ಸಮೀಕ್ಷೆ | ಒಕ್ಕಲಿಗ ಸಮುದಾಯದಿಂದ ಜಾಗೃತಿ ಸಭೆ, ಡಿ ಕೆ ಶಿವಕುಮಾರ್‌ ಹೆಗಲಿಗೆ ಸಮಸ್ಯೆ ನಿವಾರಣೆ ಹೊಣೆ

Date:

Advertisements

ಸೆ.22ರಿಂದ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದ ಸರ್ವಪಕ್ಷಗಳ ಮುಖಂಡರು ಬೆಂಗಳೂರಿನ ವಿಜಯನಗರದ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಜಾಗೃತಿ ಸಭೆ ನಡೆಸಿದರು.

ಸಮಾಲೋಚನೆ ಸಭೆಯಲ್ಲಿ ಶಿರಾದ ಸ್ಫಟಿಕಪುರಿ ಮಠದ ನಂಜಾವಾಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಡಿ ಕೆ ಶಿವಕುಮಾರ್, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್, ಸಚಿವರಾದ ಚಲುವರಾಯಸ್ವಾಮಿ, ಸುಧಾಕರ್, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಡಿಸಿಎಂ ಅಶ್ವಥ್ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಇನ್ನಿತರ ಮುಖಂಡರು ಭಾಗವಹಿಸಿದ್ದರು.

ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡು, “ಸಭೆಯಲ್ಲಿ ಎಲ್ಲ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ” ಎಂದು ಹೇಳಿದರು.

“ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪರೇಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ. ಈ ಸರ್ಕಾರ ಬೆಂಕಿ ಹಚ್ಚಲು ಏನ್ ಬೇಕೋ ಅದನ್ನು ಮಾಡಿದೆ. ಇದರ ಪ್ರತಿಪ್ರಲ ಮುಂದೆ ಗೊತ್ತಾಗುತ್ತದೆ. ವಾಸ್ತವಾಂಶದ ಬಗ್ಗೆ ಮಾತ್ರ ಚರ್ಚೆ ಆಗಬೇಕು” ಎಂದು ಅಗ್ರಹಿಸಿದರು.

“ಜಾತಿ ವಿಚಾರದಲ್ಲಿ ಒಕ್ಕಲಿಗರಿಗೆ ದೊಡ್ಡಮಟ್ಟದ ಪೆಟ್ಟು ಬಿದ್ದಿದೆ. ಬೆಂಗಳೂರಿನಲ್ಲಿ ಹೆಚ್ಚು ಭೂಮಿಯನ್ನು ಕಳೆದುಕೊಂಡಿದ್ದು ಒಕ್ಕಲಿಗರ ಸಮಾಜ. ಡಿ.ಕೆ ಶಿವಕುಮಾರ್ ಎಲ್ಲ ಸಮಸ್ಯೆ ಬಗೆಹರಿಸಲು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮುಂದೆ ನೋಡೋಣ, ಏನಾಗುತ್ತದೆ ಅಂತ. ಇದು ಇನ್ನೊಂದು ಕಾಂತರಾಜ್ ವರದಿ ಆಗುತ್ತಾ ಅಥವಾ ಅದಕ್ಕಿಂತಲೂ ಕೆಟ್ಟದಾಗಿ ಇರುತ್ತದಾ?” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಿಎಸ್‌ಟಿ ದರ ಇಳಿಕೆ ಲಾಭ ಗ್ರಾಹಕರಿಗೆ ದೊರೆಯಲಿ!

“ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ. ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ಎಂಬುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ? ಹಾಗಾದರೆ ಇವರು ಕಾಂತರಾಜ್ ವರದಿಯನ್ನೇ ಭಟ್ಟಿ ಇಳಿಸುತ್ತಾರ” ಕೇಂದ್ರ ಸಚಿವರು ಪ್ರಶ್ನಿಸಿದರು.

“ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ವರದಿ ಕೊಡಬೇಕು ಅಂತ ಮೂರನೇ ಆಯೋಗ ರಚನೆ ಮಾಡಿದೆ. ಮಧುಸೂದನ್ ನಾಯ್ಕ್ ಆಯೋಗ ರಚನೆ ಆಗಿದೆ. ಕೇವಲ ಹದಿನೈದು ದಿನಗಳಲ್ಲಿ ವರದಿ ಕೊಡಬೇಕು ಅಂತೆ. ಆಯೋಗ ಸ್ಟ್ಯಾಚುಟರಿ ಬಾಡಿ, ಹೀಗಾಗಿ ನಾನು ಏನು ಡೈರೆಕ್ಷನ್ ಕೊಡಲು ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಏನಾದರೂ ಬದಲಾವಣೆ ತರಲು ಪವರ್ ಇಲ್ಲ ಅಂತಾರೆ. ನಮ್ಮ ಸಮಾಜದ ಭವಿಷ್ಯಕ್ಕಾಗಿ ಹಾಗೂ ಸಮಾಜಕ್ಕೆ ಆದ ಅನ್ಯಾಯದ ಬಗ್ಗೆ ಧ್ವನಿ ಎತ್ತುವ ಸಲುವಾಗಿ ಸಭೆ ಮಾಡಿದ್ದೇವೆ. ಸ್ವಾಮೀಜಿಗಳ ಸೂಚನೆ ಮೇರೆಗೆ ಇಲ್ಲಿ ಸೇರಿದ್ದೇವೆ” ಎಂದು ಹೇಳಿದರು.

vokkaliga community 1

ಕ್ರಿಶ್ಚಿಯನ್ ಒಕ್ಕಲಿಗ ಜಾತಿಯನ್ನು ಹೇಗೆ ತೆಗೆಯುತ್ತಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ; “ಸಮಯದ ಅಭಾವ ಇದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು,ಈಗ ಏನಿದೆ ಅದನ್ನೇ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೊಬ್ಬ ಮಂತ್ರಿ ಹೇಳಿದ್ದಾರೆ, ಈಗಿನ ಆಯೋಗ ಉತ್ತಮವಾದ ಆಯೋಗವಂತೆ. ಒಳ್ಳೆಯ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ನಾನು ಆ ಮಂತ್ರಿಯನ್ನು ಕೇಳಲು ಬಯಸುತ್ತೇನೆ, ಇದು ಸತ್ಯದ ಆಯೋಗವೇ? ರಾಜ್ಯ ನೆಮ್ಮದಿಯಾಗಿ ಇದೆ. ಈ ಆಯೋಗ ಬೆಂಕಿ ಹಚ್ಚುವ ಕೆಲಸ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ಮುಂಜಾಗ್ರತೆ ಕ್ರಮವಾಗಿ ಯಾವುದೇ ಆಲೋಚನೆ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಮಯ ಮುಂದೂಡುವುದು ಮುಖ್ಯವಲ್ಲ. ವಾಸ್ತವಾಂಶದ ಪರಿಹಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಬೆಂಗಳೂರು ನಗರದ ಅಭಿವೃದ್ಧಿ ಬಗ್ಗೆ ಪದೇ ಪದೇ ಚರ್ಚೆ ಮಾಡುತ್ತೇವೆ. ಬೆಂಗಳೂರು ನಗರದ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗಾಗಿ ಎಷ್ಟು ರೈತರ ಭೂಮಿ ಬಳಕೆ ಆಗಿದೆ, ಅದರಲ್ಲಿ ಬಹುಪಾಲು ಭೂಮಿ ಕಳೆದುಕೊಂಡವರು ಒಕ್ಕಲಿಗರು. ಈಗಲೂ ಗ್ರೇಟರ್ ಬೆಂಗಳೂರು ಹೆಸರಲ್ಲಿ ನಡೆಯುತ್ತಿದೆ ಭೂಮಿಯನ್ನು ಕಿತ್ತುಕೊಳ್ಳುವುದು ನಡೆಯುತ್ತಿದೆ” ಎಂದು ದೂರಿದರು.

“ಏರ್ ಪೋರ್ಟ್ ಮಾಡುವುದಕ್ಕೆ 50 ಸಾವಿರ ಎಕರೆ ಭೂಮಿ ಬೇಕು. ಇದಕ್ಕೆ ಯಾವ ಸಮಾಜದ ಜಮೀನು ಜಾಸ್ತಿ ಹೋಗುತ್ತಿದೆ? ಬೇರೆ ಸಮಾಜಗಳ ಜನರ ಭೂಮಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಹೋಗಿರಬಹುದು. ಆದರೆ ಹೆಚ್ಚಿನ ಭೂಮಿ ಕಳೆದುಕೊಂಡಿದ್ದು ಒಕ್ಕಲಿಗರು. ಜಮೀನು ಮಾರಿ ಯಾವುದೋ ಒಂದು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆಲ್ಲ ಏನ್ ಕೊಟ್ಡಿದ್ದಾರೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ನಡೆ ನೋಡಿದರೆ ಇದು ಕಾಂತರಾಜ್ ವರದಿಗಿಂತಲೂ ಕೆಟ್ಟದಾಗಿ ಇರುತ್ತದೆ. ಈ ಬಗ್ಗೆ ಯಾವ ಸಂಶಯವೂ ಬೇಡ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X