ಸಿಎಂ ಸಭೆ ಬಹಿಷ್ಕರಿಸಿದ ಕಬ್ಬು ಹೋರಾಟಗಾರರು, ಸರ್ಕಾರಕ್ಕೆ 24 ತಾಸುಗಳ ಗಡುವು

Date:

ಕಬ್ಬಿಗೆ ₹3,500 ದರ ನೀಡಬೇಕು ಎಂದು ಆಗ್ರಹಿಸಿ ರೈತರು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಕರೆದಿರುವ ಸಭೆಯನ್ನು ಕಬ್ಬು ಹೋರಾಟಗಾರರು ಬಹಿಷ್ಕರಿಸಿದ್ದು, ಸರ್ಕಾರಕ್ಕೆ 24 ಗಂಟೆಗಳ ಗಡುವು ನೀಡಿದ್ದಾರೆ.

- Advertisement -

ಗುರುವಾರ ಸಂಧಾನಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ರೈತರನ್ನು ಉದ್ದೇಶಿ ಮಾತನಾಡುತ್ತ, “ರೈತರ ಬಗ್ಗೆ ನನಗೂ ಕಾಳಜಿ ಇದೆ, ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಸಾಲ ಕೊಟ್ಟಿರೋದು ನಾವು. ರೈತರ ಕಾರ್ಖಾನೆ ಇರಬೇಕು ಎಂಬ ಉದ್ದೇಶ ನನ್ನದು. ರೈತರ ಕಾರ್ಖಾನೆ ಯಾವತ್ತೂ ಬಂದ್ ಮಾಡಲ್ಲ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

“ವೈಜ್ಞಾನಿಕವಾಗಿ ಎಫ್ಆರ್‌ಪಿ ಇಲ್ಲ ಎಂಬುದು ಎಷ್ಟೋ ರೈತರ ಆರೋಪವಾಗಿದೆ. ಈ ಬಗ್ಗೆ ನಾವೂ ಕೇಂದ್ರ ಸರ್ಕಾರದ ಜೊತೆ ಚರ್ಚಿಸುತ್ತೇವೆ. ಮುಖ್ಯಮಂತ್ರಿಗಳು ಕ್ಯಾಬಿನೆಟ್‌ನಲ್ಲಿ ರೈತರಿಗೆ ಏನಾದರೂ ಪರಿಹಾರ ಕೊಡಬೇಕು ಎಂದು ಹೇಳಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳನ್ನು ನಂಬಿ ತಡವಾಗಿ ಬಂದಿರುವೆ” ಎನ್ನುವ ಮೂಲಕ ಪರೋಕ್ಷವಾಗಿ ಸತೀಶ ಜಾರಕಿಹೊಳಿ‌ ವಿರುದ್ಧ ಅಸಮಾಧಾನ ಹೊರಹಾಕಿದರು.

“ಈಗಾಗಲೇ ನಿಮ್ಮನ್ನು ನಂಬಿ ಮಹಾರಾಷ್ಟ್ರದಿಂದ ಕಬ್ಬಿನ ಗ್ಯಾಂಗ್ ಬಂದಿವೆ. ಅವರ ಹೊಟ್ಟೆ ಉಪಜೀವನ ನಡೆಯುತ್ತಿಲ್ಲ. ಯೋಗ್ಯ ಬೆಲೆ ಕೊಡಿಸುತ್ತೇನೆ. ನೀವು ಕರೆಕೊಟ್ಟಿರುವ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯನ್ನು ಕೇವಲ ಒಂದು ದಿನದ ಮಟ್ಟಿಗೆ ಮುಂದೆ ಹಾಕಿ” ಎಂದು ರೈತರ ಬಳಿ ಮನವಿ ಮಾಡಿದರು.

ರೈತ ಮುಖಂಡರಾದ ಶಶಿಕಾಂತ ಪಡಸಲಗಿ, ಚೂನಪ್ಪ ಪೂಜಾರಿ ಮಾತನಾಡಿ, “ನಾಳೆ ರಾಷ್ಟ್ರೀಯ ಹೆದ್ದಾರಿ ತಡೆಯನ್ನು ಹಿಂಪಡೆದಿದ್ದೇವೆ. ಸರ್ಕಾರಕ್ಕೆ ನಾಳೆ ಒಂದು ದಿನ ಗಡುವು ಕೊಡುತ್ತೇವೆ. ನ್ಯಾಯ ಕೊಡಿಸದಿದ್ದರೆ ನಾಡಿದ್ದು ರಾಷ್ಟ್ರೀಯ ಹೆದ್ದಾರಿ ತಡೆ ಮಾಡುತ್ತೇವೆ. ಸರ್ಕಾರ ಮನವಿ ಮಾಡಿದ್ದು, ಗೌರವ ಕೊಡುತ್ತೇವೆ” ಎಂದು ಹೇಳಿದರು.

ಸಂಧಾನಕ್ಕೆ ಆಗಮಿಸುವ ವೇಳೆ ಸಚಿವ ಶಿವಾನಂದ ಪಾಟೀಲ್ ಕಾರಿಗೆ ನೀರಿನ ಬಾಟಲ್‌ ಮತ್ತು ಚಪ್ಪಲಿ ಎಸೆದ ಘಟನೆಯೂ ನಡೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...