2018ರಲ್ಲಿ ದಾಖಲಾಗಿದ್ದ ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೆಪ್ಟೆಂಬರ್ 2019ರಂದು ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಒಂದು ತಿಂಗಳ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?
ಡಿ ಕೆ ಶಿವಕುಮಾರ್ ಅವರ ದೆಹಲಿಯ ಸಫ್ಜೇರ್‌ಜಂಗ್ ಅಪಾರ್ಟ್‌ಮೆಂಟ್‌ನಲ್ಲಿ 8.59 ಕೋಟಿ ನಗದನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು.
ಆದಾಯ ತೆರಿಗೆ ಇಲಾಖೆಯ ತನಿಖೆಯ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಪಿಎಂಎಲ್‌ಎ ಪ್ರಕರಣದಡಿ ಪ್ರಕರಣ ದಾಖಲಿಸಿ ಡಿ ಕೆ ಶಿವಕುಮಾರ್‌ನನ್ನು ಬಂಧಿಸಲಾಗಿತ್ತು. ಒಂದು ತಿಂಗಳ ನಂತರ ಅಕ್ಟೋಬರ್ 3, 2019ರಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.
