ಆರ್‌ಎಸ್‌ಎಸ್‌ ಕುರಿತ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಸಾಹಿತಿಗಳು, ಚಿಂತಕರು, ಹೋರಾಟಗಾರರ ಬೆಂಬಲ

Date:

‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದ ಚಟುವಟಿಕೆಗಳಿಗೆ ಅನುಮತಿ ನೀಡಬಾರದು’ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಬೆಂಬಲ ವ್ಯಕ್ತಪಡಿಸಿರುವ ನಾಡಿನ ಸಾಹಿತಿಗಳು, ಚಿಂತಕರು, ಹೋರಾಟಗಾರರು, ‘ಆರ್‌ಎಸ್‌ಎಸ್‌ ಸಂಘಟನೆ ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳಬೇಕು ಮತ್ತು ಅದರ ಎಲ್ಲ ಲೆಕ್ಕಪತ್ರಗಳ ವ್ಯವಹಾರಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

- Advertisement -

ಮಂಗಳವಾರ ಸಂಬಂಧ ಹಿರಿಯ ಸಾಹಿತಿಗಳಾದ ಡಾ.ಜಿ.ರಾಮಕೃಷ್ಣ, ಪ್ರೊ.ಕೆ.ಮರಳುಸಿದ್ಧಪ್ಪ, ಪ್ರೊ.ಎಸ್. ಜಿ.ಸಿದ್ದರಾಮಯ್ಯ, ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಸಂಸ್ಕೃತಿ ಚಿಂತಕ ಡಾ.ಬಂಜಗೆರೆ ಜಯಪ್ರಕಾಶ್, ಹೋರಾಟಗಾರರಾದ ಮಾವಳ್ಳಿ ಶಂಕರ್, ಕೆ.ಎಸ್.ವಿಮಲಾ, ಡಾ.ಮೀನಾಕ್ಷಿ ಬಾಳಿ, ಟಿ.ಸುರೇಂದ್ರ, ಬಿ.ಶ್ರೀಪಾದ ಭಟ್, ರುದ್ರಪ್ಪ ಹನಗವಾಡಿ ಜಂಟಿ ಪ್ರಕಟಣೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಸಚಿವ ಪ್ರಿಯಾಂಕ್ ಖರ್ಗೆಯವರು ಸರಕಾರ, ಮುಜರಾಯಿ ಸ್ಥಳಗಳಲ್ಲಿ, ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ಕೊಡಬಾರದು ಎಂದು ಹೇಳಿರುವುದು ಸಂವಿಧಾನದ ಆಶಯಕ್ಕೆ ಪೂರಕವಾಗಿದೆ. ಆದರೆ, ಖರ್ಗೆಯವರ ಹೇಳಿಕೆಯನ್ನು ತಿರುಚಿದ ಬಿಜೆಪಿ ಮುಖಂಡರು ‘ಆರೆಸ್ಸಸ್ ನಿಷೇಧಿಸಬೇಕು ಎಂದು ಹೇಳಿದ್ದಾರೆ’ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ಇಂತಹ ಅಪಪ್ರಚಾರವನ್ನು ಖಂಡಿಸುತ್ತೇವೆ. ಮತ್ತು ಪ್ರಿಯಾಂಕ್ ಖರ್ಗೆಯವರ ನಿಲುವನ್ನು ಬೆಂಬಲಿಸುತ್ತೇವೆ’ ಎಂದು ಅವರುಗಳು ತಿಳಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಸರಕಾರಕ್ಕೆ ಸೇರಿದ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ಕೊಡಬಾರದು ಎನ್ನುವ ಆದೇಶ ಹೊರಡಿಸಬೇಕು. ಜೊತೆಗೆ ಯಾವುದೇ ಸಂಘಟನೆ ದೊಣ್ಣೆಯೂ ಸೇರಿದಂತೆ ಯಾವುದೇ ಆಯುಧ ಹಿಡಿದು ಅಥವಾ ಹಿಂಸೆಗೆ ಪ್ರಚೋದಿಸುವ ಘೋಷಣೆ ಕೂಗುತ್ತಾ ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡಬಾರದು’ ಎಂದು ಅವರುಗಳು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...