ತೆರಿಗೆ ಅನ್ಯಾಯ | ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ: ಸಿದ್ದರಾಮಯ್ಯ ಕಿಡಿ

Date:

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಂಡಿರುವ ಅವರು, “ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಇವರೇ ಹೇಳಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

“ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಿದ್ದ ರಾಜ್ಯದ ಬಿಜೆಪಿ ನಾಯಕರು ಮತ್ತು ಸಂಸದರು ಅನ್ಯಾಯಕೋರ ಕೇಂದ್ರ ಸರ್ಕಾರವನ್ನು ಸಮರ್ಥಿಸುತ್ತಿರುವುದು ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ ಮತ್ತು ಅವಮಾನವಾಗಿದೆ” ಎಂದು ಸಿಎಂ ಹೇಳಿದ್ದಾರೆ.

ಕರ್ನಾಟಕಕ್ಕೆ ಕೇವಲ 6,310 ಕೋಟಿ ರೂಪಾಯಿ

“ಕೇಂದ್ರ ಸರ್ಕಾರ ಇತ್ತೀಚೆಗೆ ರಾಜ್ಯಗಳಿಗೆ ತೆರಿಗೆ ಮತ್ತು ಸುಂಕದ ಪಾಲಿನ ರೂಪದಲ್ಲಿ ಒಟ್ಟು 1,73,030 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ನೀಡಿರುವ ಪಾಲು ಕೇವಲ 6,310 ಕೋಟಿ ರೂಪಾಯಿ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇಕಡಾ ಐದರಷ್ಟು ಕನ್ನಡಿಗರಿದ್ದರೂ ದೇಶದ ಜಿಡಿಪಿಯಲ್ಲಿ ಕನ್ನಡಿಗರ ಪಾಲಿನ ಪ್ರಮಾಣ ಶೇಕಡಾ 8.4 ಆಗಿದೆ. ಅತೀ ಹೆಚ್ಚು ಜಿಎಸ್‌ಟಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ‍್ಥಾನದಲ್ಲಿದೆ. ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 17ರಷ್ಟು ಹೆಚ್ಚಾಗುತ್ತಿದೆ. ಹೀಗಿದ್ದರೂ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬರಲಾಗುತ್ತಿದೆ. ಈ ಅನ್ಯಾಯ ಯಾಕೆ” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ.

“2018-19ರಲ್ಲಿ 24.42 ಲಕ್ಷ ಕೋಟಿ ರೂ.ಗಳಷ್ಟಿದ್ದ ಕೇಂದ್ರದ ಬಜೆಟ್ ಗಾತ್ರ, 2024-25ರಲ್ಲಿ 46.28 ಲಕ್ಷ ಕೋಟಿ ರೂ.ಗಳಷ್ಟಾಗಿದೆ. 2018-19ರಲ್ಲಿ ಕರ್ನಾಟಕಕ್ಕೆ ನೀಡಿರುವ ತೆರಿಗೆ ಪಾಲು 46,288 ಕೋಟಿ ರೂ.ಗಳಾಗಿದ್ದರೆ, 2024-25ರಲ್ಲಿ ಇದು 44,485 ಕೋಟಿ ರೂ. ಮಾತ್ರ. ಅಂದರೆ ಆರು ವರ್ಷಗಳ ಅವಧಿಯಲ್ಲಿ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ಕರ್ನಾಟಕದ ತೆರಿಗೆ ಪಾಲು 15,299 ರೂಪಾಯಿಗಳಷ್ಟು ಮಾತ್ರ ಹೆಚ್ಚಾಗಿದೆ. ಈ ತೆರಿಗೆ ಪಾಲು ಕನಿಷ್ಠ ಒಂದು ಲಕ್ಷ ಕೋಟಿ ರೂಪಾಯಿಗಳಷ್ಟಾದರೂ ಆಗಬೇಕಿತ್ತಲ್ಲವೇ” ಎಂದು ಕೇಳಿದ್ದಾರೆ.

ಕೇಂದ್ರಕ್ಕೆ ಒಂದು ರೂಪಾಯಿ ಕೊಟ್ಟರೆ ಕೇವಲ 13 ಪೈಸೆ ಮಾತ್ರ ವಾಪ‌ಸ್‌

“ಕರ್ನಾಟಕದ ಜನತೆ ತೆರಿಗೆ ಮತ್ತು ಸುಂಕದ ಮೂಲಕ ಪ್ರತಿವರ್ಷ ನಾಲ್ಕುವರೆ ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರದ ಬೊಕ್ಕಸಕ್ಕೆ ನೀಡುತ್ತಿದೆ. ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ತೆರಿಗೆ ಪಾಲಿನ ರೂಪದಲ್ಲಿ 45,000 ಕೋಟಿ ರೂ. ಮತ್ತು ಅನುದಾನವಾಗಿ 15,000 ಕೋಟಿ ರೂ. ನೀಡುತ್ತಿದೆ. ಅಂದರೆ ನಾವು ನೀಡುತ್ತಿರುವ ಒಂದು ರೂಪಾಯಿಗೆ ಕೇವಲ 13 ಪೈಸೆಯಷ್ಟು ಮಾತ್ರ ವಾಪಸು ನೀಡುತ್ತಿದೆ. ತೆರಿಗೆ ಹಂಚಿಕೆ ಮಾಡುವಾಗಲೂ ‘’ಬಿಮಾರು’’ ರಾಜ್ಯಗಳೆಂಬ ಅಪಖ್ಯಾತಿಗೀಡಾಗಿರುವ ಬಿಹಾರ (17,403 ಕೋಟಿ ರೂ.), ಮಧ್ಯಪ್ರದೇಶ (13,582 ಕೋಟಿ ರೂ.), ರಾಜಸ್ತಾನ (10,426 ಕೋಟಿ ರೂ.) ಮತ್ತು ಉತ್ತರಪ್ರದೇಶಕ್ಕೆ (31,099 ಕೋಟಿ ರೂ.) ತೆರಿಗೆ ಪಾಲನ್ನು ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕೇವಲ 6,310 ಕೋಟಿ ರೂ. ನೀಡಿದೆ. ಇದು ಉತ್ತಮ ಆಡಳಿತ, ಸುಸ್ಥಿರ ಅಭಿವೃದ್ದಿ ಮತ್ತು ಜಿಎಸ್‌ಟಿ ಸಂಗ್ರಹದಲ್ಲಿ ಮಾಡಿರುವ ಸಾಧನೆಗಾಗಿ ಕರ್ನಾಟಕಕ್ಕೆ ನೀಡಿರುವ ಶಿಕ್ಷೆಯೇ? ಕನ್ನಡಿಗರ ಬೆವರ ಗಳಿಕೆಯ ತೆರಿಗೆ ಹಣ ಭ್ರಷ್ಟ ರಾಜ್ಯಗಳ ಬೊಕ್ಕಸ ತುಂಬಲು ಯಾಕೆ ಬಳಕೆಯಾಗಬೇಕು” ಎಂದು ಸರಣಿ ಪ್ರಶ್ನೆಗಳನ್ನು ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ.

ಪ್ರತಿಭಟನೆ 22

ತೆರಿಗೆ ಪಾಲು ಶೇ.4.73ರಿಂದ ಶೇ.3.64ಕ್ಕೆ ಇಳಿಕೆ

“ಹದಿನೈದನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲನ್ನು ಶೇ.4.73ರಿಂದ ಶೇ.3.64ಕ್ಕೆ ಇಳಿಸಿದೆ. ಇದರಿಂದ ಕಳೆದ ಐದು ವರ್ಷಗಳಲ್ಲಿ 79,770 ಕೋಟಿ ರೂಪಾಯಿಯನ್ನು ಕರ್ನಾಟಕ ಕಳೆದುಕೊಂಡಿದೆ. ಈ ಅನ್ಯಾಯಕ್ಕೆ ಪರಿಹಾರವಾಗಿ 5,495 ಕೋಟಿ ರೂ. ವಿಶೇಷ ಅನುದಾನ ನೀಡಬೇಕೆಂಬ ಹಣಕಾಸು ಆಯೋಗದ ಶಿಫಾರಸನ್ನು ಕೂಡಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರಸ್ಕರಿಸಿ ಕರ್ನಾಟಕಕ್ಕೆ ಅನ್ಯಾಯ ಎಸಗಿದ್ದಾರೆ” ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

“ಕರ್ನಾಟಕದ ಪ್ರಾಮಾಣಿಕ ತೆರಿಗೆದಾರರಿಗೆ ಮಾಡಿರುವ ಘೋರ ಅನ್ಯಾಯ ಇದು. ಈ ಅನ್ಯಾಯವನ್ನು ಖಂಡಿಸಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ನಿರ್ಲಜ್ಜರಾಗಿ ಸಮರ್ಥಿಸುತ್ತಿರುವುದು ಕನ್ನಡಿಗರಿಗೆ ಬಗೆಯುತ್ತಿರುವ ದ್ರೋಹವಾಗಿದೆ. ಇವರ ಆರ್ಭಟವೇನಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡಲು ಮತ್ತು ಬೀದಿಗಳಲ್ಲಿ ಪರಸ್ಪರ ಕಚ್ಚಾಡಲು ಸೀಮಿತವಾಗಿದೆ” ಎಂದು ಟೀಕಿಸಿದ್ದಾರೆ.

“ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ನ್ಯಾಯ ಕೇಳುವ ಕನಿಷ್ಠ ಧೈರ್ಯವೂ ಇಲ್ಲದೆ ದೆಹಲಿ ಸರ್ಕಾರದ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ಜನದ್ರೋಹಿಗಳಾದಾಗ ಅವರನ್ನು ಜನರೇ ವಿಚಾರಿಸಿಕೊಳ್ಳಬೇಕಾಗುತ್ತದೆ. ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಕನ್ನಡಿಗರೆಲ್ಲರೂ ಜಾತಿ, ಧರ್ಮ, ಪಕ್ಷ ಪಂಥಗಳನ್ನು ಮೀರಿ ದನಿ ಎತ್ತಬೇಕಾಗಿದೆ. ಇಂತಹದ್ದೊಂದು ಸಂಕಲ್ಪವನ್ನು ಸಂಕ್ರಮಣದ ಶುಭದಿನದಂದು ಪ್ರತಿಯೊಬ್ಬ ಕನ್ನಡಿಗರು ಕೈಗೊಂಡು ಕರ್ನಾಟಕವನ್ನು ಅನ್ಯಾಯ ಮತ್ತು ಅವಮಾನದಿಂದ ರಕ್ಷಿಸಬೇಕಾಗಿದೆ” ಎಂದು ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಹಿಂದೆ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸಚಿವರು, ಶಾಸಕರು, ಸಂಸದರು ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ಖಂಡಿಸಿ 2024ರ ಫೆಬ್ರವರಿಯಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ದೆಹಲಿ ಚಲೋ, ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಘೋಷವಾಕ್ಯದಡಿ ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ಪಾಲಿಗಾಗಿ ಒತ್ತಾಯಿಸಿದ್ದನ್ನು ಇಲ್ಲಿ ಗಮನಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...