ಹಠಾತ್ ಹೃದಯಾಘಾತ | ರಾಜ್ಯ ಸರ್ಕಾರಕ್ಕೆ ಸಮಿತಿಯಿಂದ ವರದಿ ಸಲ್ಲಿಕೆ

Date:

Advertisements

ರಾಜ್ಯದಲ್ಲಿ ಹಠಾತ್ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂಬುದರ ಬಗ್ಗೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.

ಹೃಯಾಘಾತದಿಂದ ರಾಜ್ಯದಲ್ಲಿ ಸರಣಿ ಸಾವಿನ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಿತ್ತು.

ಸಮಿತಿಯು ಹೃದ್ರೋಗಿಗಳನ್ನು ಅಧ್ಯಯಕ್ಕೆ ಒಳಪಡಿಸಿ ತಯಾರಿಸಿದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. 251 ರೋಗಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದ್ದು, ಮೂರು ವಯೋವರ್ಗಗಳನ್ನು ಗುರುತಿಸಿ ಅಧ್ಯಯನ ನಡೆಸಲಾಗಿದೆ.

Advertisements

ತಜ್ಞರ ವರದಿಯ ಪ್ರಕಾರ, ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. 31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಮಾಡಲಾಗಿದ್ದು, 41 ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ.

ಇವರಲ್ಲಿ 218 ಜನ ಪುರುಷರಿದ್ದು, 33 ಮಹಿಳೆಯರಿದ್ದಾರೆ. 251 ರೋಗಿಗಳಲ್ಲಿ 87 ಮಂದಿಯಲ್ಲಿ ಮಧುಮೇಹ ಕಂಡುಬಂದಿದೆ. 102 ರೋಗಿಗಳಿಗೆ ಬಿಪಿ, 35 ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇದೆ. 111 ಮಂದಿ ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೋವಿಡ್ ಸೋಂಕಿನ ಹಿನ್ನೆಲೆ ಇದೆ. ಇನ್ನುಳಿದ 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ.

ಸದ್ಯ ನ್ಯೂರಾಲಜಿಕಲ್ ಸಮಸ್ಯೆಯ ಅಧ್ಯಯನ ಬಾಕಿ ಇದ್ದು, ನಿಮ್ಹಾನ್ಸ್ ತಜ್ಞರು ವರದಿ ಕೊಟ್ಟ ಬಳಿಕ ಅಂತಿಮ ವರದಿ ಸಲ್ಲಿಕೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X