ಮುಡಾ | ಕೇಂದ್ರ & ಇ.ಡಿ ಕಪಾಳಕ್ಕೆ ಸುಪ್ರೀಂ ಕೋರ್ಟ್‌ ತಪರಾಕಿ, ತಪ್ಪಿಗಾಗಿ ಕ್ಷಮೆಯಾಚಿಸಲಿ: ಸಿದ್ದರಾಮಯ್ಯ

Date:

ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರ ಮತ್ತು ಇ.ಡಿ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

“ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ” ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

“ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇ.ಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ” ಎಂದಿದ್ದಾರೆ.

“ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿಗಳು ಹೇಳಿದ್ದಾರೆ. ’ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಡಾ | ‘ರಾಜಕೀಯ ಕದನಗಳಿಗೆ ಇ.ಡಿ ಬಳಕೆ ಏಕೆ?’: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

“ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಹಾಗೂ ಇ.ಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಹಾಗೂ ಇ.ಡಿಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ: ಮರುತನಿಖೆ ಆದೇಶಕ್ಕೆ ‘ಕೊಂದವರು ಯಾರು?’ ಆಂದೋಲನ ಸ್ವಾಗತ, ದಕ್ಷ ಎಸ್‌ಐಟಿ ರಚನೆಗೆ ಆಗ್ರಹ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಸೌಜನ್ಯಳ ಭೀಕರ ಅತ್ಯಾಚಾರ ಮತ್ತು...

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ ಶಿವಕುಮಾರ್

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಅಕ್ರಮಗಳು ಮತ್ತು ಭ್ರಷ್ಟಾಚಾರದ ಪ್ರಕರಣಗಳು ಹೆಚ್ಚಾಗುತ್ತಿರುವ...