ರಾಜ್ಯಾದ್ಯಂತ ಮುಂದಿನ 7 ದಿನಗಳವರೆಗೆ ಬಿಸಿಲಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ ಎಂದು. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD) #ಕರ್ನಾಟಕ ರಾಜ್ಯದಾದ್ಯಂತ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ, ಹಾಗೂ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ಮುನ್ಸೂಚನೆ ಇದೆ pic.twitter.com/joD20VK4OC
— Karnataka State Natural Disaster Monitoring Centre (@KarnatakaSNDMC) May 29, 2026




