ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಅವರ ಆರೋಗ್ಯ ಉತ್ತಮವಾಗಿದೆ ಎಂದರು.

Advertisements

ರಾಜ್ಯದ ಜನತೆಗೆ ನಾಡಹಬ್ಬ ದಸರಾದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯಲಿರುವ ದಸರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾವುದಾಗಿ ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ ಹೆಚ್ಚು ಪ್ರವಾಹ
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ,ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಾಪುರ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು,ಹುಬ್ಬಳ್ಳಿ ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಕೇಂದ್ರದ ಪ್ರವಾಹ ಪರಿಹಾರ ಕೊಡಿಸಲಿ
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ, ಸುಪ್ರೀಂಕೋರ್ಟ್‌ನ ಬಳಿ ಧಾವಿಸಿ, ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸುವುದು ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿಗೆ ಮುಂದಾಗಿದೆ
ಜಾತಿ ಸಮೀಕ್ಷೆಯಿಂದ ಸಮಾಜದ ಉದ್ಧಾರ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ಸಮೀಕ್ಷೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಠವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲು ಮುಂದಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು...

Download Eedina App Android / iOS

X