ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸೂರಳ್ಕರ್ ವಿಕಾಸ್ ಕಿಶೋರ್

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್‌ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರಕಾರ ಶನಿವಾರ ಸಂಜೆ ನೇಮಿಸಿದ್ದು, ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಜನ್ಮದಿನಕ್ಕೆ ಆನ್‌ಲೈನ್‌ ಮೂಲಕ ಆರ್ಡರ್‌ ಮಾಡಿದ್ದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು!

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು ಕೊಪ್ಪಳದಲ್ಲಿ ಜಿಲ್ಲಾಧಿಕಾರಿಗಳಾಗಿ, ಯಾದಗಿರಿ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಜಿಪಂ ಸಿಇಒ ಅವರಾಗಿ ಕರ್ತವ್ಯ ನಿರ್ವಹಿಸಿದ್ದರು.

ಹೇಮಂತ್ ‌ನಿಂಬಾಳ್ಕರ್ ವಿರುದ್ಧ ದೂರು ನೀಡಿದ್ದ ಬಿಜೆಪಿ

ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಅಂಜಲಿ ನಿಂಬಾಳ್ಕರ್ ಪರ ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಇದರ ಬೆನ್ನಲ್ಲೇ, ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಪತ್ರಕರ್ತ ಅರ್ಜುನ್‌ ದೇವ ನಿಧನ

ಹಿರಿಯ ಪತ್ರಕರ್ತ, ಕರ್ನಾಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರಾದ ಅರ್ಜುನ್ ದೇವ...

ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ ಪಿ ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

ವಿಧಾನ ಪರಿಷತ್ ಸ್ಥಾನಕ್ಕೆ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ...

ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ ತೀರ್ಮಾನ ಮಾಡಿ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವವರನ್ನು ತಿರಸ್ಕರಿಸಿ, ಮುಂದಿನ ಐದು ವರ್ಷದವರೆಗೆ ಯಾವ ಪಕ್ಷ ಅಧಿಕಾರದಲ್ಲಿರಬೇಕೆಂಬ...