ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ: ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್

Date:

Advertisements

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ ,ಪ್ರತಿ ಜಿಲ್ಲೆಗಳಿಗೂ ಮಾದಕ ವಸ್ತುಗಳ ನಿಯಂತ್ರಣಕ್ಕೆ ಗುರಿ ನಿಗದಿಪಡಿಸಿ,ರಾಜ್ಯವನ್ನು ಮಾದಕ ಮುಕ್ತ ರಾಜ್ಯವನ್ನಾಗಿಸಲು ಗುರಿ ಹೊಂದಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದರು.

ಇತ್ತೀಚಿಗೆ ವಿಧಾನಸೌಧದ ಸಭಾಂಗಣದಲ್ಲಿ ನಡೆದ 6 ನೇ ರಾಜ್ಯ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,

ಡ್ರಗ್ಸ್ ತಡೆಗೆ ಸಂಬಂಧಿಸಿದ ಮಾಹಿತಿ ಕನ್ನಡದಲ್ಲಿಯೂ ಲಭ್ಯವಾಗುವಂತೆ ವೆಬ್‌ಸೈಟ್ ನವೀಕರಿಸಬೇಕು. ಬೆಳಗಾವಿ ಜಿಲ್ಲೆಯಲ್ಲಿ ಅನುಸರಿಸುತ್ತಿರುವ ಕ್ರಮವನ್ನು ಮಾದರಿಯಾಗಿಸಿಕೊಂಡು ಇತರೆ ಜಿಲ್ಲೆಗಳು ಅನುಸರಿಸಲು ಸೂಚನೆ ನೀಡಿದರು. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಯಲು ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು, ಕಸ್ಟಮ್ಸ್ ಅಧಿಕಾರಿಗಳನ್ನು ಸಮಿತಿಗೆ ಆಹ್ವಾನಿಸಲು ನಿರ್ದೇಶನ ನೀಡಿದರು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ‘ಮಾದಕಮುಕ್ತ ರಾಜ್ಯ’ ನಿರ್ಮಾಣದ ದಿಶೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದರು.

Advertisements

ಇದನ್ನು ಓದಿದ್ದೀರಾ?: ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ನೋಂದಾಯಿತವಲ್ಲದ ಔಷಧ ಕಂಪನಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು.ಎಲ್ಲ ಔಷಧ ಅಂಗಡಿಗಳ ಮುಂದೆ “ವೈದ್ಯರ ಅನುಮತಿಯಿಲ್ಲದೆ ಮಾರಾಟ ನಿಷೇಧ ” ಎಂಬ ಫಲಕ ಕಡ್ಡಾಯವಾಗಿ ಅಳವಡಿಸಲು ಕ್ರಮ ಜರುಗಿಸಬೇಕು.ವ್ಯಸನ ಮುಕ್ತ ಕೇಂದ್ರಗಳ ನಿರ್ವಹಣೆಗೆ ಸುಧಾರಿತ ಕಾರ್ಯಾಚರಣೆ ವಿಧಾನಗಳನ್ನು ( ಎಸ್ ಓ ಪಿ) ರೂಪಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಒಂದು ಕೇಂದ್ರಕ್ಕೆ ಭೇಟಿ ನೀಡಿ,ವರದಿ ಸಲ್ಲಿಸಲು ಸೂಚಿಸಿದರು.

ಹಾಸ್ಟೇಲುಗಳಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್ ಬಳಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸಿ ರಕ್ಷಿಸಬೇಕು.ಪಾಸಿಟಿವ್ ಪ್ರಕರಣಗಳ ವಿರುದ್ಧ ಕ್ರಮ ಜರುಗಿಸಬೇಕು. ಎಎನ್‌ಟಿಎಫ್ ಮಾದರಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಉಪಸಮಿತಿಗಳನ್ನು ರಚಿಸಬೇಕು.ಕೆಂಪು ಪಟ್ಟಿಯಲ್ಲಿರುವ ಔಷಧಗಳ ಮಾರಾಟ ನಿಯಂತ್ರಿಸಲು ಮೇಲ್ವಿಚಾರಣೆ ಕಾರ್ಯ ಬಲಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.

ಸೈಬರ್ ಕಮಾಂಡ್ ಘಟಕದ ನಾರ್ಕೊಟಿಕ್ಸ್ ಮತ್ತು ಸಂಘಟಿತ ಅಪರಾಧಗಳ ವಿಭಾಗದ ಡಿಜಿಪಿ ಶ್ರೀ ಪ್ರೊನಬ್ ಮೊಹಾಂತಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಶ್ರೀ ಮೊಹಮದ್ ಮೊಹಸಿನ್, ಪೊಲೀಸ್ ಅಧೀಕ್ಷಕಿ ಸವಿತಾ ಎಸ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X