ಆರೋಪ ಮಾಡಿದ್ದೇವೆ ಎಂದರು.

ನೋಂದಾಯಿತ ಸಂಘವು ಅಧಿಕೃತವಾಗಿ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಾಗ ನಾವು ಕೂಡ ಪಕ್ಷವಾಗಿ ಜನರ ಹಿತದೃಷ್ಟಿಯಿಂದ ಪ್ರಶ್ನೆ ಮಾಡಿದ್ದೇವೆ. ಯಾವ ಆಧಾರದ ಮೇಲೆ ಶೇ. 40 ರಷ್ಟು ಕಮಿಷನ್ ನಡೆದಿಲ್ಲ ಎನ್ನುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಜನಗಳಿಗೆ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿದ್ದೇವೆ. ಬರೀ ಈ ಆರೋಪದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ವಕ್ಫ್ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತ್ರವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೋಮುಗಲಭೆ, ಶಾಂತಿ ಹಾಳು ಮಾಡಲು ಅವರು ಏನು ಬೇಕಾದರೂ ಮಾಡಬಹುದು. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಮುಂದಕ್ಕೆ ಯಾವ ರೀತಿ ತೆಗೆದುಕೊಳ್ಳುತ್ತದೆ ಎಂದು ಈಗ ಊಹೆ ಮಾಡಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಶಾಂತಿ ಕದಡಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ರಾಷ್ಟ್ರಪತಿ ಆಡಳಿತ ಹೇರುವ ಬಿಜೆಪಿಯವರ ಪ್ರಯತ್ನದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದೆಲ್ಲ ಸಾಧ್ಯವಿಲ್ಲ. ಪೊಲೀಸ್ ಇಲಾಖೆಯು ಸಮರ್ಥವಾಗಿ ಕಳೆದ ಒಂದೂವರೆ ವರ್ಷದಿಂದ ಶಾಂತಿಯನ್ನು ಕಾಪಾಡಿಕೊಂಡು ಬಂದಿದೆ. ರಾಜ್ಯದಲ್ಲಿ ಶಾಂತಿ ಕದಡಲು ಅಥವಾ ಶಾಂತಿ ಭಂಗ ಮಾಡಲು ಪ್ರಯತ್ನಿಸಿದರೆ ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಅಷ್ಟು ಸುಲಭವಾಗಿ ಬಿಟ್ಟುಬಿಡುತ್ತೇವೆಯೇ ಎಂದು ಎಂದು ಪ್ರಶ್ನಿಸಿದ್ದಾರೆ.

ಶಾಸಕರಿಗೆ 50 ಕೋಟಿ ರೂ. ಆಮಿಷದ ಕುರಿತು ಸಿಎಂ ಆರೋಪದ ಬಗ್ಗೆ ಬಿಜೆಪಿಯವರು ದಾಖಲೆ ಕೇಳಿರುತ್ತಿರುವ ವಿಚಾರಕ್ಕೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಮಾಡಿರುವ 200 ಕೋಟಿ ರೂ. ಆರೋಪಕ್ಕೆ ದಾಖಲೆ ಕೊಟ್ಟಿದ್ದಾರೆಯೇ? 200 ಕೋಟಿ ರೂ. ಆರೋಪಕ್ಕೆ ದಾಖಲೆಗಳನ್ನು ಕೊಡಿ ಎಂದು ರಾಜ್ಯ ಬಿಜೆಪಿ ಮುಖಂಡರು ಪ್ರಧಾನಮಂತ್ರಿಯನ್ನು ಕೇಳಲಿ. ಆನಂತರ ನಾವು ದಾಖಲೆಗಳನ್ನು ಕೊಡುತ್ತೇವೆ ಎಂದು ಕುಟುಕಿದ್ದಾರೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾವಿಕಾಸ್ ಅಘಾಡಿ ಮೈತ್ರಿಕೂಟ ಗೆಲ್ಲುತ್ತದೆ. ಬಿಜೆಪಿಯವರು ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿರುವುದಕ್ಕೆ ದಾಖಲೆಗಳು ಬೇಕಲ್ಲವೇ? ಕಠಿಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಕೇಸ್ ದಾಖಲಿಸುವುದಾಗಿ ಸಿಎಂ ಹೇಳಿದ್ದಾರೆ‌. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2 ಸಾವಿರ ರೂ. ಶಕ್ತಿ ಯೋಜನೆಯಲ್ಲಿ 3.50 ಕೋಟಿ ರೂ. ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ‌. ಇದಕ್ಕೆ ಏನು ಮಾಡಿಲ್ಲ ಎಂದು ಹೇಳಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X