ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಆದೇಶಕ್ಕೆ ತಾತ್ಕಾಲಿಕ ತಡೆ: ಮರು ಮತ ಎಣಿಕೆಗೆ ಸುಪ್ರೀಂ ಸೂಚನೆ

Date:

ಕೋಲಾರ ಜಿಲ್ಲೆಯ ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆಯನ್ನು ನೀಡಿದೆ. ಹಾಗೆಯೇ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

- Advertisement -

2023ರಲ್ಲಿ ನಡೆದ ಚುನಾವಣೆ ಬಳಿಕ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಲ್ಲಿ ಹೈಕೋರ್ಟ್ ಇತ್ತೀಚೆಗೆ ಮಾಲೂರು ಶಾಸಕ ನಂಜೇಗೌಡರ ಆಯ್ಕೆ ರದ್ದು ಮಾಡಿ ಆದೇಶ ಹೊರಡಿಸಿತ್ತು, ಮರು ಮತ ಎಣಿಕೆಗೂ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ನಂಜೇಗೌಡರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೋಲಾರ | ಮಾಲೂರು ಶಾಸಕರಿಗೆ ತಲೆನೋವಾದ ಹೈಕೋರ್ಟ್‌ ಆದೇಶ!

ನಂಜೇಗೌಡರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, ನಂಜೇಗೌಡರ ಆಯ್ಕೆ ರದ್ದು ಆದೇಶಕ್ಕೆ ತಾತ್ಕಾಲಿಕ ತಡೆಯನ್ನು ನೀಡಿದೆ. ಆದರೆ ಮರು ಎಣಿಕೆ ಮಾಡುವಂತೆ ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಪಾಲಿಸುವಂತೆ ಸೂಚಿಸಿದೆ. ಜೊತೆಗೆ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ (ಇಸಿಐ) ತಿಳಿಸಿದೆ.

ಹಾಗೆಯೇ ನ್ಯಾಯಾಲಯದ ಪೂರ್ವಾನುಮತಿ ಪಡೆಯದೇ ಮರು ಎಣಿಕೆಯ ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...