ತೆಲಂಗಾಣ ಚುನಾವಣೆ | ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ: ಸಿದ್ದರಾಮಯ್ಯ

Date:

  • ಮೋದಿ ಸೇರಿದಂತೆ ಬಿಜೆಪಿ ನಾಯಕರೆಲ್ಲರಿಗೂ ಸೋಲಿನ ಭೀತಿ ಕಾಡುತ್ತಿದೆ
  • ವಚನಬದ್ದ ಮತ್ತು ವಚನಭ್ರಷ್ಟರ ನಡುವಿನ ಕಾಳಗ ತೆಲಂಗಾಣ ಚುನಾವಣೆ 

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದಿಕೊಂಡಿದ್ದು, “ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದಂತೆ ಬಿಜೆಪಿ ನಾಯಕರೆಲ್ಲರೂ ಸೋಲಿನ ಭೀತಿಗೀಡಾಗಿದ್ದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆಯ ಪ್ರಚಾರವನ್ನು ತಡೆಯಲು ಹತಾಶ ಪ್ರಯತ್ನ ನಡೆಸಿದ್ದಾರೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

“ತೆಲಂಗಾಣ ಚುನಾವಣೆ ಎನ್ನುವುದು ವಚನಬದ್ದ ಕಾಂಗ್ರೆಸ್ ಮತ್ತು ವಚನಭ್ರಷ್ಟ ಬಿಜೆಪಿ ನಡುವಿನ ಸಮರ ಮಾತ್ರವಲ್ಲ, ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿಯ ಸುಳ್ಳುಗಳ ನಡುವಿನ ಸಂಘರ್ಷವೂ ಆಗಿದೆ. ಒಂಬತ್ತುವರೆ ವರ್ಷಗಳ ಅವಧಿಯ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯ ಶೇಕಡಾ ಹತ್ತರಷ್ಟು ಭರವಸೆಗಳನ್ನು ಕೂಡಾ ಈಡೇರಿಸಿಲ್ಲ ಎನ್ನುವುದು ಅಲ್ಲಿನ ಮತದಾರರಿಗೆ ಅರಿವಾಗಿದೆ. ಇದರಿಂದ ಅಲ್ಲಿ ಪ್ರಧಾನಿ ಮೋದಿಯವರ ಪ್ರಚಾರದಿಂದ ಆ ಪಕ್ಷಕ್ಕೆ ನಷ್ವವೇ ಹೊರತು ಲಾಭ ಇಲ್ಲ” ಎಂದಿದ್ದಾರೆ.

“ನುಡಿದಂತೆ ನಡೆದ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಬದ್ಧತೆಯಿಂದ ತೆಲಂಗಾಣದ ಕಾಂಗ್ರೆಸ್ ಪಕ್ಷದ ಭರವಸೆಗಳನ್ನು ಅಲ್ಲಿನ ಮತದಾರರು ನಂಬುವಂತಾಗಿದೆ. ಇದರಿಂದ ತೆಲಂಗಾಣದ ಮತದಾರರ ವಿಶ್ವಾಸಾರ್ಹತೆಯನ್ನು ನಮ್ಮ ಪಕ್ಷ ಗಳಿಸಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಕರ್ನಾಟಕದವರೇ ಆಗಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣಗಳಲ್ಲಿ ‘ಕರ್ನಾಟಕ ಮಾದರಿ’ ಆಡಳಿತವನ್ನು ಉಲ್ಲೇಖಿಸಿ ಮತದಾರರನ್ನು ಸೆಳೆಯತೊಡಗಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

“2013-18 ರ ಅವಧಿಯ ನಮ್ಮ ಹಿಂದಿನ ಸರ್ಕಾರ ಮತ್ತು ಆರು ತಿಂಗಳ ಅವಧಿಯ ಸರ್ಕಾರದ ಸಾಧನೆಗಳನ್ನು ಆ ರಾಜ್ಯದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮನೆಮನೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಮರೆತುಬಿಟ್ಟಿರುವ ರಾಜ್ಯದಲ್ಲಿ ಬಿಆರ್ ಎಸ್ ಪಕ್ಷ ಮತ್ತು ಕಳೆದೆರಡು ಲೋಕಸಭಾ ಚುನಾವಣೆಗಳಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎದುರಲ್ಲಿ ತೆಲಂಗಾಣದ ಮತದಾರರಿಗೆ ಕಾಂಗ್ರೆಸ್ ಪಕ್ಷ ಭರವಸೆಯ ಆಶಾಕಿರಣದಂತೆ ಕಾಣಿಸುತ್ತಿರುವ ಕಾರಣದಿಂದಾಗಿಯೇ ಕಾಂಗ್ರೆಸ್ ಪಕ್ಷದ ಪರವಾದ ಅಲೆ ಎದ್ದಿದೆ” ಎಂದು ಹೇಳಿದ್ದಾರೆ.

“ನರೇಂದ್ರ ಮೋದಿಯವರ ಜನಪ್ರಿಯತೆಯ ಎಕ್ಸ್ ಪೈರಿ ಡೇಟ್ ಮುಗಿದಿದೆ. ಇದು ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ತೆಲಂಗಾಣ ಸೇರಿದಂತೆ ಪಂಚರಾಜ್ಯ ಚುನಾವಣೆಗಳಲ್ಲಿ ಮರುಸಾಬೀತಾಗಲಿದೆ. ತಮ್ಮ ನಾಯಕತ್ವಕ್ಕೆ ಅಡ್ಡಗಾಲು ಆಗಬಾರದೆಂಬ ದುರುದ್ದೇಶದಿಂದ ಬಿಜೆಪಿಯಲ್ಲಿರುವ ಪ್ರಾದೇಶಿಕ ನಾಯಕರನ್ನೆಲ್ಲ ನರೇಂದ್ರಮೋದಿ ಮತ್ತು ಅಮಿತ್ ಶಾ ಜೋಡಿ ತುಳಿದುಹಾಕಿರುವುದರಿಂದ ಯಾವ ರಾಜ್ಯದಲ್ಲಿಯೂ ಜನತೆ ನಂಬಿಕೆ ಇಡಬಲ್ಲಂತಹ ಯಾವ ಸ್ಥಳೀಯ ನಾಯಕರು ಇಲ್ಲದಾಗಿದೆ” ಎಂದಿದ್ದಾರೆ.

“ಪ್ರತ್ಯೇಕ ರಾಜ್ಯವಾಗಿ ತೆಲಂಗಾಣ ರೂಪುಗೊಳ್ಳಲು ಕಾಂಗ್ರೆಸ್ ಕಾರಣ ಎನ್ನುವುದನ್ನು ಆ ರಾಜ್ಯದ ಮತದಾರರು ವಿಳಂಬವಾಗಿಯಾದರೂ ಅರ್ಥ ಮಾಡಿಕೊಂಡಿದ್ದಾರೆ. ಪ್ರಾದೇಶಿಕ ಆಶೋತ್ತರದ ಹೆಸರಲ್ಲಿ ಜನರನ್ನು ಮರುಳು ಮಾಡುತ್ತಾ ಬಂದಿರುವ ಬಿಆರ್ ಎಸ್ ಪಕ್ಷದ ನಾಟಕ ಅಲ್ಲಿನ ಮತದಾರರಿಗೆ ಅರಿವಾಗಿದೆ. ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಮಿತಿಮೀರಿದ ಭ್ರಷ್ಟಾಚಾರದಿಂದಾಗಿ ಬಿಆರ್‌ಎಸ್ ಪಕ್ಷ ಜನತೆಯ ವಿಶ್ವಾಸವನ್ನು ಸಂಪೂರ್ಣ ಕಳೆದುಕೊಂಡಿದೆ. ಬಿಜೆಪಿ ಮತ್ತು ಬಿಆರ್ ಎಸ್ ಎರಡೂ ಪಕ್ಷಗಳನ್ನು ಹಿಂದಕ್ಕಟ್ಟಿ ಮುಂದೋಡುತ್ತಿರುವ ಕಾಂಗ್ರೆಸ್ ಪಕ್ಷ ಅಚ್ಚರಿಯ ಗೆಲುವನ್ನು ದಾಖಲಿಸಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...