BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

Date:

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಸಂಜಯ್ ಕರೋರ್ ಅವರಿದ್ದ ಪೀಠವು ಜಾಮೀನು ನೀಡಿದೆ.

- Advertisement -

ಈ ಹಿಂದೆ ವಿನಯ್ ಕುಲಕರ್ಣಿಗೆ 2021ರ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷಿಗಳಿಗೆ ಬೆದರಿಕೆ ಹಾಕಿ ಜಾಮೀನು ಷರತ್ತನ್ನು ಕುಲಕರ್ಣಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ ಸಿಬಿಐ, ಜಾಮೀನು ರದ್ದುಗೊಳಿಸುವಂತೆ ಮನವಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ವಿನಯ್ ಕುಲಕರ್ಣಿ ಅರ್ಜಿ ಮತ್ತೆ ವಜಾ; ಧಾರವಾಡಕ್ಕಿಲ್ಲ ಪ್ರವೇಶ

ಸಿಬಿಐ ಮನವಿಯಲ್ಲಿ 2025ರ ಜೂನ್‌ನಲ್ಲಿ ಸುಪ್ರೀಂ ಕೋರ್ಟ್‌ ಕುಲಕರ್ಣಿ ಜಾಮೀನು ರದ್ದುಗೊಳಿಸಿದ್ದು, ಕಳೆದ ಏಳು ತಿಂಗಳಿನಿಂದ ಕುಲಕರ್ಣಿ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್‌ ಜಾಮೀನು ಅರ್ಜಿ ವಜಾಗೊಳಿಸಿರುವ ಕಾರಣ ವಿನಯ್ ಇತ್ತೀಚೆಗೆ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗಿದ್ದರು. ಅದಾದ ಬಳಿಕ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಜಾಮೀನು ಲಭಿಸಿದೆ.

ಏನಿದು ಯೋಗಿಶ್ ಗೌಡ ಕೊಲೆ ಪ್ರಕರಣ?

2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರನ್ನು ಜಿಮ್ ಮುಂಭಾಗದಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅದರಲ್ಲಿ 15ನೇ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...