ಜಾತಿ ತಾರತಮ್ಯ ನಿವಾರಣೆಗಾಗಿ ರಾಜ್ಯದ 7 ಕೋಟಿ ಜನರ ಸಮೀಕ್ಷೆ, ಸೆ.22ರಿಂದ ಆರಂಭ: ಸಿಎಂ ಸಿದ್ದರಾಮಯ್ಯ

Date:

ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲ 7ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಅವರು ಮಾತನಾಡಿ, “ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನು ಇದೆಯೇ ಇಲ್ಲವೇ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಯಬೇಕು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

“ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ 15ದಿನಗಳ ಕಾಲ ಸಮೀಕ್ಷೆ ನಡೆಸಬೇಕು. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಬೇಕು. ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಅಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು” ಎಂದು ಸೂಚಿಸಿದರು.

“ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ ಈ ಹಿಂದೆ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಿ, ಈ ಬಾರಿ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಬೇಕು. ತೆಲಂಗಾಣದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕುರಿತು ಅಧ್ಯಯನ ನಡೆಸಲು ಸಮೀಕ್ಷೆ ಕಾರ್ಯದ ಮೇಲುಸ್ತುವಾರಿಗೆ ಉನ್ನತಮಟ್ಟದ ಸಮಿತಿ ರಚಿಸಲು ತಿರ್ಮಾನ ಕೈಗೊಳ್ಳಲಾಗಿದೆ” ಎಂದರು.

“ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕು. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು. ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳಲಾಗುವುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಪೊನ್ನಣ್ಣ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...