ಜಿಪಂ ಸದಸ್ಯನ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ

Date:

ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಧಾರಾವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದೆ.

- Advertisement -

ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್‌, ಇನ್ನೊಂದು ವಾರದಲ್ಲಿ ಸಿಬಿಐ ಮುಂದೆ ಶರಣಾಗುವಂತೆ ವಿನಯ್‌ ಕುಲಕರ್ಣಿಗೆ ಸೂಚನೆ ನೀಡಿದೆ.

ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ 2021ರ ಆಗಸ್ಟ್ 11ರಂದು ಸುಪ್ರೀಂಕೋರ್ಟ್​ ವಿನಯ್ ಕುಲಕರ್ಣಿಗೆ ಜಾಮೀನು ನೀಡಿತ್ತು. ಆದರೆ, ಈ ಜಾಮೀನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಿದ್ದು, ಸಾಕ್ಷಿಗಳಿಗೆ 1 ಲಕ್ಷ ಹಣದ ಆಮಿಷ ಒಡ್ಡಿರುವುದರಿಂದ ಜಾಮೀನು ರದ್ದಿಗೆ ಮನವಿ ಮಾಡಿತ್ತು. ಇದೀಗ ಸಿಬಿಐ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್​, ವಿನಯ್​ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಜಿಕರ್‌ ಆಸ್ಪತ್ರೆ, ಅಣ್ಣಾ ವಿ ವಿ ರೀತಿ ಎಲ್ಲ ಅತ್ಯಾಚಾರ ಪ್ರಕರಣಗಳಲ್ಲೂ ತ್ವರಿತ ನ್ಯಾಯದಾನ ಅತ್ಯಗತ್ಯ

ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ತಮ್ಮ ಒಡೆತನದ ಜಿಮ್​ನಲ್ಲಿಯೇ ಜೂನ್ 15, 2016ರಲ್ಲಿ ಯೋಗೇಶ್​ ಗೌಡ ಅವರ ಕೊಲೆ ನಡೆದಿತ್ತು. ಆಗ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ಪ್ರಕರಣ ಸಂಬಂಧ ನವೆಂಬರ್ 5, 2020ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು. ಕೊಲೆ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಬಂಧನದ ಬಳಿಕ ಹಲವು ಬಾರಿ ವಿನಯ್ ಕುಲಕರ್ಣಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಧಾರವಾಡ ಹೈಕೋರ್ಟ್​ ಜಾಮೀನು ನಿರಾಕರಿಸಿತ್ತು. ಬಳಿಕ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾಯಿಸುವಂತೆ ವಿನಯ್ ಮನವಿ ಮಾಡಿದ್ದರು.

ಅಲ್ಲಿಯೂ ಜಾಮೀನು ಅರ್ಜಿ ವಜಾ ಅಗಿತ್ತು. ಕೊನೆಗೆ ಸುಪ್ರೀಂಕೋರ್ಟ್​ನಿಂದ ಆಗಸ್ಟ್​ 11ರಂದು ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಧಾರವಾಡಕ್ಕೆ ಬರಬಾರದು ಎಂದು ಷರತ್ತು ವಿಧಿಸಿ ಸುಪ್ರೀಂ ಕೋರ್ಟ್​ ಜಾಮೀನು ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...