ಶಿಕ್ಷಕರ ನೇಮಕಾತಿ: ಉರ್ದು, ಮರಾಠಿ, ಹಿಂದಿ ಮಾಧ್ಯಮ ಹುದ್ದೆಗಳ ಸೇರ್ಪಡೆಗೆ ಎಸ್‌ಐಒ ಆಗ್ರಹ

Date:

ಪ್ರಸ್ತುತ ನಡೆಯುತ್ತಿರುವ 2026ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಭಾಷಾ ಅಲ್ಪಸಂಖ್ಯಾತ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (ಎಸ್‌ಐಒ) ಕರ್ನಾಟಕ ಶಾಖೆಯು, ಈ ಕೂಡಲೇ ಆ ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆಯಲ್ಲಿ ಸೇರ್ಪಡೆಗೊಳಿಸುವಂತೆ ಆಗ್ರಹಿಸಿದೆ.

- Advertisement -

​ಈ ಸಂಬಂಧ ಎಸ್‌ಐಒ ಸಂಘಟನೆಯ ನಿಯೋಗವು ಸೋಮವಾರ ಶಾಲಾ ಶಿಕ್ಷಣ ಸಚಿವರು ಹಾಗೂ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿಯಾಗಿ ವಿಸ್ತೃತ ಮನವಿ ಪತ್ರ ಸಲ್ಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

​ಶಿಕ್ಷಕರ ನೇಮಕಾತಿ ಅಧಿಸೂಚನೆಯನ್ನು ಕೇವಲ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಿಗೆ ಮಾತ್ರ ಸೀಮಿತಗೊಳಿಸಿ ಹೊರಡಿಸಲಾಗಿದೆ. ಇದರಿಂದ ರಾಜ್ಯಾದ್ಯಂತ ಇರುವ ಸಾವಿರಾರು ಉರ್ದು, ಮರಾಠಿ ಮತ್ತು ಹಿಂದಿ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಹೊರಗಿಟ್ಟಂತಾಗಿದೆ. 2024–25ರ ಶಾಲಾ ಶಿಕ್ಷಣ ಇಲಾಖೆಯ ದತ್ತಾಂಶದ ಪ್ರಕಾರವೇ, ರಾಜ್ಯದಲ್ಲಿ ಕಿರಿಯ, ಹಿರಿಯ, ಪ್ರೌಢ ಹಾಗೂ ಸಂಯೋಜಿತ ಮಟ್ಟದಲ್ಲಿ ಬರೋಬ್ಬರಿ 3,934 ಉರ್ದು ಮಾಧ್ಯಮ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.

ಇವುಗಳನ್ನು ನೇಮಕಾತಿಯಿಂದ ಹೊರಗಿಟ್ಟಿರುವುದು ಸಂವಿಧಾನದ ವಿಧಿ 21A ಅಡಿಯಲ್ಲಿ ಮಕ್ಕಳಿಗೆ ಸಿಗಬೇಕಾದ ಸಮಾನ ಹಾಗೂ ಗುಣಮಟ್ಟದ ಶಿಕ್ಷಣದ ಹಕ್ಕಿನ ಕಸಿಯುವಿಕೆಯಾಗಿದೆ. ಅಲ್ಲದೆ, ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE) 2009ರ ಶಾಸನಬದ್ಧ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ನಿಯೋಗವು ಸರ್ಕಾರದ ಗಮನಕ್ಕೆ ತಂದಿದೆ.

​ಇದರ ಜೊತೆಗೆ, ಪ್ರೌಢಶಾಲೆಗಳಲ್ಲಿ ದೀರ್ಘಕಾಲದಿಂದ ಗಣಿತ ಸಹಶಿಕ್ಷಕರ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ಇದರಿಂದಾಗಿ ಮಾಧ್ಯಮಿಕ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಲ್ಲಿ ತೀವ್ರ ಕಲಿಕಾ ಕೊರತೆ ಉಂಟಾಗುತ್ತಿದೆ ಎಂಬುದನ್ನು ಸಂಘಟನೆಯು ವಿವರಿಸಿದೆ.

​ನಿಯೋಗದ ಪ್ರಮುಖ ಬೇಡಿಕೆಗಳು:
ರಾಜ್ಯದ ಎಲ್ಲಾ ಭಾಷಾ ಅಲ್ಪಸಂಖ್ಯಾತ ಸರ್ಕಾರಿ ಶಾಲೆಗಳ ಜಿಲ್ಲಾವಾರು, ವಿಷಯವಾರು ಮತ್ತು ಮಾಧ್ಯಮವಾರು ಖಾಲಿ ಹುದ್ದೆಗಳ ನಿಖರ ವಿವರವನ್ನು ತಕ್ಷಣವೇ ಪಡೆದುಕೊಳ್ಳಬೇಕು. ಪ್ರಸ್ತುತ ನಡೆಯುತ್ತಿರುವ ಜಿಪಿಎಸ್‌ಟಿಆರ್ (GPSTR) ಮತ್ತು ಪ್ರೌಢಶಾಲಾ ಸಹಶಿಕ್ಷಕರ ನೇಮಕಾತಿಯಲ್ಲಿ ಉರ್ದು, ಮರಾಠಿ ಮತ್ತು ಹಿಂದಿ ಮಾಧ್ಯಮದ ಎಲ್ಲಾ ಅರ್ಹ ಖಾಲಿ ಹುದ್ದೆಗಳನ್ನು ಅಧಿಕೃತವಾಗಿ ಅಧಿಸೂಚಿಸಬೇಕು. ಆಯ್ಕೆ ಪ್ರಕ್ರಿಯೆ ಮುಂದುವರಿಯುವ ಮುನ್ನವೇ ಈ ನ್ಯೂನತೆಗಳನ್ನು ಸರಿಪಡಿಸಿ ಪೂರಕ ಅಥವಾ ತಿದ್ದುಪಡಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಲಾಗಿದೆ.

​ಹಾಗೆಯೇ, ಉರ್ದು ಮಾಧ್ಯಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿಷಯ ಪರೀಕ್ಷೆಯನ್ನು (ಪತ್ರಿಕೆ-2) ಉರ್ದು ಮಾಧ್ಯಮದಲ್ಲೇ ಬರೆಯಲು ಅವಕಾಶ ಕಲ್ಪಿಸಬೇಕು. ಬಾಕಿ ಉಳಿದಿರುವ ಪ್ರೌಢಶಾಲಾ ಗಣಿತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ, 2026ರ ನೇಮಕಾತಿ ಅಭ್ಯರ್ಥಿಗಳಿಗೆ ವಿಶೇಷ ರಿಯಾಯಿತಿಯಾಗಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಎಂದು ಎಸ್‌ಐಒ ಒತ್ತಾಯಿಸಿದೆ.

​ಮನವಿ ಆಲಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ನಿಯೋಗವು ಎತ್ತಿರುವ ಈ ಗಂಭೀರ ಸಮಸ್ಯೆಗಳನ್ನು ವಿವರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಎಸ್‌ಐಒ ಕರ್ನಾಟಕದ ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ ಮೊಹಮ್ಮದ್ ಹಯ್ಯನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...