ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ, ಡಿಸಿಎಂ ಡಿ ಕೆ ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

Date:

ನಾಡಿನ ಐತಿಹಾಸಿಕ ಧಾರ್ಮಿಕ ಕೇಂದ್ರವಾದ ಕಲಬುರಗಿಯ ಸ್ವಾಜಾ ಬಂದೇ ನವಾಜ್ ದರ್ಗಾದ (ಕೆಬಿಎನ್) ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ (79) ಅವರು ನ.6ರ ಬುಧವಾರ ತಡರಾತ್ರಿ ನಿಧನರಾದರು.

- Advertisement -

ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದಾರೆ. ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯದ ಅಲ್ಲದೆ ಸಂಸ್ಥಾಪಕರಾಗಿದ್ದರು. ಕುಲಪತಿಗಳಾಗಿಯೂ ಕಾರ್ಯನಿರ್ವಹಿಸಿದ್ದರು. ಖಾಜಾ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ ‌

ಹೈದರಾಬಾದ್ ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿ ನಡೆಸಿದ ಸೂಫಿ ಸಂತರಾದ ಸೈಯದ್ ಶಹಾ ಖುಸ್ರೋ ಹುಸೇನಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

“ಸೈಯದ್ ಶಹಾ ಖುಸ್ರೋ ಹುಸೇನಿ ಅವರು ಅನೇಕ ವಿದ್ಯಾಸಂಸ್ಥೆಗಳನ್ನು ಆರಂಭಿಸಿ, ಅದರಲ್ಲೂ ಮಹಿಳೆಯರ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ ಅಕ್ಷರ ದಾಸೋಹ ಸೇವೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದ್ದರು. 1972ರಿಂದಲೇ ಕೆಬಿಎನ್‌ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಅವರು, ವೈದ್ಯಕೀಯ, ಎಂಜಿನಿಯರಿಂಗ್‌, ಬಿ.ಇಡಿ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು” ಎಂದು ಬಣ್ಣಿಸಿದ್ದಾರೆ.

“ಮಹಿಳೆಯರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದ್ದ ಸೈಯದ್ ಶಹಾ ಖುಸ್ರೋ ಹುಸೇನಿ ಮಹಿಳೆಯರಿಗಾಗಿಯೇ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಅರೇಬಿಕ್‌ ಭಾಷೆಯ ಕಾಲೇಜುಗಳನ್ನು ಪ್ರಾರಂಭಿಸಿದ್ದರು. ಧರ್ಮ ಹಾಗೂ ಸಮಾಜದ ಸೇವೆಗೆ ತಮ್ಮ ಜೀವನ ಮುಡಿಪಾಗಿಟ್ಟ ಸೈಯದ್ ಶಹಾ ಅವರ ಅಗಲಿಕೆ ತುಂಬಲಾರದ ನಷ್ಟ. ಅವರ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಬಂಧು, ಮಿತ್ರರು, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...