ಸುಹಾಸ್ ಶೆಟ್ಟಿ ಮೇಲೆ 5 ಪ್ರಕರಣಗಳಿವೆ, ಅದಕ್ಕೆ ಅವರ ಮನೆಗೆ ಭೇಟಿ ನೀಡಿಲ್ಲ: ಜಿ ಪರಮೇಶ್ವರ್

Date:

ಮಂಗಳೂರಿನ ಬಜಪೆ ಬಳಿ ಹತ್ಯೆಯಾದ ಸುಹಾಸ್ ಶೆಟ್ಟಿ ಮೇಲೆ ಕೊಲೆ ಸೇರಿದಂತೆ ಐದು ಪ್ರಕರಣಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ ವಿಚಾರವಾಗಿ ಮಾತನಾಡಿದ ಅವರು, ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೆ ಕೊಲೆ ಸೇರಿ ಐದು ಪ್ರಕರಣಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗುತ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ‍್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರಾಗಿಯೆ ಬಂದು ನನ್ನ ಭೇಟಿ ಮಾಡಿದರು. ಬರೋರಿಗೆ ಬೇಡ ಅನ್ನಲಿಕ್ಕೆ ಆಗುತ್ತದೆಯೆ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎ ತನಿಖೆಗೆ ವಹಿಸಲು ಬಿಜೆಪಿ ಒತ್ತಾಯದ ಬಗ್ಗೆ ಮಾತನಾಡಿ, ಅದು ಬಿಜೆಪಿಯವರ ಅಭಿಪ್ರಾಯ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಎಂಟು ಮಂದಿಯನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. ತನಿಖೆ ಚೆನ್ನಾಗಿ ನಡೆಯುತ್ತಿದೆ ಎಂಬುದು ನಮ್ಮ ಅಭಿಪ್ರಾಯ. ಹಾಗಾಗಿ, ಈ ಪ್ರಕರಣ ಎನ್‌ಐಎಗೆ ಕೊಟ್ಟಿಲ್ಲ. ಆ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡ್ತೇವೆ. ಬಿಜೆಪಿ ಆರೋಪ ಸರಿಯಲ್ಲ, ಬಿಜೆಪಿಯವರ ಕಾಲದಲ್ಲೂ ಕೊಲೆಗಳು ಆಗಿವೆ ಎಂದು ಹೇಳಿದರು.

ನಾವು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕೊಲೆ ಆಗುತ್ತೆ ಎಂದು ಸುಳಿವು ದೊರೆತರೂ ಎಚ್ಚರಿಸಿ ತಡೆಯುವ ಕೆಲಸ ಆಗುತ್ತಿದೆ. ಕೊಲೆ ನಂತರವೂ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಎಲ್ಲ ಎಚ್ಚರಿಕೆಗಳನ್ನೂ, ಸೂಚನೆಗಳನ್ನು ಎಸ್ಪಿಗಳಿಗೆ ಕೊಟ್ಟಿದ್ದೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....