ಲೋಕಭವನದಲ್ಲಿ 19 ನೂತನ ಸಚಿವರ ಪ್ರಮಾಣ ವಚನ; ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಬೋಧನೆ

Date:

ಲೋಕಭವನದ ಗಾಜಿನ ಮನೆಯಲ್ಲಿ ಇಂದು 19 ನೂತನ ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗೆಹ್ಲೋಟ್ ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

- Advertisement -

ನೂತನ ಸಚಿವರಾಗಿ ರುದ್ರಪ್ಪ ಲಮಾಣಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದಲಿತ ಸಮುದಾಯದ ಪ್ರಮುಖ ನಾಯಕರಾಗಿರುವ ಅವರು ಬಂಜಾರ ಸಮುದಾಯದ ಏಕೈಕ ಪ್ರತಿನಿಧಿಯಾಗಿದ್ದಾರೆ. ಈ ಹಿಂದೆ ಕೈತಪ್ಪಿದ್ದ ಸಚಿವ ಸ್ಥಾನ ಈ ಬಾರಿ ಅವರಿಗೆ ಒಲಿದಿದೆ. ಸ್ಪೀಕರ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಮುಸ್ಲಿಂ ಸಮುದಾಯದ ಪ್ರಮುಖ ನಾಯಕರಾಗಿರುವ ರಿಜ್ವಾನ್ ಅರ್ಷದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. 2019ರ ಉಪಚುನಾವಣೆಯಲ್ಲಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

ಎಸ್‌ಟಿ ಸಮುದಾಯಕ್ಕೆ ಸೇರಿದ ಟಿ. ರಘುಮೂರ್ತಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸುಧಾಕರ್ ಅವರ ನಿಧನದ ಬಳಿಕ ಚಿತ್ರದುರ್ಗ ಜಿಲ್ಲೆಗೆ ಸಚಿವ ಸ್ಥಾನ ದೊರೆತಿದೆ. ಯಾವುದೇ ಬಣದೊಂದಿಗೆ ಗುರುತಿಸಿಕೊಳ್ಳದ, ಕ್ಲೀನ್‌ ಇಮೇಜ್‌ ಹೊಂದಿರುವ ಶಾಸಕರಾಗಿ ಅವರು ಪರಿಚಿತರಾಗಿದ್ದಾರೆ.

ಉಪ್ಪಾರ ಸಮುದಾಯಕ್ಕೆ ಸೇರಿದ ಪುಟ್ಟರಂಗಶೆಟ್ಟಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಈ ಹಿಂದೆ ಸಿದ್ದು ಸಂಪುಟದಲ್ಲೂ ಸಚಿವರಾಗಿದ್ದ ಅವರು ವೃತ್ತಿಯಿಂದ ಕೃಷಿಕ ಹಾಗೂ ಉದ್ಯಮಿಯಾಗಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಗಂಗಾಧರ ಅಜ್ಜಯ್ಯ ಅವರ ಹೆಸರಿನಲ್ಲಿ ನರೇಂದ್ರ ಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹಿಂದೆ ಸಚಿವರಾಗಿದ್ದ ಅವರು ಮಳವಳ್ಳಿಯ ಪ್ರಭಾವಿ ಶಾಸಕ ಹಾಗೂ ದಲಿತ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ.

ಬಿ. ನಾಗೇಂದ್ರ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಾಲ್ಮೀಕಿ ಹಗರಣದ ಹಿನ್ನೆಲೆಯಲ್ಲಿ ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು, ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಬಳ್ಳಾರಿಯ ಪ್ರಭಾವಿ ರಾಜಕಾರಣಿಯಾಗಿರುವ ನಾಗೇಂದ್ರ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾಗಿದ್ದಾರೆ. ಎಸ್‌.ಎಸ್‌. ಮಲ್ಲಿಕಾರ್ಜುನ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರಿಗೆ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಒಲಿದಿದೆ. ಮಂಕಾಳು ವೈದ್ಯ ಅವರ ಬದಲಿಗೆ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

ಮಧು ಬಂಗಾರಪ್ಪ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈಡಿಗ ಸಮುದಾಯದ ನಾಯಕರಾಗಿರುವ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ. ಈ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಿದ್ದರು. ಲಕ್ಷ್ಮಣ ಸವದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಸಂಪುಟ ದರ್ಜೆಯ ಸಚಿವರಾದರು. ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚಲುವರಾಯಸ್ವಾಮಿ ದೇವರ ಹಾಗೂ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಡಿಕೆಶಿ ಕ್ಯಾಬಿನೆಟ್ | ಭುಗಿಲೆದ್ದ ಅಸಮಾಧಾನ: ಅತೃಪ್ತ ಶಾಸಕರಿಂದ ರಾಜೀನಾಮೆ ಬೆದರಿಕೆ; ಬೆಂಬಲಿಗರ ಪ್ರತಿಭಟನೆ!

ಬಸವರಾಜ್ ರಾಯರೆಡ್ಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ರಾಜಕಾರಣಿಯಾಗಿದ್ದಾರೆ. ಕೆ.ಎಸ್. ಬಸವಂತಪ್ಪ ಬಸವೇಶ್ವರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಹೆಚ್‌.ಸಿ. ಬಾಲಕೃಷ್ಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅಜಯ್ ಸಿಂಗ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮೂರು ಬಾರಿ ಶಾಸಕರಾಗಿರುವ ಅವರು ಪ್ರಮಾಣ ವಚನದ ಬಳಿಕ ರಾಜ್ಯಪಾಲರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಒಟ್ಟು 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಅಧಿಕೃತ ಚಾಲನೆ ದೊರೆಯಿತು.

ಗಾಯತ್ರಿ ಶಾಂತೇಗೌಡ ಅವರನ್ನು ಹೊರತುಪಡಿಸಿ ಉಳಿದ 19 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸಚಿವ ಸ್ಥಾನಕ್ಕೆ ಅವರ ಹೆಸರು ಅಂತಿಮ ಹಂತದವರೆಗೂ ಕೇಳಿಬಂದಿದ್ದರೂ, ಕೊನೆ ಕ್ಷಣದಲ್ಲಿ ಅವರಿಗೆ ಅವಕಾಶ ಕೈತಪ್ಪಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...