ಸಹಾಯಕ ಪ್ರಾಧ್ಯಾಪಕರ ನೇಮಕ | ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ನೀಡಲು ಸಚಿವ ಸುಧಾಕರ್ ಸೂಚನೆ

Date:

  • 1,242 ಸಹಾಯಕ ಪ್ರಾಧ್ಯಾಪಕರ ನೇರ ನೇಮಕಾತಿ
  • ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಕೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ತ್ವರಿತವಾಗಿ ನೇಮಕಾತಿ ಆದೇಶ ನೀಡಲು ಕ್ರಮಕೈಗೊಳ್ಳುವಂತೆ ಉನ್ನತ ಶಿಕ್ಷಣ ಇಲಾಖೆಯ
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೂಚಿಸಿದ್ದಾರೆ.

- Advertisement -

ಈ ಕುರಿತು ಪತ್ರ ಬರೆದಿರುವ ಸಚಿವರು, ಸದರಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಮೂರು ವರ್ಷಗಳು ಸಮೀಪಿಸುತ್ತಿದ್ದು ಇನ್ನು ವಿಳಂಬಕ್ಕೆ ಅವಕಾಶ ನೀಡದೇ ಆಯ್ಕೆಯಾದ ಅಭ್ಯರ್ಥಿಗಳಿಗೆ ಆದೇಶ ಹೊರಡಿಸಲು ನಿಯಮಾನುಸಾರ ಕೈಗೊಳ್ಳಬೇಕಾದ ಪೂರ್ವಭಾವಿ ಎಲ್ಲ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ 1,242 ಸಹಾಯಕ ಪ್ರಾಧ್ಯಾಪಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿತ್ತು. ಅದರಂತೆ 2021ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಿರುವುದು ಕಂಡುಬಂದಿದೆ.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರವೇನೋ ಬದಲಾಯಿತು, ಕೋಮುವಾದಿಗಳ ಅಟಾಟೋಪಗಳಿಗೆ  ಅಂಕುಶ ಯಾವಾಗ?

ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಾಲಾದ ಪ್ರಕರಣ ಬಾಕಿಯಿದ್ದು, ಈಗಾಗಲೇ ದೋಷಿಗಳನ್ನು ಗುರುತಿಸಿ ಅವರ ಮೇಲೆ ಮೊಕದ್ದಮೆ ದಾಖಲಿಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.  ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದು ಪ್ರಕರಣ ವಿಚಾರಣೆಯಲ್ಲಿದೆ.

ಇದಲ್ಲದೇ ಪ್ರಸಕ್ತ ನೇಮಕಾತಿಗೆ ಸಂಬಂಧಿಸಿದಂತೆ ಬೇರೆ ಯಾವುದೇ ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇರುವುದಿಲ್ಲವೆಂದು ಹಾಗೂ ಮೀಸಲಾತಿ ಸಂಬಂಧಪಟ್ಟ, ಪ್ರಕರಣವು ನ್ಯಾಯಾಲಯದಲ್ಲಿ ಇತ್ತೀಚೆಗೆ ಇತ್ಯರ್ಥವಾಗಿರುವುದು ತಿಳಿದುಬಂದಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳು ಸಚಿವರಿಗೆ ಹಾಗೂ ಜನಪ್ರತಿನಿಧಿಗಳಿಗೆ ಅನೇಕ ಮನವಿಗಳನ್ನು ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...