62 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ, ಡಿ.21 ತಪ್ಪದೇ ಭಾಗಿಯಾಗಿ: ದಿನೇಶ್ ಗುಂಡೂರಾವ್

Date:

ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು. ರಾಜ್ಯದ ಎಲ್ಲ ಆಸ್ಪತ್ರೆ, ಅಂಗನವಾಡಿ, ಗುಡ್ಡಗಾಡು ಪ್ರದೇಶ, ಇಟ್ಟಿಗೆ ಭಟ್ಟಿ, ಕೊಳಚೆ ಪ್ರದೇಶ, ರೈಲ್ವೆ ಸ್ಟೇಷನ್ ಮುಂತಾದ ಕಡೆಗಳಲ್ಲಿ ಆದ್ಯತೆ ಮೆರೆಗೆ ಲಸಿಕೆ ಹಾಕಲಾಗುವುದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

- Advertisement -

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, ಡಿಸೆಂಬರ್ 21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮವಿದೆ. ಎಲ್ಲ ಸರಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ನಡೆಸಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“0-5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಿಸಬೇಕು. ಮೊದಲು ಹಾಕಿಸಿದ್ದರೂ ಈ ಬಾರಿಯೂ ಎರಡು ಹನಿ ಲಸಿಕೆ ಹಾಕಿಸಬೇಕು. ಪೋಲಿಯೋ ಮುಕ್ತ ದೇಶವಾಗಿರುವ ಭಾರತ ಇದನ್ನು ಮುಂದುವರೆಸಲು ಸಾರ್ವಜನಿಕರ ಸಹಕಾರ ಅಗತ್ಯ.
ಡಿಸೆಂಬರ್ 21ರಂದು ಬೂತ್‌ಗಳಲ್ಲಿ ನಂತರ 2-3 ದಿನ ಮನೆಮನೆಗೆ ತೆರಳಿ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಸರ್ವಜನಿಕರು ಸಹಕರಿಸಬೇಕು” ಎಂದು ಮನವಿ ಮಾಡಿದರು.

“ರಾಜ್ಯದಲ್ಲಿ 33,258 ಬೂತ್‌ಗಳು, 1030 ಸಂಚಾರಿ ತಂಡಗಳು, 1096 ಟ್ರಾನ್ಸಿಟ್ ತಂಡಗಳು, 1,13,115 ಲಸಿಕಾ ಕಾರ್ಯಕರ್ತರು ಹಾಗೂ 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. Nearby Vaccination centre Karnataka ಆಪ್ ಮೂಲಕ ಹತ್ತಿರದ ಲಸಿಕಾ ಕೇಂದ್ರ ಸಂಪರ್ಕಿಸಬಹುದು. ಸಂಪೂರ್ಣ ಸುರಕ್ಷಿತವಾಗಿದ್ದು ವದಂತಿಗಳಿಗೆ ಕಿವಿಗೊಡದೆ ಮಕ್ಕಳಿಗೆ ಲಸಿಕೆ ಹಾಕಿಸಿ” ಸಚಿವರು ಕೋರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...

ಪ್ರಧಾನಿ ಮೋದಿ ವಿರುದ್ಧ ನಿಂದನೆ ಆರೋಪ: ಸಾಕ್ಷ್ಯವಿಲ್ಲವೆಂದು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂಬ...