ಸಮೀಕ್ಷೆ | ಬಿಜೆಪಿ ನಾಯಕರ ಅಂತರಂಗದ ಮನುವಾದ ಬಯಲು: ಸಿದ್ದರಾಮಯ್ಯ

Date:

“ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆ ನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

“ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ” ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು. ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು. ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿಯ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ” ಎಂದು ಟೀಕಿಸಿದ್ದಾರೆ.

“ನಮ್ಮ ಸರ್ಕಾರ ನಡೆಸುವ ಸಮೀಕ್ಷೆಯಿಂದ ಕೇವಲ ದಲಿತ, ಹಿಂದುಳಿದ ಜಾತಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸ್ಥಿತಿ-ಗತಿ ಮಾತ್ರವಲ್ಲ, ಮುಂದುವರಿದ ಜಾತಿಗಳೊಳಗಿನ ಬಡವರು ಮತ್ತು ಅವಕಾಶ ವಂಚಿತರ ಸ್ಥಿತಿಗತಿಯೂ ಗೊತ್ತಾಗಲಿದೆ. ಈ ವಾಸ್ತವಸ್ಥಿತಿ ಅರಿವಾಗುವುದು ಬಿಜೆಪಿಯವರಿಗೆ ಬೇಡವಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಪ್ರತಿಯೊಂದು ಜಾತಿ ಮತ್ತು ಧರ್ಮದೊಳಗಿನ ಉಳ್ಳವರ ಕೈಯಲ್ಲಿಯೇ ಇರಬೇಕು ಎನ್ನುವುದೇ ಅವರ ವಿರೋಧದ ಹಿಂದಿನ ದುರುದ್ದೇಶ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

“ಬಿಹಾರದಲ್ಲಿ ಇವರದ್ದೇ ಮೈತ್ರಿ ಸರ್ಕಾರ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಇದೇ ರೀತಿ ತೆಲಂಗಾಣದಲ್ಲಿಯೂ ನಡೆದಿದೆ. ಅಲ್ಲಿಯೂ ಬಿಜೆಪಿ ನಾಯಕರು ಬಾಯಿ ಮುಚ್ಚಿಕೊಂಡಿದ್ದಾರೆ. ಇವೆಲ್ಲಕ್ಕಿಂತಲೂ ಮಿಗಿಲಾಗಿ ಈಗ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಜಾತಿ ಗಣತಿ ಮಾಡಲು ಹೊರಟಿದೆ.
ಕರ್ನಾಟಕದಲ್ಲಿ ಜಾತಿಗಳನ್ನು ಪರಿಗಣಿಸಿ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರೇ, ನೀವು ಕೇಂದ್ರ ಸರ್ಕಾರದ ಜಾತಿ ಗಣತಿಯನ್ನೂ ವಿರೋಧಿಸುತ್ತೀರಾ? ಹಾಗೆ ವಿರೋಧಿಸುವುದಾದರೆ ಅದನ್ನು ಗಟ್ಟಿ ದನಿಯಲ್ಲಿ ಈಗಲೇ ಹೇಳಿಬಿಡಿ. ಪ್ರಧಾನಿಯ ಎದುರು ತಲೆ ಎತ್ತಿ ಮಾತನಾಡುವ ದಮ್ಮು-ತಾಕತ್ತು ಇಲ್ಲದ ನಿಮಗೆ ಇದನ್ನು ವಿರೋಧಿಸುವ ಧೈರ್ಯ ಇದೆಯೇ? ಯಾಕೆ ತಮ್ಮ ಮೂರ್ಖತನದ ಹೇಳಿಕೆಗಳ ಮೂಲಕ ರಾಜ್ಯದ ಪ್ರಜ್ಞಾವಂತ ಜನರ ಎದುರು ನಗೆಪಾಲಿಗೀಡಾಗುತ್ತಿದ್ದೀರಿ?” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ನಾಯಕರ ಈ ಆತ್ಮವಂಚಕ ನಡವಳಿಕೆಯನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕು. ಅವರ ರಾಜಕೀಯ ಪ್ರೇರಿತ ಠಕ್ಕುತನದ ಹೇಳಿಕೆಗಳನ್ನು ಮನೆಯ ಕಸದ ಬುಟ್ಟಿಗೆ ಎಸೆದು ಎಲ್ಲರೂ ಈಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡು ಸಂಪೂರ್ಣ ಸಹಕಾರ ನೀಡಬೇಕು. ಈ ಮೂಲಕ ನಾವೆಲ್ಲರೂ ಸೇರಿ ಸಮ ಸಮಾಜವನ್ನು ನಿರ್ಮಾಣ ಮಾಡುವ ಮೂಲಕ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನು ಮಾಡೋಣ” ಎಂದು ಕರೆ ನೀಡಿ‌ದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...