ಉಪಚುನಾವಣೆ ನಂತರ ಮುಸ್ಲಿಂ ನಾಯಕರ ಅಮಾನತು ವಾಪಸ್: ಸತೀಶ್ ಜಾರಕಿಹೊಳಿ ಸುಳಿವು

Date:

ದಾವಣಗೆರೆ ಉಪಚುನಾವಣೆಯ ಫಲಿತಾಂಶದ ಬಳಿಕ, ಅಮಾನತುಗೊಂಡಿರುವ ಮುಸ್ಲಿಂ ನಾಯಕರ ಅಮಾನತು ಆದೇಶವನ್ನು ವಾಪಸ್ ಪಡೆಯುವ ಸಾಧ್ಯತೆಯಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದ್ದಾರೆ.

- Advertisement -

ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಜಬ್ಬಾರ್ ಸೇರಿದಂತೆ ಇತರ ನಾಯಕರ ಮೇಲಿನ ಅಮಾನತು ಕ್ರಮವು ಉಪಚುನಾವಣೆಯ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆಯನ್ನು ಒಪ್ಪಿಕೊಂಡಿದ್ದಾರೆ. ಅಲ್ಪಸಂಖ್ಯಾತ ಮತಗಳ ಮೇಲೆ ಈ ಕ್ರಮ ಖಂಡಿತವಾಗಿಯೂ ಪ್ರಭಾವ ಬೀರಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಹಿಂದೆಯೂ ಅಮಾನತುಗೊಂಡ ನಾಯಕರು ಪಕ್ಷಕ್ಕೆ ಮರಳಿದ ಉದಾಹರಣೆಗಳಿವೆ, ಜಬ್ಬಾರ್ ಅವರೂ ಮತ್ತೆ ಪಕ್ಷಕ್ಕೆ ಮರಳಬಹುದು. ಪ್ರಸ್ತುತ ಜಬ್ಬಾರ್ ಅವರನ್ನು ಹೊರತುಪಡಿಸಿ, ಬೇರೆ ಯಾವುದೇ ಮುಸ್ಲಿಂ ನಾಯಕರ ಮೇಲೆ ಕ್ರಮ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮೈಸೂರು | ಯುವಜನತೆ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು: ಡಾ. ಹೆಚ್.ವಿ. ವಾಸು

ರಾಜಕೀಯದಲ್ಲಿ ಯಾವಾಗಲೂ ಕಠಿಣ ನಿಲುವು ತಾಳಲು ಸಾಧ್ಯವಿಲ್ಲ. ಕೆಲವೊಮ್ಮೆ ಹೊಂದಾಣಿಕೆ ಮುಖ್ಯ. ಸಿಎಂ ಕೂಡ ಹಿಂದಿನಷ್ಟೇ ಕಠಿಣವಾಗಿದ್ದಾರೆ ಮತ್ತು ಪಕ್ಷದ ಶಿಸ್ತಿಗೆ ಬದ್ಧವಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ಸತೀಶ್ ಜಾರಕಿಹೊಳಿ ಅವರು ಈ ಹೇಳಿಕೆ ನೀಡುವ ಮೂಲಕ ಪಕ್ಷದಲ್ಲಿನ ಭಿನ್ನಮತವನ್ನು ಸರಿಪಡಿಸಲು ಯತ್ನಿಸಿದ್ದಾರೆ ಎನ್ನುತ್ತಿದ್ದಾರೆ ರಾಜಕೀಯ ವಿಶ್ಲೇಷಕರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...