ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ ಕಡ್ಡಾಯವಾಗಬೇಕು: ಹೆಚ್ ಡಿ ಕುಮಾರಸ್ವಾಮಿ

Date:

ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.

- Advertisement -

ಈ ಬಗ್ಗೆ ಸಚಿವ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, “ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ” ಎಂದು ಸಚಿವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುಧೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ” ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

“ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುಧೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು ಮತ್ತು ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು” ಎಂಬುದನ್ನು ಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

“ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶವನ್ನು ನೀಡಿತು ಎಂದಿರುವ ಸಚಿವ ಕುಮಾರಸ್ವಾಮಿ ಅವರು; ಈ ಸಂದರ್ಭದಲ್ಲಿ, ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದರು” ಎಂದು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದಾರೆ.

“ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ, ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ ಮತ್ತು ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ. ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತದ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕು” ಎಂದು ಕೋರಿದ್ದಾರೆ.

ಪುಟಿನ್ ಅವರಿಗೆ ಭಗವದ್ಗೀತೆ; ಪ್ರಧಾನಿಗಳಿಗೆ ಅಭಿನಂದನೆ

ಭಾರತ ಪ್ರವಾಸಕ್ಕೆ ಭೀತಿ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿದ್ದಾರೆ.

ರಷ್ಯಾದ ಅಧ್ಯಕ್ಷರಾದ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥ ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿರುವುದು ಅತ್ಯಂತ ಶ್ಲಾಘನೀಯ. ಭಾರತದ ಶ್ರೇಷ್ಠ ಪರಂಪರೆ ಮತ್ತು ನಮ್ಮ ಪುರಾಣದ ಹೆಗ್ಗುರುತುಗಳನ್ನು ಮತ್ತಷ್ಟು ಎತ್ತರಕ್ಕೇರಿಸಿ ಸಾರ್ವಕಾಲಿಕಗೊಳಿಸುವ ನಿಟ್ಟಿನಲ್ಲಿ ಪ್ರಧಾನಿಗಳ ದೃಷ್ಟಿಕೋನವು ನಮಗೆಲ್ಲರಿಗೂ ಅನುಕರಣೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನುಕುಲದ ದಾರಿದೀಪ, ಅರಿವಿನ ಬೆಳಕಾಗಿರುವ ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ, ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ನನ್ನ ಆಶಯ. ಈ ಬಗ್ಗೆ ಅಗತ್ಯ ಕ್ರಮ ವಹಿಸುವ ಬಗ್ಗೆ ನಾನು ಕೇಂದ್ರದ ಶಿಕ್ಷಣ ಮಂತ್ರಿಗಳಾದ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ವಿನಂತಿಸಿದ್ದೇನೆ. ಹಾಗೆಯೇ ನಮ್ಮ ನೆಲದ ಅನರ್ಘ್ಯ ಸಂಪತ್ತು ಶ್ರೀ ವಾಲ್ಮೀಕಿ ವಿರಚಿತ ರಾಮಾಯಣ ಮತ್ತು ಶ್ರೀ ವ್ಯಾಸ ವಿರಚಿತ ಮಹಾಭಾರತ ಮಹಾಕಾವ್ಯಗಳನ್ನು ಮಕ್ಕಳಿಗೆ ಬೋಧನೆ ಮಾಡುವುದು ಅಗತ್ಯ ಎಂದು ಅವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...